ಸಿದ್ದಗಂಗಾ ಶ್ರೀಗಳ ಆರೋಗ್ಯಗಲ್ಲಿ ಏರುಪೇರು: ಬರ ಅಧ್ಯಯನ ಪ್ರವಾಸ ಮುಂದೂಡಿ ಮಠದತ್ತ ಬಿಎಸ್​ವೈ

ತೀವ್ರ ಉಸಿರಾಟ ತೊಂದರೆಯಿಂದ ಬಳಲುತ್ತಿರುವ ಸಿದ್ದಗಂಗಾ ಶ್ರೀಗಳು.

Last Updated : Jan 21, 2019, 09:57 AM IST
ಸಿದ್ದಗಂಗಾ ಶ್ರೀಗಳ ಆರೋಗ್ಯಗಲ್ಲಿ ಏರುಪೇರು: ಬರ ಅಧ್ಯಯನ ಪ್ರವಾಸ ಮುಂದೂಡಿ ಮಠದತ್ತ ಬಿಎಸ್​ವೈ title=

ತುಮಕೂರು: ತುಮಕೂರಿನ ಶ್ರೀ ಸಿದ್ದಗಂಗಾ ಮಠದ ಶ್ರೀ ಶಿವಕುಮಾರ ಸ್ವಾಮೀಜಿ ಅವರ ಆರೋಗ್ಯ ಮತ್ತೆ ಏರುಪೇರಾಗಿದ್ದು, ಹಳೆ ಮಠದಲ್ಲೇ ಶ್ರೀಗಳಿಗೆ ಚಿಕಿತ್ಸೆ ಮುಂದುವರಿದಿದೆ. ಅವರು ಗುಣಮುಖರಾಗಲಿ ಎಂದು ರಾಜ್ಯಾದ್ಯಂತ ಅವರ ಸಹಸ್ರಾರು ಭಕ್ತರು ಪ್ರಾರ್ಥನೆ ಸಲ್ಲಿಸುತ್ತಿದ್ದಾರೆ. ಏತನ್ಮಧ್ಯೆ, ಶ್ರೀಗಳ ಆರೋಗ್ಯ ಏರುಪೇರಾದ ಹಿನ್ನೆಲೆಯಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ ತಮ್ಮೆಲ್ಲ ಪೂರ್ವನಿಗದಿತ ಕಾರ್ಯಕ್ರಮಗಳನ್ನು ರದ್ದು ಮಾಡಿ ಮಠದತ್ತ ತೆರಳುತ್ತಿದ್ದಾರೆ.

ಹರಿಯಾಣದ ಗುರುಗ್ರಾಮದಲ್ಲಿ ಹಲವು ದಿನಗಳ ಕಾಲ ರೆಸಾರ್ಟ್ ರಾಜಕಾರಣ ಮಾಡಿದ್ದ ಬಿಜೆಪಿ ನಾಯಕರು ಡ್ಯಾಮೇಜ್ ಕಂಟ್ರೋಲ್ ರೆಸಾರ್ಟ್ ವಾಸ್ತವ್ಯದಿಂದ ಬೆಂಗಳೂರಿಗೆ ಬರುತ್ತಿದ್ದಂತೆ ಬಿಜೆಪಿ ನಾಯಕರು ಬರ ಅಧ್ಯಯನ ಪ್ರವಾಸ ಘೋಷಣೆ ಮಾಡಿದ್ದಾರೆ.

ಬಿಎಸ್​ವೈ ಇಂದು ಕೋಲಾರ, ಚಿಕ್ಕಬಳ್ಳಾಪುರ ಜಿಲ್ಲೆಗಳಲ್ಲಿ ಬರ ಅಧ್ಯಯನ ಕೈಗೊಳ್ಳಲಿದ್ದರು. ನಾಳೆ ಚಾಮರಾಜನಗರದಲ್ಲಿ ಬರ ಅಧ್ಯಯನ ನಡೆಸಲು ತೀರ್ಮಾನಿಸಿದ್ದರು. 

ಆದರೆ, ಸಿದ್ದಗಂಗಾ ಶ್ರೀಗಳ ಆರೋಗ್ಯದಲ್ಲಿ ಏರುಪೇರು ವಿಚಾರ ತಿಳಿಯುತ್ತಿದ್ದಂತೆಯೇ ಈ ಎಲ್ಲವನ್ನು ಕಾರ್ಯಕ್ರಮಗಳನ್ನೂ ರದ್ದು ಮಾಡಿರುವ ಬಿಎಸ್​ವೈ ನೇರವಾಗಿ ತುಮಕೂರಿನ ಮಠಕ್ಕೆ ತೆರಳುವುದಾಗಿ ತಿಳಿಸಿದ್ದಾರೆ.

Trending News