ಇಂದೇ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಲಿರುವ ಬಿ.ಎಸ್. ಯಡಿಯೂರಪ್ಪ!

Breaking News: ಇಂದು ಮಧ್ಯಾಹ್ನ 12:30ಕ್ಕೆ ರಾಜಭವನದಲ್ಲಿ ಬಿ.ಎಸ್. ಯಡಿಯೂರಪ್ಪ ಪ್ರಮಾಣವಚನ ಸ್ವೀಕರಿಸುವ ಸಾಧ್ಯತೆ.

Last Updated : Jul 26, 2019, 10:07 AM IST
ಇಂದೇ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಲಿರುವ ಬಿ.ಎಸ್. ಯಡಿಯೂರಪ್ಪ! title=
File Image

ಬೆಂಗಳೂರು: ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ದೂರವಾಣಿ ಮೂಲಕ ಸರ್ಕಾರ ರಚನೆಗೆ ಗ್ರೀನ್ ಸಿಗ್ನಲ್ ನೀಡಿರುವ ಹಿನ್ನೆಲೆಯಲ್ಲಿ ಬಿಜೆಪಿ ಶಾಸಕಾಂಗ ಪಕ್ಷದ ನಾಯಕ ಬಿ.ಎಸ್. ಯಡಿಯೂರಪ್ಪ ಇಂದು ಮಧ್ಯಾಹ್ನವೇ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ.

ರಾಜ್ಯದಲ್ಲಿ ಸರ್ಕಾರ ರಚನೆಗೆ ಹಕ್ಕು ಮಂಡಿಸುವಂತೆ ದೂರವಾಣಿ ಮೂಲಕ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಅವರು ದೂರವಾಣಿ ಮೂಲಕ ಆದೇಶಿಸಿರುವ ಹಿನ್ನೆಲೆಯಲ್ಲಿ ರಾಜ್ಯಪಾಲರನ್ನು ಭೇಟಿಯಾಗಿ ಸರ್ಕಾರ ರಚಿಸಲು ಅವಕಾಶ ನೀಡುವಂತೆ ಬಿ.ಎಸ್. ಯಡಿಯೂರಪ್ಪ ಮನವಿ ಸಲ್ಲಿಸಲಿದ್ದಾರೆ.

ಈ ಕುರಿತು ಇಂದು ತಮ್ಮ ಡಾಲರ್ಸ್ ಕಾಲೋನಿ ನಿವಾಸದ ಬಳಿ ಮಾತನಾಡಿದ ಬಿ.ಎಸ್. ಯಡಿಯೂರಪ್ಪ, ರಾಜ್ಯದಲ್ಲಿ ಸರ್ಕಾರ ರಚನೆಗೆ ಹಕ್ಕು ಮಂಡಿಸಲು ಪಕ್ಷದ ವರಿಷ್ಠರಿಂದ ಸೂಚನೆ ಲಭಿಸಿದೆ. ಈ ಹಿನ್ನೆಲೆಯಲ್ಲಿ ಶುಭ ಶುಕ್ರವಾರದಂದೇ ಸರ್ಕಾರ ರಚನೆಗೆ ಅವಕಾಶ ಮಾಡಿಕೊಡುವಂತೆ ಮನವಿ ಮಾಡುತ್ತೇನೆ ಎಂದು ಹೇಳಿದರು.

ಈಗಾಗಲೇ ವಿರೋಧ ಪಕ್ಷದ ನಾಯಕನಾಗಿರುವ ಹಿನ್ನೆಲೆಯಲ್ಲಿ ಶಾಸಕಾಂಗ ಪಕ್ಷದ ಸಭೆ ನಡೆಸುವ ಅಗತ್ಯವಿಲ್ಲ ಎಂದು ಬಿ.ಎಸ್. ಯಡಿಯೂರಪ್ಪ ತಿಳಿಸಿದ್ದಾರೆ. ಇಂದು ಮಧ್ಯಾಹ್ನ 12:30ಕ್ಕೆ ರಾಜಭವನದಲ್ಲಿ ನಾಲ್ಕನೇ ಬಾರಿಗೆ ಮುಖ್ಯಮಂತ್ರಿಯಾಗಿ ಬಿ.ಎಸ್. ಯಡಿಯೂರಪ್ಪ ಅಧಿಕಾರ ಸ್ವೀಕರಿಸುವ ಸಾಧ್ಯತೆ ಇದೆ. 

Trending News