BJP: ಬಿಜೆಪಿ ಕಾರ್ಯಕಾರಿಣಿಯಲ್ಲಿ ಎರಡು ಮಹತ್ವದ ನಿರ್ಣಯ..!

ಸಚಿವ ಸಂಪುಟ ವಿಸ್ತರಣೆ ಬಿ.ಎಸ್. ಯಡಿಯೂರಪ್ಪ ಅವರ ಪರಮಾಧಿಕಾರ

Last Updated : Dec 5, 2020, 07:01 PM IST
  • ರಾಜ್ಯ ಬಿಜೆಪಿ ಕಾರ್ಯಕಾರಿಣಿ ಸಭೆಯಲ್ಲಿ ಎರಡು ಪ್ರಮುಖ ನಿರ್ಣಯ
  • ಈ ಬಗ್ಗೆ ಮಾಹಿತಿ ನೀಡಿದ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್
  • ಸಚಿವ ಸಂಪುಟ ವಿಸ್ತರಣೆ ಬಿ.ಎಸ್. ಯಡಿಯೂರಪ್ಪ ಅವರ ಪರಮಾಧಿಕಾರ
BJP: ಬಿಜೆಪಿ ಕಾರ್ಯಕಾರಿಣಿಯಲ್ಲಿ ಎರಡು ಮಹತ್ವದ ನಿರ್ಣಯ..! title=

ಬೆಳಗಾವಿ: ನಗರದಲ್ಲಿ ನಡೆದ ರಾಜ್ಯ ಬಿಜೆಪಿ ಕಾರ್ಯಕಾರಿಣಿ ಸಭೆಯಲ್ಲಿ ಎರಡು ಪ್ರಮುಖ ನಿರ್ಣಯ ಕೈಗೊಳ್ಳಲಾಗಿದೆ.

ಈ ಬಗ್ಗೆ ಮಾಹಿತಿ ನೀಡಿದ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್(Nalin kumar kateel), ಗ್ರಾಮ ಸ್ವರಾಜ್ ಪರಿಕಲ್ಪನೆ ಬಗ್ಗೆ ಕಾರ್ಯಕಾರಿಣಿಯಲ್ಲಿ ಚರ್ಚೆ ನಡೆಸಲಾಗಿದೆ. ಗ್ರಾಮಗಳನ್ನು ಅಭಿವೃದ್ಧಿ ಮಾಡುವುದು ಇದರ ಉದ್ದೇಶವಾಗಿದೆ ಎಂದು ತಿಳಿಸಿದ್ದಾರೆ.

Congress: ಗ್ರಾ.ಪಂ. ಚುನಾವಣೆ: ಕ್ಷೇತ್ರವಾರು ಉಸ್ತುವಾರಿಗಳನ್ನು ನೇಮಕ ಮಾಡಿದ ಕಾಂಗ್ರೆಸ್!

ಎರಡು ಪ್ರಮುಖ ವಿಧೇಯಕ ಜಾರಿಗೆ ತರುವ ಬಗ್ಗೆ ಸಭೆಯಲ್ಲಿ ನಿರ್ಣಯ ಕೈಗೊಳ್ಳಲಾಗಿದೆ. ಗೋಹತ್ಯೆ ನಿಷೇಧ, ಲವ್ ಜಿಹಾದ್ ನಿಷೇಧ ಮಾಡಲಾಗುವುದು ಎಂದು ಅವರು ತಿಳಿಸಿದ್ದಾರೆ.

B.S.Yediyurappa: 'ಸಿಎಂ ಯಡಿಯೂರಪ್ಪ ಆಧುನಿಕ ಹಿಟ್ಲರ್'

ನಂತರ ಮಾತನಾಡಿದ ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್, ಸಚಿವ ಸಂಪುಟ ವಿಸ್ತರಣೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ಪರಮಾಧಿಕಾರವಾಗಿದೆ. ಸಚಿವ ಸಂಪುಟ ವಿಸ್ತರಣೆ ಬಗ್ಗೆ ಮುಖ್ಯಮಂತ್ರಿ ಯಡಿಯೂರಪ್ಪ ತೀರ್ಮಾನ ಕೈಗೊಳ್ಳಲಿದ್ದಾರೆ ಎಂದು ತಿಳಿಸಿದ್ದಾರೆ.

Nikhil: ಮಂಡ್ಯದಿಂದ ಲೋಕಸಭೆಗೆ ನಿಖಿಲ್ ಮತ್ತೊಮ್ಮೆ ಸ್ಪರ್ಧೆ: ಸುಳಿವು ಕೊಟ್ಟ ಹೆಚ್ ಡಿಕೆ

ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಮಾತನಾಡಿ, ಸಂಪುಟ ವಿಸ್ತರಣೆ ಮತ್ತು ಪುನಾರಚನೆ ಕುರಿತಾಗಿ ಅನಗತ್ಯ ಹೇಳಿಕೆ ನೀಡಬಾರದು. ಒಂದು ವೇಳೆ ಅನಗತ್ಯವಾಗಿ ಹೇಳಿಕೆ ನೀಡಿದರೆ ಶಿಸ್ತುಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದ್ದಾರೆ.

H D Kumaraswamy: ಕಾಂಗ್ರೆಸ್ ಜೊತೆ ಸರ್ಕಾರ ಮಾಡಿ ಕೆಟ್ಟೆ: 'ಬಿಗ್ ಬಾಂಬ್ ಸ್ಫೋಟಿಸಿದ' ಹೆಚ್ ಡಿಕೆ!

ಸಂಪುಟ ವಿಸ್ತರಣೆ ಬಗ್ಗೆ ಕೆಲವರು ನೋವು ವ್ಯಕ್ತಪಡಿಸಿದ್ದಾರೆ. ಆದರೆ, ಯಾರೂ ಅನಗತ್ಯ ಹೇಳಿಕೆ ನೀಡಬಾರದು. ಸಂಪುಟ ವಿಸ್ತರಣೆ ಮತ್ತು ಪುನಾರಚನೆ ವಿಚಾರ ಮುಖ್ಯಮಂತ್ರಿಯವರ ವಿವೇಚನೆಗೆ ಬಿಟ್ಟಿದ್ದು. ಯಡಿಯೂರಪ್ಪನವರೇ ಅಂತಿಮ ನಿರ್ಧಾರ ಕೈಗೊಳ್ಳುತ್ತಾರೆ ಎಂದು ತಿಳಿಸಿದ್ದಾರೆ.

ಅಧಿವೇಶನಕ್ಕೂ ಮುನ್ನವೇ ಸಂಪುಟ ವಿಸ್ತರಣೆ: ಐವರಿಗೆ ಮಾತ್ರ ಸಚಿವಸ್ಥಾನ!

Trending News