ಸುಮಲತಾ, ಯಶ್, ದರ್ಶನ್‌ಗೆ ಸಿಆರ್‌ಪಿಎಫ್ ಭದ್ರತೆಗೆ ಕೇಂದ್ರ ಸರ್ಕಾರಕ್ಕೆ ಬಿಜೆಪಿ ಪತ್ರ

ಬಿಜೆಪಿ ಪ್ರಧಾನ ಕಾರ್ಯದರ್ಶಿ ಹಾಗೂ ಸಚಿವ ಅರವಿಂದ ಲಿಂಬಾವಳಿ ಅವರು ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್ ಗೆ ಪತ್ರ ಬರೆದಿದ್ದು ಸೂಕ್ತ ಭದ್ರತೆ ಕಲ್ಪಿಸುವಂತೆ ಮನವಿ ಮಾಡಿದ್ದಾರೆ.

Last Updated : Mar 27, 2019, 05:11 AM IST
ಸುಮಲತಾ, ಯಶ್, ದರ್ಶನ್‌ಗೆ ಸಿಆರ್‌ಪಿಎಫ್ ಭದ್ರತೆಗೆ ಕೇಂದ್ರ ಸರ್ಕಾರಕ್ಕೆ ಬಿಜೆಪಿ ಪತ್ರ title=

ಬೆಂಗಳೂರು: ಮಂಡ್ಯ ಲೋಕಸಭಾ ಕ್ಷೇತ್ರದ ಬಿಜೆಪಿ ಬೆಂಬಲಿತ ಅಭ್ಯರ್ಥಿ ಸುಮಲತಾ ಅಂಬರೀಶ್ ಹಾಗೂ ನಟ ಯಶ್, ದರ್ಶನ್ ಅವರಿಗೆ ಸಿಆರ್ ಪಿಎಫ್ ಭದ್ರತೆ ಒದಗಿಸುವಂತೆ ಕೋರಿ ಕೇಂದ್ರ ಸರ್ಕಾರಕ್ಕೆ ಬಿಜೆಪಿ ಪತ್ರದ ಮೂಲಕ ಮನವಿ ಮಾಡಿದೆ. 

ಬಿಜೆಪಿ ಪ್ರಧಾನ ಕಾರ್ಯದರ್ಶಿ ಹಾಗೂ ಸಚಿವ ಅರವಿಂದ ಲಿಂಬಾವಳಿ ಅವರು ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್ ಗೆ ಪತ್ರ ಬರೆದಿದ್ದು, ಈ ಬಗ್ಗೆ ಕೇಂದ್ರ ಸರ್ಕಾರಕ್ಕೆ ಪತ್ರ ಬರೆದಿದ್ದು, ಜೆಡಿಎಸ್ ಮತ್ತು ಕಾಂಗ್ರೆಸ್ ನಾಯಕರು ಸುಮಲತಾ, ದರ್ಶನ್ ಮತ್ತು ಯಶ್ ಅವರ ವಿರುದ್ಧ ಬಹಿರಂಗ ಸಭೆಗಳಲ್ಲಿ ಅಪಪ್ರಚಾರ ಮಾಡುತ್ತಿದ್ದಾರೆ. ಸಾಮಾಜಿಕ ಜಾಲತಾಣಗಳ ಮೂಲಕವೂ ಅಪಪ್ರಚಾರ ಮಾಡಲಾಗುತ್ತಿದೆ. ಅಲ್ಲದೆ ಅವರ ಮನೆಯ ಮೇಲೆ ಕಲ್ಲುತೂರಾಟಗಳು ನಡೆಯುತ್ತಿವೆ. ಹೀಗಾಗಿ ಅವರಿಗೆ ಸೂಕ್ತ ಭದ್ರತೆ ಕಲ್ಪಿಸುವಂತೆ ಮನವಿ ಮಾಡಿದ್ದಾರೆ.

ಸೋಮವಾರವಷ್ಟೇ ಸುಮಲತಾ ಅವರು ತಮ್ಮ ದೂರವಾಣಿ ಕದ್ದಾಲಿಕೆ ಮಾಡಿಸಲಾಗಿದೆ. ಮನೆಯ ಬಳಿ ಗುಪ್ತಚರ ದಳದವರು ತಮ್ಮ ಚಲನವಲನಗಳನ್ನು ಗಮನಿಸುತ್ತಿದ್ದಾರೆ. ಸಿಎಂ ಹೆಚ್.ಡಿ.ಕುಮಾರಸ್ವಾಮಿ ಅವರು ತಮ್ಮ ಮಗ ನಿಖಿಲ್ ಕುಮಾರಸ್ವಾಮಿ ಪರವಾಗಿ ಹಾಗೂ ತಮ್ಮ ವಿರುದ್ಧವಾಗಿ ಅಧಿಕಾರ ದುರುಪಯೋಗ ಮಾಡಿಕೊಳ್ಳುತ್ತಿದ್ದಾರೆ. ಬೆದರಿಯ ಹೇಳಿಕೆಗಳನ್ನು ನೀಡುತ್ತಿದ್ದಾರೆ ಎಂದು ಆರೋಪಿಸಿ ಚುನಾವಣಾ ಆಯೋಗಕ್ಕೆ ದೂರು ನೀಡಿದ್ದರು.

ಅಷ್ಟೇ ಅಲ್ಲದೆ, ಸುಮಲತಾ ಅವರು ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸಲು ಬೆಂಬಲವಾಗಿ ನಿಂತ ನಟ ದರ್ಶನ್ ಮನೆಯ ಮೇಲೂ ಕಲ್ಲು ತೂರಾಟಗಳು ನಡೆದಿದ್ದವು. ಇದನ್ನು ಜೆಡಿಎಸ್ ಪಕ್ಷದವರೇ ನಡೆಸಿದ್ದಾಗಿ ಸುಮಲತಾ ಬೆಮ್ಬಲಿಗಳು ಆರೋಪಿಸಿದ್ದರು. ಈ ಎಲ್ಲಾ ಘಟನೆಗಳ ಬೆನ್ನಲ್ಲೇ ಸುಮಲತಾ, ಪುತ್ರ ಅಭಿಷೇಕ್ ಹಾಗೂ ದರ್ಶನ್, ಯಶ್ ಅವರಿಗೆ ಸೂಕ್ತ ಭದ್ರತೆ ಒದಗಿಸುವಂತೆ ಬಿಜೆಪಿ ಕೇಂದ್ರ ಸರ್ಕಾರವನ್ನು ಮನವಿ ಮಾಡಿದೆ. 

Trending News