ಕರ್ನಾಟಕದಲ್ಲಿ 22ಕ್ಕೂ ಹೆಚ್ಚು ಕ್ಷೇತ್ರಗಳಲ್ಲಿ ಗೆಲುವು: ಯಡಿಯೂರಪ್ಪ ವಿಶ್ವಾಸ

ರಾಜ್ಯದಲ್ಲಿ ಮೊದಲನೇ ಹಂತದ ಲೋಕಸಭಾ ಚುನಾವಣೆಗೆ ದಿನಗಣನೆ ಆರಂಭವಾಗಿದ್ದು, ನಾವು ಕರ್ನಾಟಕದಲ್ಲಿ 22 ಕ್ಕೂ ಹೆಚ್ಚು ಕ್ಷೇತ್ರಗಳನ್ನು ಗೆಲ್ಲುತ್ತೇವೆ ಎಂದು ಯಡಿಯೂರಪ್ಪ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

Last Updated : Mar 27, 2019, 12:47 PM IST
ಕರ್ನಾಟಕದಲ್ಲಿ 22ಕ್ಕೂ ಹೆಚ್ಚು ಕ್ಷೇತ್ರಗಳಲ್ಲಿ ಗೆಲುವು: ಯಡಿಯೂರಪ್ಪ ವಿಶ್ವಾಸ title=

ಚಿತ್ರದುರ್ಗ: ಕರ್ನಾಟಕದಲ್ಲಿ 22ಕ್ಕೂ ಅಧಿಕ ಲೋಕಸಭಾ ಸ್ಥಾನಗಳನ್ನು ಗೆಲ್ಲುತ್ತೇವೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಹೇಳಿದ್ದಾರೆ.

ಮೊದಲನೇ ಹಂತದ ಲೋಕಸಭೆ ಚುನಾವಣೆಗೆ ಕೆಲವೇ ದಿನಗಳು ಉಳಿದಿರುವ ಹಿನ್ನೆಲೆಯಲ್ಲಿ ಚಿತ್ರದುರ್ಗದಲ್ಲಿ ಮಂಗಳವಾರ ರೋಡ್ ಶೋ ನಡೆಸಿ ಪ್ರಚಾರ ಕೈಗೊಂಡ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಯಡಿಯೂರಪ್ಪ, ರಾಜ್ಯದಲ್ಲಿ ಮೊದಲನೇ ಹಂತದ ಲೋಕಸಭಾ ಚುನಾವಣೆಗೆ ದಿನಗಣನೆ ಆರಂಭವಾಗಿದ್ದು, ನಾವು ಕರ್ನಾಟಕದಲ್ಲಿ 22 ಕ್ಕೂ ಹೆಚ್ಚು ಕ್ಷೇತ್ರಗಳನ್ನು ಗೆಲ್ಲುತ್ತೇವೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಸೂರ್ಯ ಚಂದ್ರ ಇರುವುದು ಎಷ್ಟು ಸತ್ಯವೋ, ಮೋದಿ ಪ್ರಧಾನಿ ಮತ್ತೆ ಆಗುವುದೇ ಅಷ್ಟೇ ಸತ್ಯ ಎಂದ ಯಡಿಯೂರಪ್ಪ ಅವರು, ಲೋಕಸಭಾ ಚುನಾವಣೆಯಲ್ಲಿ 300 ಕ್ಕೂ ಅಧಿಕ ಸ್ಥಾನಗಳಲ್ಲಿ ಗೆಲುವು ಸಾಧಿಸುವುದಾಗಿ ಹೇಳಿದ್ದಾರೆ. 

Trending News