ರಾಜ್ಯದಲ್ಲಿ ಕನಿಷ್ಠ 22 ಕ್ಷೇತ್ರಗಳಲ್ಲಿ ಬಿಜೆಪಿ ಗೆಲುವು: ಯಡಿಯೂರಪ್ಪ

ಬಿಜೆಪಿಯ ಹಾಲಿ ಸಂಸದರಿಗೆ ಟಿಕೆಟ್ ಸಿಗಲಿದೆ. ಕಾಂಗ್ರೆಸ್ ಪಕ್ಷಕ್ಕೆ ರಾಜೀನಾಮೆ ನೀಡಿ ಬಿಜೆಪಿಗೆ ಸೇರ್ಪಡೆಯಾಗಿರುವ ಉಮೇಶ್ ಜಾದವ್ ಗೆ ಕಲಬುರಗಿ ಕ್ಷೇತ್ರದ ಟಿಕೆಟ್- ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ.

Last Updated : Mar 13, 2019, 04:21 PM IST
ರಾಜ್ಯದಲ್ಲಿ ಕನಿಷ್ಠ 22 ಕ್ಷೇತ್ರಗಳಲ್ಲಿ ಬಿಜೆಪಿ ಗೆಲುವು: ಯಡಿಯೂರಪ್ಪ title=

ಬೆಂಗಳೂರು: ಲೋಕಸಭಾ ಚುನಾವಣೆಯಲ್ಲಿ ರಾಜ್ಯದಲ್ಲಿ ಕನಿಷ್ಠ 22 ಕ್ಷೇತ್ರಗಳಲ್ಲಿ ಭಾರತೀಯ ಜನತಾ ಪಕ್ಷ ಗೆಲುವು ಸಾಧಿಸಲಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ವಿಧಾನಸಭೆ ಪ್ರತಿಪಕ್ಷ ನಾಯಕ ಬಿ.ಎಸ್. ಯಡಿಯೂರಪ್ಪ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಬೆಂಗಳೂರಿನಲ್ಲಿಂದು ಸುದ್ದಿಗೋಷ್ಠಿ ನಡೆಸಿ ಆತನಾಡಿದ ಅವರು, ಈ ಬಾರಿಯ ಚುನಾವಣೆಯಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರದ ಸಾಧನೆಗಳು, ರಾಜ್ಯ ಸರ್ಕಾರದ ವೈಫಲ್ಯಗಳನ್ನು ಮುಂದಿತ್ತು ಬಿಜೆಪಿ ಚುನಾವಣಾ ಎದುರಿಸಲಿದೆ. ರಾಜ್ಯದ 28 ಕ್ಷೇತ್ರಗಳ ಪೈಕಿ ಕನಿಷ್ಠ 22 ಕ್ಷೇತ್ರಗಳಲ್ಲಿ ಬಿಜೆಪಿ ಗೆಲುವು ಸಾಧಿಸುವ ಸಾಧ್ಯತೆಯಿದ್ದು, ಪಕ್ಷದಲ್ಲಿ ಎಲ್ಲರೂ ಅದಕ್ಕಾಗಿ ಶ್ರಮಿಸಬೇಕು ಎಂದು ಕಾರ್ಯಕರ್ತರಿಗೆ ಕರೆ ನೀಡಿದರು.

ನರೇಂದ್ರ ಮೋದಿಯವರ ನಾಯಕತ್ವ ವಿಶ್ವಕ್ಕೆ ಮಾದರಿ:
ನರೇಂದ್ರ ಮೋದಿ ಸರ್ಕಾರ ಜನತೆಗೆ ನೀಡಿದ ಭರವಸೆಗಳನ್ನು ಈಡೇರಿಸಿದೆ. ಭ್ರಷ್ಟಾಚಾರ ರಹಿತ ಆಡಳಿತ ನೀಡಿದ್ದು, ಅಭಿವೃದ್ಧಿಯಲ್ಲಿ ಮುಂದುವರೆದ ದೇಶಗಳಿಗೆ ಸವಾಲು ಹಾಕಿ ಅಮೇರಿಕಾ, ಚೀನಾದೊಂದಿಗೆ ಸಮಾನವಾಗಿ ದಾಪುಗಾಲಾಕುತ್ತಿದೆ. ಮೋದಿಯವರು ದೇಶದ ವರ್ಚಸ್ಸನ್ನು ವಿಶ್ವಮತ್ತದಲಿ ಹೆಚ್ಚಿಸಿದ್ದಾರೆ. ನರೇಂದ್ರ ಮೋದಿಯವರ ನಾಯಕತ್ವ ವಿಶ್ವಕ್ಕೆ ಮಾದರಿಯಾಗಿದ್ದು, ಅವರ ನಾಯಕತ್ವವನ್ನು ಜಗತ್ತಿನ ಹಲವು ದೇಶಗಳು ಪ್ರಶಂಸಿಸುತ್ತಿವೆ ಎಂದು ಬಿಎಸ್ ವೈ ಹೇಳಿದರು.

ಎಲ್ಲ ಹಾಲಿ ಸಂಸದರಿಗೆ ಟಿಕೆಟ್: 
ಈ ಚುನಾವಣೆಯಲ್ಲಿ ರಾಜ್ಯದಲ್ಲಿ ಎಲ್ಲಾ 16 ಹಾಲಿ ಸಂಸದರಿಗೆ ಟಿಕೆಟ್ ದೊರೆಯಲಿದೆ. ಮಾ. 15ರಂದು ಪಕ್ಷದ ಕೋರ್ ಕಮಿಟಿ ಸಭೆ ನಡೆಯಲಿದ್ದು, ಮಾ.16ರಂದು ದೆಹಲಿಗೆ ತೆರಳಿ 22 ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಅಂತಿಮಗೊಳಿಸಲಾಗುವುದು. ಕಾಂಗ್ರೆಸ್ ಪಕ್ಷಕ್ಕೆ ರಾಜೀನಾಮೆ ನೀಡಿ ಬಿಜೆಪಿಗೆ ಸೇರ್ಪಡೆಯಾಗಿರುವ ಉಮೇಶ್ ಜಾದವ್ ಅವರಿಗೆ ಕಲಬುರಗಿ ಕ್ಷೇತ್ರದಿಂದ ಟಿಕೆಟ್ ನೀಡಲಾಗುವುದು ಎಂದು ಯಡಿಯೂರಪ್ಪ ತಿಳಿಸಿದರು.
 

Trending News