ಸಿಎಂ ಸಿದ್ದರಾಮಯ್ಯ ಬೀದಿಯಲ್ಲಿ ನಿಂತು ಕೇಂದ್ರಕ್ಕೆ ಪತ್ರ ಬರೆಯುವ ಬೃಹನ್ನಳೆ ನಾಟಕವಾಡುತ್ತಿದ್ದಾರೆ: ಬಿಜೆಪಿ

BJP Slams CM Siddaramaiah: ಎಲ್ಲದಕ್ಕೂ ಕೇಂದ್ರ ಸರ್ಕಾರದ ಮೇಲೆ ಬೊಟ್ಟು ಮಾಡುತ್ತಾ ಪತ್ರ ಬರೆಯುತ್ತೇನೆ ಎನ್ನುತ್ತಾ ಕಾಲ ಕಳೆಯುತ್ತಿರುವ ನೀವು ಮುಖ್ಯಮಂತ್ರಿ ಆಗಿರುವುದು ಯಾವ ಪುರುಷಾರ್ಥಕ್ಕೆ..? ಎಂದು ಬಿಜೆಪಿ ಪ್ರಶ್ನಿಸಿದೆ.

Written by - Puttaraj K Alur | Last Updated : Sep 14, 2023, 05:24 PM IST
  • ಸಿಎಂ ಸಿದ್ದರಾಮಯ್ಯ ಬೀದಿಯಲ್ಲಿ ನಿಂತು ಕೇಂದ್ರ ಸರ್ಕಾರಕ್ಕೆ ಪತ್ರ ಬರೆಯುವ ಬೃಹನ್ನಳೆ ನಾಟಕವಾಡುತ್ತಿದ್ದಾರೆ
  • ಎಲ್ಲದಕ್ಕೂ ಕೇಂದ್ರ ಸರ್ಕಾರದ ಮೇಲೆ ಬೊಟ್ಟು ಮಾಡುತ್ತಾ ಪತ್ರ ಬರೆಯುತ್ತಿರುವ ಸಿಎಂ ಸಿದ್ದರಾಮಯ್ಯ
  • ಆರೋಪ ಮಾಡುತ್ತಾ ಕಾಲ ಕಳೆಯುತ್ತಿರುವ ಸಿದ್ದರಾಮಯ್ಯ ಸಿಎಂ ಆಗಿರುವುದು ಯಾವ ಪುರುಷಾರ್ಥಕ್ಕೆ?
ಸಿಎಂ ಸಿದ್ದರಾಮಯ್ಯ ಬೀದಿಯಲ್ಲಿ ನಿಂತು ಕೇಂದ್ರಕ್ಕೆ ಪತ್ರ ಬರೆಯುವ ಬೃಹನ್ನಳೆ ನಾಟಕವಾಡುತ್ತಿದ್ದಾರೆ: ಬಿಜೆಪಿ title=
ಸಿದ್ದರಾಮಯ್ಯ ಸಿಎಂ ಆಗಿರುವುದು ಯಾವ ಪುರುಷಾರ್ಥಕ್ಕೆ?

ಬೆಂಗಳೂರು: ರಾಜ್ಯದಲ್ಲಿ ನೂರಾರು ಸಮಸ್ಯೆಗಳು ಎದುರಾಗಿರುವಾಗ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಬೀದಿಯಲ್ಲಿ ನಿಂತು ಕೇಂದ್ರ ಸರ್ಕಾರಕ್ಕೆ ಪತ್ರ ಬರೆಯುವ ಬೃಹನ್ನಳೆ ನಾಟಕವಾಡುತ್ತಿದ್ದಾರೆ ಎಂದು ಬಿಜೆಪಿ ವ್ಯಂಗ್ಯವಾಡಿದೆ.

‘ಗ್ಯಾರಂಟಿ ಈಡೇರಿಸಲು 10 ಕೆಜಿ ಅಕ್ಕಿ ಬೇಕು, ಕೇಂದ್ರಕ್ಕೆ ಸರ್ಕಾರಕ್ಕೆ ಪತ್ರ ಬರೆಯುತ್ತೇನೆ!, ರಾಜ್ಯದಲ್ಲಿ ಬರಗಾಲ ತಾಂಡವ ಆಡುತ್ತಿದೆ‌, ಕೇಂದ್ರ ಸರ್ಕಾರಕ್ಕೆ ಪತ್ರ ಬರೆಯುತ್ತೇನೆ!, ಕಾವೇರಿಯಲ್ಲಿ ನೀರಿಲ್ಲ ಆದರೂ ತಮಿಳುನಾಡಿಗೆ ನೀರು ಬಿಟ್ಟಿದ್ದೇವೆ, ಕೇಂದ್ರ ಸರ್ಕಾರಕ್ಕೆ ಪತ್ರ ಬರೆಯುತ್ತೇನೆ!, ರಾಜ್ಯದಲ್ಲಿ ಕಲುಷಿತ ನೀರು ಪೂರೈಕೆಯಿಂದ ಅಪಾರ ಸಾವು-ನೋವು, ಕೇಂದ್ರ ಸರ್ಕಾರಕ್ಕೆ ಪತ್ರ ಬರೆಯುತ್ತೇನೆ!’ ಎಂದು ಸಿದ್ದರಾಮಯ್ಯ ಹೇಳುತ್ತಾರೆ ಅಂತಾ ಬಿಜೆಪಿ ಟೀಕಿಸಿದೆ.

‘ರಾಜ್ಯದಲ್ಲಿ 200ಕ್ಕೂ ಹೆಚ್ಚು ರೈತರ ಸರಣಿ ಆತ್ಮಹತ್ಯೆ, ಕೇಂದ್ರ ಸರ್ಕಾರಕ್ಕೆ ಪತ್ರ ಬರೆಯುತ್ತೇನೆ ಮತ್ತು ರಾಜ್ಯ ಸರ್ಕಾರದ ಸಂಪುಟದಲ್ಲಿ ಗೂಂಡಾ ಸಚಿವರುಗಳ ಉಪಟಳ ಹೆಚ್ಚಾಗಿದೆ. ಕೇಂದ್ರ ಸರ್ಕಾರಕ್ಕೆ ಪತ್ರ ಬರೆಯುತ್ತೇನೆ! ಹೀಗೆ ಎಲ್ಲದಕ್ಕೂ ಕೇಂದ್ರ ಸರ್ಕಾರದ ಮೇಲೆ ಬೊಟ್ಟು ಮಾಡುತ್ತಾ ಪತ್ರ ಬರೆಯುತ್ತೇನೆ ಎನ್ನುತ್ತಾ ಕಾಲ ಕಳೆಯುತ್ತಿರುವ ನೀವು ಮುಖ್ಯಮಂತ್ರಿ ಆಗಿರುವುದು ಯಾವ ಪುರುಷಾರ್ಥಕ್ಕೆ..?’ ಎಂದು ಬಿಜೆಪಿ ಪ್ರಶ್ನಿಸಿದೆ.

ಇದನ್ನೂ ಓದಿ: ಹಂಪಿ ಉತ್ಸವಕ್ಕೆ ಹಣ ನೀಡದ ಕಾಂಗ್ರೆಸ್ ಸರ್ಕಾರ!: ಬಿಜೆಪಿ ಆಕ್ರೋಶ

ಕೈಲಾಗದವರಂತೆ ಕೂತಿದೆ!

‘ಕರ್ನಾಟಕದಲ್ಲಿ ಹಿಂದೆಂದಿಗಿಂತಲೂ ಕಂಡು ಕೇಳರಿಯದ ಬರ ಆವರಿಸಿಕೊಂಡಿದೆ. ಸಿದ್ದರಾಮಯ್ಯ ಸಾಹೇಬರು ಅಧಿಕಾರದ ಚುಕ್ಕಾಣಿ ಹಿಡಿದ ಮೊದಲ ವಾರದಿಂದಲೇ ಮುಂಗಾರು ಕೈಕೊಟ್ಟು ಬರಗಾಲ ಸೃಷ್ಟಿಯಾಗಿತ್ತು. ಆದರೆ ವರ್ಗಾವಣೆ ದಂಧೆ, ಕಮಿಷನ್, ಕಲೆಕ್ಷನ್, ಶ್ಯಾಡೋ ಸಿಎಂ, ಸಚಿವರ ದರ್ಪದ ಮೇಲಾಟಗಳೇ ಹೆಚ್ಚಾದ ಹಿನ್ನೆಲೆ ಸರ್ಕಾರ ಈಗ ಧೃತರಾಷ್ಟ್ರನಂತೆ ವರ್ತಿಸುತ್ತಿದೆ’ ಎಂದು ಬಿಜೆಪಿ ಟೀಕಿಸಿದೆ.

‘ಪರಿಣಾಮ ರೈತರ ಸರಣಿ ಆತ್ಮಹತ್ಯೆ, ಕಲುಷಿತ ನೀರು ‌ಪೂರೈಕೆಯಿಂದ ರಾಜ್ಯದಲ್ಲಿ ಅಪಾರ ಸಾವು-ನೋವು ಸಂಭವಿಸಿದೆ. ಈ ಹಿಂದೆ ಬರಗಾಲವೇ ಇಲ್ಲವೆಂದು ಸಿದ್ದರಾಮಯ್ಯರವರ ಸರ್ಕಾರ ಮೈಮರೆತ ಕಾರಣ ಇಂದು 195 ತಾಲೂಕುಗಳಲ್ಲಿ ಬರ ಬಂದಿದೆ. ಈಗಲೂ ಸರ್ಕಾರ ಬರಗಾಲವನ್ನು ಸಮರ್ಥವಾಗಿ ಎದುರಿಸಲಾಗದೆ ಕೈಲಾಗದವರಂತೆ ಕೂತಿದೆ’ ಎಂದು ಬಿಜೆಪಿ ಕುಟುಕಿದೆ.

ಇದನ್ನೂ ಓದಿ: ಕಳ್ಳಭಟ್ಟಿಗೆ ಕಡಿವಾಣ ಹಾಕಿ ಬಡವರ ಆರೋಗ್ಯ-ಆದಾಯ ಕಾಪಾಡಿ: ಸಿಎಂ ಸಿದ್ದರಾಮಯ್ಯ

ಜನರಿಗೆ ಮಂಕುಬೂದಿ ಎರಚುತ್ತಿರುವ ಸರ್ಕಾರ!

‘ಕೇಂದ್ರ ಸರ್ಕಾರ ನೀಡುತ್ತಿರುವ 5 ಕೆಜಿ ಅಕ್ಕಿಯನ್ನೇ ತನ್ನ ಗ್ಯಾರಂಟಿ ಎಂದು ಜನರಿಗೆ ಮಂಕುಬೂದಿ ಎರಚುತ್ತಿರುವ ಸಿದ್ದರಾಮಯ್ಯನವರ ಸರ್ಕಾರ ಈಗ ಅದರಲ್ಲೂ ಜಾತಿ ರಾಜಕಾರಣ ಮಾಡುವ ಕೀಳು ಕಾರ್ಯಕ್ಕೆ ಕೈಹಾಕಿದೆ. ದಲಿತರ ಅಭ್ಯುದಯಕ್ಕೆ ಮೀಸಲಿಟ್ಟಿದ್ದ ಎಸ್‌ಸಿಪಿ/ಟಿಎಸ್‌ಪಿ ನಿಧಿಯನ್ನು ಈಗಾಗಲೇ ಕಬಳಿಸಿದ್ದೂ ಅಲ್ಲದೆ ಅಕ್ಕಿ ಪಡೆಯಲೂ ಜಾತಿ ಪ್ರಮಾಣಪತ್ರ ಹೆಸರಲ್ಲಿ ಜನರನ್ನು ಅಲೆದಾಡಿಸುತ್ತಿದೆ’ ಎಂದು ಬಿಜೆಪಿ ಟ್ವೀಟ್ ಮಾಡಿದೆ.

‘ಅದೂ ಸಾಲದೆಂಬಂತೆ ತಾನೇ ಘೋಷಿಸಿದ ಗ್ಯಾರಂಟಿ ಜಾರಿಯನ್ನು ವಿಳಂಬ ಮಾಡಲು ಸರ್ವರ್‌ ಸಮಸ್ಯೆಯ ನಾಟಕವಾಡುತ್ತಿದೆ. ಲೋಕಸಭೆ ಚುನಾವಣೆಯವರೆಗೂ ಒಂದಲ್ಲಾ ಒಂದು ರೀತಿಯಲ್ಲಿ ನಾಟಕವಾಡುತ್ತಾ ಕಾಲಹರಣ ಮಾಡಿ ಕೈತೊಳೆದುಕೊಳ್ಳುವ ಹುನ್ನಾರವನ್ನು ಕಾಂಗ್ರೆಸ್  ಮಾಡುತ್ತಲೇ ಇದೆ’ ಎಂದು ಬಿಜೆಪಿ ಟೀಕಿಸಿದೆ.

 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/watch?v=uzXzteRDY-k

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews ಲಿಂಕ್ ಗಳ ಮೇಲೆ ಕ್ಲಿಕ್.

Trending News