ಬೆಂಗಳೂರು: ಲೆಕ್ಕ ಬರೆದಿಟ್ಟುಕೊಳ್ಳಿ ಸಿದ್ದರಾಮಯ್ಯ ನಿಮ್ಮ ಲೆಕ್ಕ ಚುಕ್ತಾ ಮಾಡುತ್ತಾರೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ಗೆ ಬಿಜೆಪಿ ಎಚ್ಚರಿಕೆ ನೀಡಿದೆ. #ಕಾಂಗ್ರೆಸ್ಕಲಹ ಹ್ಯಾಶ್ ಟ್ಯಾಗ್ ಬಳಸಿ ಬಿಜೆಪಿ ಸೋಮವಾರ ಸರಣಿ ಟ್ವೀಟ್ ಮಾಡಿದೆ.
‘ಸಿದ್ದರಾರಾಮೋತ್ಸವ ಈಗ ಸಿದ್ದರಾಮಯ್ಯ ತಲೆಯಲ್ಲಿ ತಿರುಗುತ್ತಿದೆ. ಈಗ ಎಲ್ಲರನ್ನೂ ಎದುರು ಹಾಕಿಕೊಳ್ಳುವ ಉತ್ಸಾಹದಲ್ಲಿದ್ದಾರೆ. ಕೆಪಿಸಿಸಿ ಅಧ್ಯಕ್ಷರಿಗೆ ಒಮ್ಮೆ ಹಿಂದಿನಿಂದ ಅವಮಾನ ಮಾಡುತ್ತಾರೆ, ಮತ್ತೊಮ್ಮೆ ಎಲ್ಲರೆದರು ಅವಮಾನಿಸುತ್ತಾರೆ. ಲೆಕ್ಕ ಬರೆದಿಟ್ಟುಕೊಳ್ಳಿ, ಡಿಕೆಶಿ ನಿಮ್ಮ ಲೆಕ್ಕ ಚುಕ್ತಾ ಮಾಡದೆ ಬಿಡುವರೇ?’ ಎಂದು ಪ್ರಶ್ನಿಸಿದೆ.
ಇದನ್ನೂ ಓದಿ: ಬಿಎಸ್ವೈಗೆ ಸಿಎಂ ಸ್ಥಾನದ ಆಸೆ ತೋರಿಸಿ ‘ಆಪರೇಷನ್ ಕಮಲ’ ಮಾಡಿಸಿದ್ದು ಯಾರು?: ಸಿದ್ದರಾಮಯ್ಯ
‘ಲೋಕದ ಕಣ್ಣಿಗೆ ಮಣ್ಣೆರೆಚಲು ಕೈ ಕೈ ಹಿಡಿದು ನಡೆದದ್ದೇನು, ಜೊತೆಯಾಗಿ ಸಾಗಿದ್ದೇನು, ಅದೆಲ್ಲ ಈಗ ಬಯಲಾಗುತ್ತಿದೆ. ಕೆಪಿಸಿಸಿ ಅಧ್ಯಕ್ಷರು ಬಂದರೂ ಕನಿಷ್ಠ ಸೌಜನ್ಯ ತೋರಿಸಲಾಗದಷ್ಟು ಉದ್ಧಟತನವೇಕೆ ಸಿದ್ದರಾಮಯ್ಯ?’ವೆಂದು ಬಿಜೆಪಿ ಕುಟುಕಿದೆ.
‘ಮುಖ್ಯಮಂತ್ರಿ ಸ್ಥಾನದ ಕನಸು ಕಾಣುತ್ತಿರುವ ಮಲ್ಲಿಕಾರ್ಜುನ್ ಖರ್ಗೆಯವರು ಮತ್ತೋರ್ವ ಸಿಎಂ ಕುರ್ಚಿಯ ಕನಸುಗಾರ ಸಿದ್ದರಾಮಯ್ಯರ ‘ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ಸಾಧನೆ’ಎಂಬ ಪುಸ್ತಕ ಬಿಡುಗಡೆ ಮಾಡಲಿದ್ದಾರೆ. ಮೂಲ ಕಾಂಗ್ರೆಸ್ಸಿಗರಿಗೆ ಈಗ ಸಿದ್ದರಾಮಯ್ಯ ಅವರ ಚಾಕರಿ ಮಾಡುವ ಸುಯೋಗ!’ವೆಂದು ಬಿಜೆಪಿ ವ್ಯಂಗ್ಯವಾಡಿದೆ.
ಇದನ್ನೂ ಓದಿ: ಹಾಸಿಗೆ ದಿಂಬಿನಲ್ಲಿ ಲಂಚ, ಬಚ್ಚಲಮನೆಯ ಚೊಂಬಿನಲ್ಲೂ ಲಂಚ: ಕಾಂಗ್ರೆಸ್ ವಿರುದ್ಧ ಬಿಜೆಪಿ ಆಕ್ರೋಶ
‘ಸಿದ್ದರಾಮೋತ್ಸವದ ಬಗ್ಗೆ ಕಾಂಗ್ರೆಸ್ಸಿನಲ್ಲಿ ಅಸಹನೆ, ಅಸಹಿಷ್ಣುತೆಯ ಅಲೆ ಜೋರಾಗಿಯೇ ಬೀಸುತ್ತಿದೆ. ಕಾಂಗ್ರೆಸ್ಸಿನಲ್ಲೀಗ ವಲಸಿಗ ಸಿದ್ದರಾಮಯ್ಯ ಆರಾಧನೆ ನಡೆಯುತ್ತಿದೆ. ಮೂಲ ಕಾಂಗ್ರೆಸ್ಸಿಗರು ಮೂಕಪ್ರೇಕ್ಷಕರಾಗಿದ್ದಾರೆ’ ಎಂದು ಬಿಜೆಪಿ ಟೀಕಿಸಿದೆ.
ಮುಖ್ಯಮಂತ್ರಿ ಸ್ಥಾನದ ಕನಸು ಕಾಣುತ್ತಿರುವ @kharge ಅವರು ಮತ್ತೋರ್ವ ಸಿಎಂ ಕುರ್ಚಿಯ ಕನಸುಗಾರ @siddaramaiah ಅವರ "ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ಸಾಧನೆ"ಎಂಬ ಪುಸ್ತಕ ಬಿಡುಗಡೆ ಮಾಡಲಿದ್ದಾರೆ.
ಮೂಲ ಕಾಂಗ್ರೆಸ್ಸಿಗರಿಗೆ ಈಗ ಸಿದ್ದರಾಮಯ್ಯ ಅವರ ಚಾಕರಿ ಮಾಡುವ ಸುಯೋಗ!#ಕಾಂಗ್ರೆಸ್ಕಲಹ
— BJP Karnataka (@BJP4Karnataka) July 11, 2022
‘ಸಿದ್ದರಾಮಯ್ಯರ ಬಗ್ಗೆ ಇರುವ ಅಸಮಾಧಾನವನ್ನು ಪರಿಷತ್ ವಿಪಕ್ಷ ನಾಯಕ ಬಿ.ಕೆ.ಹರಿಪ್ರಸಾದ್ ಹೊರ ಹಾಕಿದ್ದಾರೆ. ಅಧಿಕಾರದಾಹಿ ಸಿದ್ದರಾಮಯ್ಯ ವಿರುದ್ಧ ಸಹನೆಯ ಕಟ್ಟೆ ಒಡೆದಿದೆ. ಎಷ್ಟೆಂದರೂ ಹರಿಪ್ರಸಾದ್ ಮೂಲ ಕಾಂಗ್ರೆಸ್ಸಿಗ, ವಲಸಿಗ ಸಿದ್ದರಾಮಯ್ಯರನ್ನು ಎಷ್ಟು ವರ್ಷಗಳ ಕಾಲ ಸಹಿಸಿಕೊಳ್ಳಲು ಸಾಧ್ಯ?’ ಎಂದು ಬಿಜೆಪಿ ಕುಟುಕಿದೆ.
ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook, Youtube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ