ಸಮೀಕ್ಷೆಗಳನ್ನು ಮೀರಿ ಐತಿಹಾಸಿಕ ಗೆಲುವು ಸಾಧಿಸಲಿದೆ ಬಿಜೆಪಿ: ಪ್ರಹ್ಲಾದ್ ಜೋಶಿ

Prahlad Joshi: ಚುನಾವಣಾ ಸಮೀಕ್ಷೆಗಳನ್ನು ಮೀರಿಸಿ ಬಿಜೆಪಿ ಐತಿಹಾಸಿಕ ಗೆಲುವು ಸಾಧಿಸಲಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ವಿಶ್ವಾಸ ವ್ಯಕ್ತಪಡಿಸಿದರು.

Written by - Prashobh Devanahalli | Last Updated : Jun 2, 2024, 02:53 PM IST
  • ಐತಿಹಾಸಿಕ ಗೆಲುವು ಸಾಧಿಸಲಿದೆ ಬಿಜೆಪಿ
  • 400 ಕ್ಕೂ ಹೆಚ್ಚು ಸ್ಥಾನಗಳನ್ನು ಗೆಲ್ಲಲಿದೆ NDA
  • ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ವಿಶ್ವಾಸ‌
ಸಮೀಕ್ಷೆಗಳನ್ನು ಮೀರಿ ಐತಿಹಾಸಿಕ ಗೆಲುವು ಸಾಧಿಸಲಿದೆ ಬಿಜೆಪಿ: ಪ್ರಹ್ಲಾದ್ ಜೋಶಿ title=

ಹುಬ್ಬಳ್ಳಿ: ಚುನಾವಣಾ ಸಮೀಕ್ಷೆಗಳನ್ನು ಮೀರಿಸಿ ಬಿಜೆಪಿ ಐತಿಹಾಸಿಕ ಗೆಲುವು ಸಾಧಿಸಲಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ವಿಶ್ವಾಸ ವ್ಯಕ್ತಪಡಿಸಿದರು. ಹುಬ್ಬಳ್ಳಿಯಲ್ಲಿ ಇಂದು ಮಾದ್ಯಮದವರೊಂದಿಗೆ ಮಾತನಾಡಿ, ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ 400ಕ್ಕೂ ಹೆಚ್ಚು ಸ್ಥಾನಗಳನ್ನು ಗೆಲ್ಲುವುದು ಖಚಿತ ಎಂದು ಹೇಳಿದರು.

ಬಿಜೆಪಿ ಯಾವತ್ತೂ ಇದನ್ನು ಹೇಳುತ್ತಲೇ ಬಂದಿದೆ. ಆದರೆ, ಕೆಲವರು ಸಂಶಯ ವ್ಯಕ್ತಪಡಿಸುತ್ತಿದ್ದರು. ಈಗ ಚುನಾವಣಾ ಸಮೀಕ್ಷೆಗಳೇ NDA ಐತಿಹಾಸಿಕ ಗೆಲುವನ್ನು ಖಚಿತಪಡಿಸುತ್ತಿವೆ ಎಂದು ಸ್ಪಷ್ಟಪಡಿಸಿದರು.

ಇದನ್ನೂ ಓದಿ:  Hassan PenDrive Case: CID ಕಚೇರಿಯಲ್ಲೇ 3 ರಾತ್ರಿ ಕಳೆದ ಪ್ರಜ್ವಲ್, ಮೊಬೈಲ್‌ ಮೇಲೆ SIT ಕಣ್ಣು‌! 

ಪ್ರಧಾನಿ ನರೇಂದ್ರ ಮೋದಿ, ಅಮಿತ್ ಶಾ ನೇತೃತ್ವದಲ್ಲಿ NDA ಪ್ರಚಂಡ ಬಹುಮತದಿಂದ ಗೆಲ್ಲಲಿದೆ. ಕರ್ನಾಟಕದಲ್ಲೂ 25ಕ್ಕೂ ಹೆಚ್ಚು ಸ್ಥಾನಗಳಲ್ಲಿ ಗೆಲುವು ಸಾಧಿಸಲಿದೆ ಎಂದು ಹೇಳಿದರು.

ಜನರ ದಿಕ್ಕು ತಪ್ಪಿಸುವಲ್ಲಿ, ಸುಳ್ಳು ಹೇಳುವುದರಲ್ಲಿ ಕಾಂಗ್ರೆಸ್ಸಿಗರು ನಿಸ್ಸೀಮರು. ವಾಸ್ತವವನ್ನೇ ಮರೆ ಮಾಚುತ್ತಾರೆ ಎಂದು ಆರೋಪಿಸಿದರು.

ಸಚಿವ ನಾಗೇಂದ್ರ ಬಂಧನವಾದರೆ ಎಲ್ಲ ಬಯಲಿಗೆ: ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣದಲ್ಲಿ ಸಚಿವ ನಾಗೇಂದ್ರ ಬಂಧನವಾದರೆ ಎಲ್ಲದು ಬಯಲಿಗೆ ಬರಲಿದೆ ಎಂದು ಸಚಿವ ಜೋಶಿ ಹೇಳಿದರು.

ಇದನ್ನೂ ಓದಿ:  ನಾಗೇಂದ್ರರ ವಜಾ ಯಾಕಿಲ್ಲ? ಹಗರಣ ಸಿಬಿಐ ತನಿಖೆಗೇಕೆ ಕೊಟ್ಟಿಲ್ಲ? ಸಿಟಿ ರವಿ ಪ್ರಶ್ನೆ

ನಾಗೇಂದ್ರ ಬಂಧಿಸಿದಲ್ಲಿ ಈ ಭ್ರಷ್ಟಾಚಾರ ಹಗರಣದಲ್ಲಿ ಸಿಎಂ ಸೇರಿದಂತೆ ಮತ್ಯಾರು,  ಭಾಗಿಯಾಗಿದ್ದಾರೆ? ಅವರ ಪಾತ್ರ ಏನಿದೆ? ಎಂಬುದು ಗೊತ್ತಾಗಲಿದೆ. ಹಾಗಾಗಿ ರಾಜ್ಯ ಸರ್ಕಾರ ಮೊದಲು ಸಚಿವ ನಾಗೇಂದ್ರರನ್ನು ಬಂಧಿಸಲಿ ಎಂದು ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಆಗ್ರಹಿಸಿದರು.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ. 

Trending News