Lokayukta: ನೂತನ ಲೋಕಾಯುಕ್ತರಾಗಿ ನ್ಯಾ. ಬಿ.ಎಸ್.ಪಾಟೀಲ್ ಪ್ರಮಾಣ ವಚನ ಸ್ವೀಕಾರ

Lokayukta: ರಾಜಭವನದ ಗಾಜಿನ ಮನೆಯಲ್ಲಿ ನೂತನ ಲೋಕಾಯುಕ್ತರಾಗಿ ನ್ಯಾ. ಬಿ.ಎಸ್. ಪಾಟೀಲ್ ಪ್ರಮಾಣ ವಚನ ಸ್ವೀಕಾರ ಮಾಡಿದ್ದಾರೆ. 

Written by - Chetana Devarmani | Last Updated : Jun 15, 2022, 10:33 AM IST
  • ಅನೇಕ ತಿಂಗಳುಗಳಿಂದ ಖಾಲಿ ಇದ್ದ ಕರ್ನಾಟಕ ಲೋಕಾಯುಕ್ತ ಹುದ್ದೆ ಕೊನೆಗೂ ಭರ್ತಿಯಾಗಿದೆ
  • ನೂತನ ಲೋಕಾಯುಕ್ತರಾಗಿ ನ್ಯಾ. ಬಿ.ಎಸ್. ಪಾಟೀಲ್ ಪ್ರಮಾಣ ವಚನ ಸ್ವೀಕಾರ ಮಾಡಿದ್ದಾರೆ
  • ರಾಜಭವನದ ಗಾಜಿನ ಮನೆಯಲ್ಲಿ ಪ್ರಮಾಣ ವಚನ ಸ್ವೀಕಾರ ಸಮಾರಂಭ ನೆರವೇರಿತು
Lokayukta: ನೂತನ ಲೋಕಾಯುಕ್ತರಾಗಿ ನ್ಯಾ. ಬಿ.ಎಸ್.ಪಾಟೀಲ್ ಪ್ರಮಾಣ ವಚನ ಸ್ವೀಕಾರ  title=
ಲೋಕಾಯುಕ್ತ

ಬೆಂಗಳೂರು: ಅನೇಕ ತಿಂಗಳುಗಳಿಂದ ಖಾಲಿ ಇದ್ದ ಕರ್ನಾಟಕ ಲೋಕಾಯುಕ್ತ  ಹುದ್ದೆ ಕೊನೆಗೂ ಭರ್ತಿಯಾಗಿದೆ. ಹಾಲಿ ಉಪ ಉಪಲೋಕಾಯುಕ್ತ ನ್ಯಾಯಮೂರ್ತಿ ಭೀಮನಗೌಡ ಸಂಗನಗೌಡ ಪಾಟೀಲ್ ಅವರನ್ನು ರಾಜ್ಯದ ನೂತನ ಲೋಕಾಯುಕ್ತರನ್ನಾಗಿ ನೇಮಕ ಮಾಡಲಾಗಿದೆ. ನೂತನ ಲೋಕಾಯುಕ್ತರಾಗಿ ನ್ಯಾ. ಬಿ.ಎಸ್. ಪಾಟೀಲ್ ಪ್ರಮಾಣ ವಚನ ಸ್ವೀಕಾರ ಮಾಡಿದ್ದಾರೆ. 

ಇದನ್ನೂ ಓದಿ: ರಾಷ್ಟ್ರ ಪತಿ‌ ಚುನಾವಣೆ ಹಿನ್ನೆಲೆ : ಇಂದು ಪ್ರಾದೇಶಿಕ ಪಕ್ಷಗಳ ನಾಯಕರ ಸಭೆ

ರಾಜಭವನದ ಗಾಜಿನ ಮನೆಯಲ್ಲಿ ಪ್ರಮಾಣ ವಚನ ಸ್ವೀಕಾರ ಸಮಾರಂಭ ನೆರವೇರಿತು. ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಪ್ರಮಾಣ ವಚನ ಬೋಧಿಸಿದರು. ಸಿಎಂ ಬಸವರಾಜ ಬೊಮ್ಮಾಯಿ, ವಿಧಾನಸಭೆ ವಿಪಕ್ಷ ನಾಯಕ ಸಿದ್ದರಾಮಯ್ಯ, ಗೃಹ ಸಚಿವ ಆರಗ ಜ್ಞಾನೇಂದ್ರ, ಸಚಿವರಾದ ವಿ. ಸೋಮಣ್ಣ, ಹಾಲಪ್ಪ ಆಚಾರ್ ಮತ್ತು ಶಾಸಕರು ಉಪಸ್ಥಿತರಿದ್ದರು.

ಲೋಕಾಯುಕ್ತರಾಗಿದ್ದ ನ್ಯಾ. ಪಿ.ವಿಶ್ವನಾಥ್ ಶೆಟ್ಟಿ 2022ರ ಜನವರಿ 27ರಂದು ನಿವೃತ್ತರಾಗಿದ್ದರು. ಅಂದಿನಿಂದ ಸುಮಾರು 5 ತಿಂಗಳುಗಳ ಕಾಲ ಈ ಹುದ್ದೆ ಖಾಲಿ ಇತ್ತು. ಇದೀಗ ಈ ಹುದ್ದೆಗೆ 2019ರ ನವೆಂಬರ್‌ನಿಂದ ಉಪ ಲೋಕಾಯುಕ್ತರಾಗಿ ಕಾರ್ಯನಿರ್ವಹಿಸುತ್ತಿದ್ದ ಬಿ.ಎಸ್.ಪಾಟೀಲ್‍ರನ್ನು ಲೋಕಾಯುಕ್ತರಾಗಿ ನೇಮಕ ಮಾಡಲಾಗಿದೆ.

ಇದನ್ನೂ ಓದಿ: LPG Gas Connection: ಎಲ್‌ಪಿಜಿ ಗ್ಯಾಸ್‌ ಕನೆಕ್ಷನ್ ಇನ್ನು ಬಲು ದುಬಾರಿ

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.
  

Trending News