ಸ್ಥಳೀಯ ಸಂಸ್ಥೆ ಚುನಾವಣೆ: ದಕ್ಷಿಣ ಕನ್ನಡದಲ್ಲಿ ಬಿಜೆಪಿ ಮೇಲುಗೈ

ಪುತ್ತೂರು, ಉಳ್ಳಾಲ, ಬಂಟ್ವಾಳದ 89 ವಾರ್ಡ್ ಗಳಲ್ಲಿ ಭಾರತೀಯ ಜನತಾ ಪಕ್ಷ 42, ಕಾಂಗ್ರೆಸ್ 30, ಜೆಡಿಎಸ್ 4 ಹಾಗೂ ಪಕ್ಷೇತರರು 13 ಮಂದಿ ಗೆಲುವು ಸಾಧಿಸಿದ್ದಾರೆ.

Last Updated : Sep 3, 2018, 02:13 PM IST
ಸ್ಥಳೀಯ ಸಂಸ್ಥೆ ಚುನಾವಣೆ: ದಕ್ಷಿಣ ಕನ್ನಡದಲ್ಲಿ ಬಿಜೆಪಿ ಮೇಲುಗೈ title=

ಮಂಗಳೂರು: ರಾಜ್ಯ ರಾಜಕೀಯದಲ್ಲಿ ಭಾರೀ ಕುತೂಹಲ ಮೂಡಿಸಿದ್ದ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಮೈತ್ರಿ ಸರ್ಕಾರದ ಪ್ರತಿಷ್ಠೆಯ ಕಣವಾಗಿದ್ದ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬಿಜೆಪಿ ಮೇಲುಗೈ ಸಾಧಿಸಿದ್ದು, ಕಾಂಗ್ರೆಸ್'ಗೆ ತೀವ್ರ ಮುಖಭಂಗವಾಗಿದೆ.

ದಕ್ಷಿಣಕನ್ನಡ ಜಿಲ್ಲೆಯ ಪುತ್ತೂರು ನಗರಸಭೆ ಮತ್ತು ಬಂಟ್ವಾಳ ಪುರಸಭೆಯಲ್ಲಿ ಬಿಜೆಪಿ ಮೇಲುಗೈ ಸಾಧಿಸಿದ್ದು, ಉಲ್ಲಾಳ ನಗರಸಭೆಯಲ್ಲಿ ಕಾಂಗ್ರೆಸ್ ಮೇಲುಗೈ ಸಾಧಿಸಿದೆ. ಒಟ್ಟಾರೆ ಪುತ್ತೂರು, ಉಳ್ಳಾಲ, ಬಂಟ್ವಾಳದ 89 ವಾರ್ಡ್ ಗಳಲ್ಲಿ ಭಾರತೀಯ ಜನತಾ ಪಕ್ಷ 42, ಕಾಂಗ್ರೆಸ್ 30, ಜೆಡಿಎಸ್ 4 ಹಾಗೂ ಪಕ್ಷೇತರರು 13 ಮಂದಿ ಗೆಲುವು ಸಾಧಿಸಿದ್ದಾರೆ.

ಪುತ್ತೂರು ನಗರಸಭೆಯ 31 ಸ್ಥಾನಗಳಲ್ಲಿ ಬಿಜೆಪಿ 25, ಕಾಂಗ್ರೆಸ್ 5 ಹಾಗೂ ಪಕ್ಷೇತರರು 1 ಸ್ಥಾನ ಗಳಿಸಿದ್ದಾರೆ. ಇನ್ನೂ, ಉಲ್ಲಾಳ ನಗರಸಭೆಯ 31 ಸ್ಥಾನಗಳ ಪೈಕಿ ಬಿಜೆಪಿ 6, ಕಾಂಗ್ರೆಸ್ 13, ಜೆಡಿಎಸ್ 4 ಮತ್ತು ಪಕ್ಷೇತರರು 8 ವಾರ್ಡ್ಗಳಲ್ಲಿ ಜಯ ಸಾಧಿಸಿದ್ದಾರೆ. ಇನ್ನು, 27 ಸ್ಥಾನಗಳಿರುವ ಬಂಟ್ವಾಳ ಪುರಸಭೆಯಲ್ಲಿ ಬಿಜೆಪಿ 11, ಕಾಂಗ್ರೆಸ್ 12, ಎಸ್ ಡಿಪಿಐ 4 ವಾರ್ಡ್ ಗಳಲ್ಲಿ ಗೆಲುವು ಸಾಧಿಸಿದೆ.

Trending News