‘ಅಡುಗೆ ರೆಡಿ ಮಾಡಿದ್ದು ನಾನು, ಬೇರೆಯವರು ಬರೇ ತಿನ್ನುವುದಕ್ಕಾ?’

ಡಿಕೆಶಿ ನೀವು ಬರೇ ಮಾತಿನ ಬಾಣ ಎಸೆಯಬೇಕಷ್ಟೇ. ಸಿದ್ದರಾಮಯ್ಯ ನೀವು ಶ್ರಮ ವಹಿಸಿ ಮಾಡಿದ ಅಡುಗೆ ತಿಂದು ಮುಗಿಸುವುದು ಶತಸಿದ್ಧ ಎಂದು ಬಿಜೆಪಿ ಟೀಕಿಸಿದೆ.

Written by - Zee Kannada News Desk | Last Updated : May 24, 2022, 05:42 PM IST
  • ಒಂದು ವಾರದಲ್ಲಿ ಎರಡು ಬಾರಿ ದೆಹಲಿ ದಂಡಯಾತ್ರೆ, ಚಿಂತನ ಶಿಬಿರದಲ್ಲಿ ಒಗ್ಗಟ್ಟಿನ ಮಂತ್ರ ಜಪ
  • ಇಷ್ಟೆಲ್ಲಾ ಆದರೂ ಡಿಕೆಶಿ ಹಿರಿಯ ನಾಯಕ ಎಸ್‌ಆರ್‌ಪಿ ಅವರಿಗೆ ಟಿಕೆಟ್‌ ಕೊಡಿಸಲು ಸಾಧ್ಯವಾಗಿಲ್ಲ
  • ಸಿದ್ದರಾಮಯ್ಯರ ಹಠವೇ ಅಂತಿಮವಾಯಿತು, ಡಿಕೆಶಿ ನೀವು ನಾಮಕಾವಸ್ಥೆ ಅಧ್ಯಕ್ಷರೇ? ಎಂದ ಬಿಜೆಪಿ
‘ಅಡುಗೆ ರೆಡಿ ಮಾಡಿದ್ದು ನಾನು, ಬೇರೆಯವರು ಬರೇ ತಿನ್ನುವುದಕ್ಕಾ?’ title=
ಡಿಕೆಶಿ ನೀವು ನಾಮಕಾವಸ್ಥೆ ಅಧ್ಯಕ್ಷರೇ? ಎಂದು ಬಿಜೆಪಿ ಪ್ರಶ್ನೆ

ಬೆಂಗಳೂರು: ವಿಧಾನ ಪರಿಷತ್‍ಗೆ ಚುನಾವಣೆಗೆ ತಮ್ಮ ಬೆಂಬಲಿಗರಿಗೆ ಟಿಕೆಟ್ ಕೊಡಿಸುವಲ್ಲಿ ವಿಪಕ್ಷ ನಾಯಕ ಸಿದ್ದರಾಮಯ್ಯ ಯಶಸ್ವಿಯಾಗಿದ್ದರೆ, ಕೆಪಿಸಿಸಿ ಅಧ‍್ಯಕ್ಷ ಡಿ.ಕೆ.ಶಿವಕುಮಾರ್ ಮತ್ತೆ ಅಸಹಾಯಕರಾಗಿದ್ದಾರೆ ಎಂದು ಬಿಜೆಪಿ ಟೀಕಿಸಿದೆ.  

‘ಒಂದು ವಾರದಲ್ಲಿ ಎರಡು ಬಾರಿ ದೆಹಲಿ ದಂಡಯಾತ್ರೆ, ಚಿಂತನ ಶಿಬಿರದಲ್ಲಿ ಒಗ್ಗಟ್ಟಿನ ಮಂತ್ರ ಜಪ. ಇಷ್ಟೆಲ್ಲಾ ಆದರೂ ಡಿಕೆಶಿ ಹಿರಿಯ ನಾಯಕ ಎಸ್‌ಆರ್‌ಪಿ ಅವರಿಗೆ ಟಿಕೆಟ್‌ ಕೊಡಿಸಲು ಸಾಧ್ಯವಾಗಿಲ್ಲ. ಸಿದ್ದರಾಮಯ್ಯ ಅವರ ಹಠವೇ ಅಂತಿಮವಾಯಿತು. ಡಿಕೆಶಿ ಅವರೇ ನೀವು ನಾಮಕಾವಸ್ಥೆ ಅಧ್ಯಕ್ಷರೇ?’ ಎಂದು ಬಿಜೆಪಿ ಪ್ರಶ್ನಿಸಿದೆ.

ಇದನ್ನೂ ಓದಿ: ನನ್ನ ತಂಡದ ನಾಲ್ವರಿಗೆ ಟಿಕೆಟ್! ವಿಜಯೇಂದ್ರ ಅವರಗೆ ಬೇರೆ ಅವಕಾಶವಿದೆ: ನಳಿನ್ ಕುಮಾರ್ ಕಟೀಲ್

‘ತಮ್ಮ ಪರಮಾಪ್ತ ಎಂ.ಬಿ.ಪಾಟೀಲರನ್ನು ಪ್ರಚಾರ ಸಮಿತಿ ಅಧ್ಯಕ್ಷರನ್ನಾಗಿ ಮಾಡುವಲ್ಲಿ ಸಿದ್ದರಾಮಯ್ಯ ಯಶಸ್ಸು ಕಂಡಿದ್ದಾರೆ. ಅದೇ ಎಂ.ಬಿ.ಪಾಟೀಲರು ಕೆಪಿಸಿಸಿ ಅಧ್ಯಕ್ಷರನ್ನೇ ಸಾರ್ವಜನಿಕ ವಲಯದಲ್ಲಿ, ಮಾಧ್ಯಮದವರ ಮುಂದೆ ಪ್ರಶ್ನಿಸಿದ್ದರು. ಕೆಪಿಸಿಸಿ ಅಧ್ಯಕ್ಷ ಸ್ಥಾನ ಕೇವಲ ಅಲಂಕಾರಿಕವೇ!?’ ಎಂದು ಟೀಕಿಸಿದೆ.

‘ಅಡುಗೆ ನಾನು ರೆಡಿ ಮಾಡಿದ್ದು, ಬೇರೆಯವರು ಬರೇ ತಿನ್ನುವುದಕ್ಕಾ? ಎಂದು ಡಿ.ಕೆ.ಶಿವಕುಮಾರ್ ಪ್ರಶ್ನಿಸಿದ್ದಾರೆ. ಡಿಕೆಶಿ ಅವರೇ ನೀವು ಬರೇ ಇಂತಹ ಮಾತಿನ ಬಾಣ ಎಸೆಯಬೇಕಷ್ಟೇ. ಸಿದ್ದರಾಮಯ್ಯ ನೀವು ಶ್ರಮ ವಹಿಸಿ ಮಾಡಿದ ಅಡುಗೆ ತಿಂದು ಮುಗಿಸುವುದು ಶತಸಿದ್ಧ’ ಎಂದು ಕುಟುಕಿದೆ.

ಇದನ್ನೂ ಓದಿ: ಪಠ್ಯಪುಸ್ತಕ ಪರಿಷ್ಕರಣೆ ವಿರುದ್ಧ ಮಾಜಿ ಸಿಎಂ ಕುಮಾರಸ್ವಾಮಿ ಆಕ್ರೋಶ

‘ನಾನೇ ಮುಂದಿನ ಸಿಎಂ ಎಂದು ಸಿದ್ದರಾಮಯ್ಯ ಹೇಳುತ್ತಿದ್ದರೆ, ಪಕ್ಷ ಕಟ್ಟಿರುವುದು ನಾನು ಎಂದು ಡಿಕೆಶಿ ಹೇಳುತ್ತಿದ್ದಾರೆ. ಎದುರಾಳಿ ಬಲಗೊಳ್ಳುತ್ತಿದ್ದಾನೆ ಅಂದರೆ #ಅಸಹಾಯಕಡಿಕೆಶಿ ಆಗಿದ್ದಾರೆಂದರ್ಥವೇ? ತಿಹಾರ್ ಜೈಲಿನಿಂದ  ದೊಡ್ಡ ಮೆರವಣಿಗೆ ಮಾಡಿಕೊಂಡು ಬಂದು ಕೆಪಿಸಿಸಿ ಅಧ್ಯಕ್ಷ ಸ್ಥಾನ ಪಡೆದು 2 ವರ್ಷ ಕಳೆದರೂ ಪದಾಧಿಕಾರಿಗಳ ಪಟ್ಟಿಯನ್ನು ಭರ್ತಿ ಮಾಡಲು ಡಿಕೆಶಿಯವರಿಂದ ಸಾಧ್ಯವಾಗಿರಲಿಲ್ಲ. ಈಗ ಉಪಾಧ್ಯಕ್ಷರ ಸ್ಥಾನದ  ಪಟ್ಟಿಯಲ್ಲಿ ಸಿದ್ದರಾಮಯ್ಯ ಸೂಚಿಸಿದ ಹೆಸರುಗಳಿವೆ. ಅಷ್ಟೊಂದು #ಅಸಹಾಯಕಡಿಕೆಶಿ ಆಗಿದ್ದೇಕೆ?’ ಎಂದು ಬಿಜೆಪಿ ಪ್ರಶ್ನಿಸಿದೆ.

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

Trending News