BMTC Bus: ಇನ್ಮುಂದೆ ಚಿಕ್ಕಬಳ್ಳಾಪುರಕ್ಕೂ ಬಿಎಂಟಿಸಿ ಬಸ್ ಸಂಚಾರ

BMTC bus service: ಚಿಕ್ಕಬಳ್ಳಾಪುರಕ್ಕೆ ಬಿಎಂಟಿಸಿ ಬಸ್ ವ್ಯವಸ್ಥೆ ಮಾಡಿರುವುದು ಸ್ವಾಗತಾರ್ಹ. ಇದು ವಿದ್ಯಾರ್ಥಿಗಳಿಗೆ, ರೈತರಿಗೆ, ಉದ್ಯೋಗಿಗಳಿಗೆ ಎಲ್ಲರಿಗೂ ಅನುಕೂಲವಾಗಲಿದೆ ಎಂದು ಸಚಿವ ಡಾ.ಕೆ.ಸುಧಾಕರ್ ಸಂತಸ ವ್ಯಕ್ತಪಡಿಸಿದ್ದಾರೆ.

Written by - Manjunath Hosahalli | Edited by - Puttaraj K Alur | Last Updated : Jan 4, 2023, 04:32 PM IST
  • ಬಿಎಂಟಿಸಿ ಬಸ್​​ಗಳು ಇನ್ನು ಮುಂದೆ ಚಿಕ್ಕಬಳ್ಳಾಪುರ ಜಿಲ್ಲೆಗೂ ಸಂಚರಿಸಲಿವೆ
  • ಬಿಎಂಟಿಸಿ ಕಚೇರಿಯಲ್ಲಿ ನಡೆದ ಆಡಳಿತ ಮಂಡಳಿ ಸಭೆಯಲ್ಲಿ ಒಮ್ಮತದ ನಿರ್ಧಾರ
  • ಚಿಕ್ಕಬಳ್ಳಾಪುರಕ್ಕೆ ಬಿಎಂಟಿಸಿ ಬಸ್ ಸೌಲಭ್ಯ ವಿಸ್ತರಿಸಿದ್ದಕ್ಕೆ ಸಚಿವ ಡಾ.ಕೆ.ಸುಧಾಕರ್ ಹರ್ಷ
BMTC Bus: ಇನ್ಮುಂದೆ ಚಿಕ್ಕಬಳ್ಳಾಪುರಕ್ಕೂ ಬಿಎಂಟಿಸಿ ಬಸ್ ಸಂಚಾರ title=
ಚಿಕ್ಕಬಳ್ಳಾಪುರಕ್ಕೂ ಬಿಎಂಟಿಸಿ ಬಸ್

ಬೆಂಗಳೂರು: ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ ಜಿಲ್ಲೆಗೆ ಮಾತ್ರ ಸೀಮಿತವಾಗಿದ್ದ ಬಿಎಂಟಿಸಿ ಬಸ್​​ಗಳು ಇನ್ನು ಮುಂದೆ ಚಿಕ್ಕಬಳ್ಳಾಪುರದಲ್ಲೂ ಸಂಚಾರ ಮಾಡಲಿವೆ. ಈ  ಮೂಲಕ ಬಿಎಂಟಿಸಿ ವ್ಯಾಪ್ತಿಯನ್ನು ಚಿಕ್ಕಬಳ್ಳಾಪುರಕ್ಕೂ ವಿಸ್ತರಣೆ ಮಾಡಿದೆ.

ಬಿಎಂಟಿಸಿ ಕಚೇರಿಯಲ್ಲಿ ನಡೆದ ಆಡಳಿತ ಮಂಡಳಿ ಸಭೆಯಲ್ಲಿ ಈ ಒಮ್ಮತದ ತೀರ್ಮಾನ ಕೈಗೊಳ್ಳಲಾಗಿದೆ. ಹಲವಾರು ವರ್ಷಗಳಿಂದ ಇದ್ದ ಚಿಕ್ಕಬಳ್ಳಾಪುರ ಜನರ ಬೇಡಿಕೆಗೆ ಸ್ಪಂದಿಸಲಾಗಿದ್ದು, BMTC ಬೋರ್ಡ್ ಅನುಮತಿ ನೀಡುವ ಮೂಲಕ ಪ್ರಯಾಣಿಕರಿಗೆ ಸಿಹಿ ಸುದ್ದಿ ನೀಡಿದೆ.

ಇದನ್ನೂ ಓದಿ: ಸಿದ್ದರಾಮಯ್ಯ ₹1000 ನೋಟಿನಂತೆ, ಡಿಕೆಶಿ ₹2000 ನೋಟಿನಂತೆ: ಬಿಜೆಪಿ ಟೀಕೆ

ಸಂತಸ ವ್ಯಕ್ತಪಡಿಸಿದ ಸಚಿವ ಕೆ.ಸುಧಾಕರ್

ಚಿಕ್ಕಬಳ್ಳಾಪುರಕ್ಕೆ ಬಿಎಂಟಿಸಿ ಬಸ್ ವ್ಯವಸ್ಥೆ ಮಾಡಿರುವುದು ಸ್ವಾಗತಾರ್ಹ ಎಂದು ಸಚಿವ ಡಾ.ಕೆ.ಸುಧಾಕರ್ ಸಂತಸ ವ್ಯಕ್ತಪಡಿಸಿದ್ದಾರೆ. ಚಿಕ್ಕಬಳ್ಳಾಪುರವು ಬೆಂಗಳೂರಿಗೆ ಬಹಳ ಹತ್ತಿರವಿರುವ ಜಿಲ್ಲೆ. ಹೀಗಾಗಿ ಮುಕ್ಕಾಲು ಗಂಟೆಯಲ್ಲಿ ಹೋಗಬಹುದು. ಇದು ವಿದ್ಯಾರ್ಥಿಗಳಿಗೆ, ರೈತರಿಗೆ, ಉದ್ಯೋಗಿಗಳಿಗೆ ಎಲ್ಲರಿಗೂ ಅನುಕೂಲವಾಗಲಿದೆ ಎಂದು ಅವರು ಹೇಳಿದರು.

ಚಿಕ್ಕಬಳ್ಳಾಪುರ ಜಿಲ್ಲೆಗೆ ಬಿಎಂಟಿಸಿ ಬಸ್ ವ್ಯವಸ್ಥೆ ಕಲ್ಪಿಸಲು ಸಹಕರಿಸಿದ ಬಿಎಂಟಿಸಿ ಉಪಾಧ್ಯಕ್ಷ ಕೆ.ವಿ.ನವೀನ್ ಕಿರಣ್, ಸಾರಿಗೆ ಸಚಿವರು ಹಾಗೂ ಬಿಎಂಟಿಸಿ ಆಡಳಿತ ವರ್ಗಕ್ಕೆ ಕೃತಜ್ಞತೆ ನಾನು ಸಲ್ಲಿಸುತ್ತೇನೆ ಎಂದು ಇದೇ ವೇಳೆ ಸಚಿವ ಸುಧಾಕರ್ ತಿಳಿಸಿದರು.

ಇದನ್ನೂ ಓದಿಅಮುಲ್ ಜೊತೆ ನಂದಿನಿ ವಿಲೀನ ಮಾಡಲಾಗುತ್ತದೆಂಬ ಸುಳ್ಳು ಸುದ್ದಿ ಕೊಟ್ಟಿದ್ಯಾರು?: ಬಿಜೆಪಿ ಪ್ರಶ್ನೆ

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G

Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

Trending News