ಇಳಿವಯಸ್ಸಿನಲ್ಲಿ ಪೋಕ್ಸೋ ಕೇಸ್‌; ಯಡಿಯೂರಪ್ಪನ ಮೇಲೆ 20 ಕೇಸ್‌ಗಳಿಗೆ: ಸಿಎಂ ಸಿದ್ದರಾಮಯ್ಯ

Siddaramaiah vs BS Yediyurappa: ಬಿ.ಎಸ್.ಯಡಿಯೂರಪ್ಪನ ವಿರುದ್ಧ 20ಕ್ಕೂ ಹೆಚ್ಚು ಪ್ರಕರಣಗಳಿದ್ದು, ಈ ಕುರಿತು ವಿವರವಾದ ಮಾಹಿತಿಯನ್ನು ನೀಡಲಿದ್ದೇನೆ. ಯಡಿಯೂರಪ್ಪ ತಮ್ಮ ಅಧಿಕಾರಾವಧಿಯಲ್ಲಿ ಚೆಕ್‌ ಮೂಲಕ ಲಂಚದ ಹಣ ಪಡೆದುಕೊಂಡಿದ್ದರು. ಅಕ್ರಮವಾಗಿ ಡಿನೋಟಿಫಿಕೇಶನ್‌ ಮಾಡಿದ್ದರು ಎಂದು ಸಿಎಂ ಸಿದ್ದರಾಮಯ್ಯ ಕಿಡಿಕಾರಿದ್ದಾರೆ.

Written by - Puttaraj K Alur | Last Updated : Aug 7, 2024, 07:26 PM IST
  • ಇಳಿವಯಸ್ಸಿನಲ್ಲಿ ಪೋಕ್ಸೋ ಪ್ರಕರಣದಲ್ಲಿ ಸಿಲಿಕಿರುವ ಯಡಿಯೂರಪ್ಪನಿಗೆ ನನ್ನ ಬಗ್ಗೆ ಮಾತನಾಡುವ ನೈತಿಕತೆ ಇಲ್ಲ
  • ಯಡಿಯೂರಪ್ಪ ವಿರುದ್ಧ 20ಕ್ಕೂ ಅಧಿಕ ಪ್ರಕರಣಗಳಿದ್ದು, ಈ ಕುರಿತು ವಿವರವಾದ ಮಾಹಿತಿ ನೀಡಲಿದ್ದೇನೆಂದ ಸಿಎಂ
  • ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯರ ರಾಜೀನಾಮೆಗೆ ಆಗ್ರಹಿಸಿದ್ದ ಬಿ.ಎಸ್‌.ಯಡಿಯೂರಪ್ಪ
ಇಳಿವಯಸ್ಸಿನಲ್ಲಿ ಪೋಕ್ಸೋ ಕೇಸ್‌; ಯಡಿಯೂರಪ್ಪನ ಮೇಲೆ 20 ಕೇಸ್‌ಗಳಿಗೆ: ಸಿಎಂ ಸಿದ್ದರಾಮಯ್ಯ title=
ಯಡಿಯೂರಪ್ಪ ವಿರುದ್ಧ ಸಿದ್ದರಾಮಯ್ಯ ಆಕ್ರೋಶ!

Siddaramaiah vs BS Yediyurappa: ಇಳಿವಯಸ್ಸಿನಲ್ಲಿ ಪೋಕ್ಸೋ ಪ್ರಕರಣದಲ್ಲಿ ಸಿಲುಕಿರುವ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪಗೆ ನನ್ನ ಬಗ್ಗೆ ಮಾತನಾಡಿವ ಯಾವುದೇ ನೈತಿಕತೆ ಇಲ್ಲವೆಂದು ಸಿಎಂ ಸಿದ್ದರಾಮಯ್ಯ ಕಿಡಿಕಾರಿದ್ದಾರೆ. ಮುಡಾ ಹಗರಣ ಸಂಬಂಧ ಯಡಿಯೂರಪ್ಪನವರು ಸಿದ್ದರಾಮಯ್ಯರ ರಾಜೀನಾಮೆಗೆ ಆಗ್ರಹಿಸಿದ್ದರು. ನಾಚಿಕೆ, ಮಾನ-ಮರ್ಯಾದೆ ಇದ್ದರೆ ಶೀಘ್ರವೇ ಖುರ್ಚಿ ಬಿಟ್ಟು ಇಳಿಯಲಿ ಅಂತಾ ಆಕ್ರೋಶ ವ್ಯಕ್ತಪಡಿಸಿದ್ದರು. ಬಿಎಸ್‌ವೈ ಹೇಳಿಕೆಗೆ ಸಿದ್ದರಾಮಯ್ಯನವರು ಟ್ವೀಟ್‌ ಮೂಲಕ ತಿರುಗೇಟು ನೀಡಿದ್ದಾರೆ. 

ಈ ಬಗ್ಗೆ ಬುಧವಾರ ಟ್ವೀಟ್‌ ಮಾಡಿರುವ ಸಿದ್ದರಾಮಯ್ಯ, ʼಈ ವಯಸ್ಸಿನಲ್ಲಿ ಪೋಕ್ಸೋ ಪ್ರಕರಣದಲ್ಲಿ ಸಿಲುಕಿರುವ ಯಡಿಯೂರಪ್ಪನವರು ನ್ಯಾಯಾಲಯದ ದಯೆಯಿಂದ ಜೈಲು ಪಾಲಾಗದೆ ಬಚಾವಾಗಿದ್ದಾರೆ. 82ರ ವಯಸ್ಸಿನಲ್ಲಿ ಇಂತಹ ಪ್ರಕರಣದಲ್ಲಿ ಚಾರ್ಜ್‌ಶೀಟ್‌ ಹಾಕಿಸಿಕೊಂಡಿರುವ ಅವರಿಗೆ ನನ್ನ ಬಗ್ಗೆ ಮಾತನಾಡುವ ಯಾವುದೇ ನೈತಿಕತೆ ಇಲ್ಲ. ನೈತಿಕತೆ ಇದ್ದರೆ ಅವರು ಸಾರ್ವಜನಿಕ ಜೀವನದಿಂದ ನಿವೃತ್ತರಾಗಬೇಕು ಅಂತಾ ಆಗ್ರಹಿಸಿದ್ದಾರೆ. 

ಇದನ್ನೂ ಓದಿ: ಮನೆ ಬಾಗಿಲಿಗೆ ಆರೋಗ್ಯ ಸೇವೆಗೆ ಕೌಂಟ್‌ ಡೌನ್‌

ಯಡಿಯೂರಪ್ಪನ ವಿರುದ್ಧ 20ಕ್ಕೂ ಹೆಚ್ಚು ಪ್ರಕರಣಗಳಿದ್ದು, ಈ ಕುರಿತು ವಿವರವಾದ ಮಾಹಿತಿಯನ್ನು ನೀಡಲಿದ್ದೇನೆ. ಯಡಿಯೂರಪ್ಪ ತಮ್ಮ ಅಧಿಕಾರಾವಧಿಯಲ್ಲಿ ಚೆಕ್‌ ಮೂಲಕ ಲಂಚದ ಹಣ ಪಡೆದುಕೊಂಡಿದ್ದರು. ಅಕ್ರಮವಾಗಿ ಡಿನೋಟಿಫಿಕೇಶನ್‌ ಮಾಡಿದ್ದರು. ನಾವು ಅಂತಹ ಯಾವುದೇ ಅಕ್ರಮಗಳನ್ನು ಎಸಗಿಲ್ಲ. ವಿಪಕ್ಷಗಳು ಸುಳ್ಳನ್ನು ಹೇಳುವ ಮೂಲಕ ಸತ್ಯ ಮಾಡಲು ಸಾಧ್ಯವಿಲ್ಲ. ಸತ್ಯಕ್ಕೇ ಅಂತಿಮ ಜಯ ಸಿಗಲಿದೆ ಅನ್ನೋ ವಿಶ್ವಾಸವಿದೆ ಎಂದು ಹೇಳಿದರು.  

ಮುಡಾ ಪ್ರಕರಣದಲ್ಲಿ ರಾಜ್ಯಪಾಲರು ನೀಡಿರುವ ನೋಟೀಸಿಗೆ ಈಗಾಗಲೇ ಉತ್ತರ ನೀಡಲಾಗಿದ್ದು, ಅದನ್ನು ರಾಜಪಾಲರು ಒಪ್ಪಿಕೊಳ್ಳುವ ನಂಬಿಕೆಯಿದೆ. ಮುಡಾ ವಿಷಯದಲ್ಲಿ ಎಲ್ಲವೂ ಕಾನೂನು ಪ್ರಕಾರವೇ ನಡೆದಿದೆ. ನಿವೇಶನ ಹಂಚಿಕೆಯಲ್ಲಿ ಯಾವುದೇ ರೀತಿಯ ಪ್ರಭಾವ ಬೀರಿಲ್ಲ. ಕಾನೂನು ಪ್ರಕಾರವಾಗಿರುವ ಹಿನ್ನೆಲೆ ಬಿಜೆಪಿ ಸರ್ಕಾರದ ಅವಧಿಯಲ್ಲಿ(2021) ನನ್ನ ಪತ್ನಿಗೆ ಬದಲಿ ನಿವೇಶನ ನೀಡಲಾಗಿದೆ ಎಂದು ಸಿದ್ದರಾಮಯ್ಯ ಸ್ಪಷ್ಟಪಡಿಸಿದರು.

ಇದನ್ನೂ ಓದಿ: ಮೃತ ಪಿಎಸ್‌ಐ ಮನೆಗೆ ಭೇಟಿ ನೀಡಲಿರುವ ಗೃಹ ಸಚಿವ ಜಿ ಪರಮೇಶ್ವರ್‌

ಮುಡಾ ಅಕ್ರಮವಾಗಿ ನಮ್ಮ ಜಮೀನು ಸ್ವಾಧೀನಪಡಿಸಿಕೊಂಡಿರುವ ಹಿನ್ನೆಲೆ ಬದಲಿ ನಿವೇಶನಕ್ಕೆ ಕೋರಿ 2014ರಲ್ಲಿ ನಾನು ಸಿಎಂ ಆಗಿದ್ದ ಸಂದರ್ಭದಲ್ಲಿ ನನ್ನ ಪತ್ನಿ ಅರ್ಜಿ ಸಲ್ಲಿಸಿದ್ದರು. ಆ ಸಂದರ್ಭದಲ್ಲಿ ನಾನು ಈ ಕುರಿತು ಯಾವುದೇ ಕ್ರಮ ಕೈಗೊಂಡಿರಲಿಲ್ಲ. ಬಿಜೆಪಿ ಮತ್ತು ಜೆಡಿಎಸ್‌ ಸೇರಿಕೊಂಡು ಸರ್ಕಾರವನ್ನು ಅಸ್ಥಿರಗೊಳಿಸುವ ಉದ್ದೇಶದಿಂದ ನನ್ನ ಮೇಲೆ ಇಲ್ಲಸಲ್ಲದ ಆಪಾದನೆ ಮಾಡುತ್ತಿದ್ದಾರೆ. ʼಆಪರೇಶನ್‌ ಕಮಲʼ ನಡೆಸಲು ಪ್ರಯತ್ನಿಸಿದರೂ, ಸರ್ಕಾರ ಅಸ್ಥಿರಗೊಳಿಸಲು ಸಾಧ್ಯವಾಗದ ಕಾರಣ ಹೀಗೆ ಮಾಡುತ್ತಿದ್ದಾರೆ ಎಂದು ಸಿದ್ದರಾಮಯ್ಯ ಕಿಡಿಕಾರಿದ್ದಾರೆ. 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://tinyurl.com/7jmvv2nz

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್.

Trending News