ಬೆಂಗಳೂರು: ಬಿಜೆಪಿಯ ನೂತನ ಸಂಸದೀಯ ಮಂಡಳಿಯಲ್ಲಿ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪರಿಗೆ ಸ್ಥಾನ ದೊರೆತಿದೆ. ಬಿಎಸ್‍ವೈರನ್ನು ನೇಮಕ ಮಾಡಿರುವುದಕ್ಕೆ ಸಿಎಂ ಬಸವರಾಜ್ ಬೊಮ್ಮಾಯಿ ಸಂತಸ ವ್ಯಕ್ತಪಡಿಸಿದ್ದಾರೆ.
ಈ ಬಗ್ಗೆ ಟ್ವೀಟ್ ಮಾಡಿರುವ ಸಿಎಂ ಬೊಮ್ಮಾಯಿ, ‘ನಿಕಟಪೂರ್ವ ಮುಖ್ಯಮಂತ್ರಿ ಹಾಗೂ ರೈತ ನಾಯಕ ಬಿ.ಎಸ್.ಯಡಿಯೂರಪ್ಪ ಅವರು ಬಿಜೆಪಿ ರಾಷ್ಟ್ರೀಯ ಸಂಸದೀಯ ಮಂಡಳಿಯ ಸದಸ್ಯರಾಗಿರುವುದಕ್ಕೆ ನನಗೆ ಅತೀವ ಸಂತೋಷವಾಗಿದೆ. ಪಕ್ಷದ ಅತ್ಯಂತ ಉನ್ನತವಾದ ಸಂಸದೀಯ ಮಂಡಳಿಗೆ ತಮ್ಮನ್ನು ನೇಮಕ ಮಾಡುವುದರ ಮೂಲಕ ಪಕ್ಷ ತಮಗೆ ಅತಿ ದೊಡ್ಡ ಗೌರವದ ಸ್ಥಾನ ನೀಡಿದೆ’ ಎಂದು ಹರ್ಷ ವ್ಯಕ್ತಪಡಿಸಿದ್ದಾರೆ.
ಇದನ್ನೂ ಓದಿ: ಕ್ಲಬ್ ಹೌಸ್ ಗ್ರೂಪ್‌ನಲ್ಲಿ ಡಿಪಿಗೆ ಪಾಕಿಸ್ತಾನದ ಧ್ವಜ ಹಾಕಿ ಅಗೌರವ: ಕಿಡಿಗೇಡಿಗಳ ವಿರುದ್ಧ FIR
ತಾವು ಈ ಹುದ್ದೆಗೆ ಏರಿರುವುದರಿಂದ @BJP4Karnataka ಕ್ಕೆ ಆನೆ ಬಲ ಬಂದಂತಾಗಿದೆ. ಮುಂಬರುವ 2023ರ ರಾಜ್ಯ ಚುನಾವಣೆಯಲ್ಲಿ ಬಿಜೆಪಿ ಜಯಭೇರಿ ನಿಶ್ಚಿತ. @BSYBJP ಅವರನ್ನು ಈ ಉನ್ನತ ಹುದ್ದೆಗೆ ನೇಮಕ ಮಾಡಿರುವ ಪ್ರಧಾನಮಂತ್ರಿ ಶ್ರೀ @narendramodi ಅವರಿಗೆ, ರಾಷ್ಟ್ರೀಯ ಅಧ್ಯಕ್ಷ ಶ್ರೀ @JPNadda ಅವರಿಗೆ ಕೃತಜ್ಞತೆಗಳನ್ನು ಅರ್ಪಿಸುತ್ತೇನೆ.
— Basavaraj S Bommai (@BSBommai) August 17, 2022
ಯಡಿಯೂರಪ್ಪರ ನೇಮಕಾತಿ ಆದೇಶ ಹೊರ ಬರುತ್ತಿದ್ದಂತೆಯೆ ಸಿಎಂ ಬೊಮ್ಮಾಯಿ ಕರೆ ಮಾಡಿ ಶುಭ ಕೋರಿದ್ದಾರೆ. ‘ತಾವು ಈ ಹುದ್ದೆಗೆ ಏರಿರುವುದರಿಂದ ಕರ್ನಾಟಕ ಬಿಜೆಪಿಗೆ ಆನೆ ಬಲ ಬಂದಂತಾಗಿದೆ. ಕರ್ನಾಟಕ ಬಿಜೆಪಿಗೆ ಅಭೂತಪೂರ್ವ ಬೆಂಬಲ ಸಿಕ್ಕಂತಾಗಿದೆ. 2023ರಲ್ಲಿ ರಾಜ್ಯ ವಿಧಾನಸಭೆಗೆ ನಡೆಯಲಿರುವ ಚುನಾವಣೆಯಲ್ಲಿ ಬಿಜೆಪಿ ಜಯಭೇರಿ ನಿಶ್ಚಿತ. ತಮ್ಮನ್ನು ಈ ಉನ್ನತ ಹುದ್ದೆಗೆ ನೇಮಕ ಮಾಡಿರುವ ಪ್ರಧಾನಿ ಮೋದಿಯವರಗೆ ಹಾಗೂ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ದಾರಿಗೆ ಕೃತಜ್ಞತೆಗಳನ್ನು ಅರ್ಪಿಸುತ್ತೇನೆ’ ಎಂದು ಟ್ವೀಟ್ ಮಾಡಿದ್ದಾರೆ.
ನಿತಿನ್ ಗಡ್ಕರಿ & ಶಿವರಾಜ್ ಸಿಂಗ್‍ಗೆ ಕೋಕ್!
11 ಸದಸ್ಯರನ್ನೊಳಗೊಂಡ ಬಿಜೆಪಿಯ ಹೊಸ ಸಂಸದೀಯ ಮಂಡಳಿಯಲ್ಲಿ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ, ಪ್ರಧಾನಿ ಮೋದಿ, ಕೇಂದ್ರ ಸಚಿವರಾದ ರಾಜನಾಥ್ ಸಿಂಗ್, ಅಮಿತ್ ಶಾ, ಕೆ.ಲಕ್ಷ್ಮಣ್ ಇದ್ದಾರೆ. ಮಂಡಳಿಗೆ ಹೊಸದಾಗಿ ಸರ್ಬಾನಂದ ಸೊನೊವಾಲ್ ಮತ್ತು ಬಿಎಸ್‍ವೈರನ್ನು ಸೇರ್ಪಡೆಗೊಳಿಸಲಾಗಿದೆ. ನಿತಿನ್ ಗಡ್ಕರಿ ಹಾಗೂ ಮಧ್ಯ ಪ್ರದೇಶ ಸಿಎಂ ಶಿವರಾಜ್ ಸಿಂಗ್‍ರನ್ನು ಕೈಬಿಡಲಾಗಿದೆ.
ಇದನ್ನೂ ಓದಿ: ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ: ಆರೋಪಿಗಳಿಗೆ ನ್ಯಾಯಾಂಗ ಬಂಧನ ವಿಸ್ತರಣೆ
ಚುನಾವಣಾ ಸಮಿತಿಯಲ್ಲಿಯೂ ಬಿಎಸ್‌ವೈಗೆ ಸ್ಥಾನ
ನೂತನ ಕೇಂದ್ರ ಚುನಾವಣಾ ಸಮಿತಿಯನ್ನೂ ಬಿಜೆಪಿ ಪ್ರಕಟಿಸಿದ್ದು, ಇದರಲ್ಲಿಯೂ ಸಹ ಬಿ.ಎಸ್.ಯಡಿಯೂರಪ್ಪರಿಗೆ ಸ್ಥಾನ ಕಲ್ಪಿಸಲಾಗಿದೆ. 15 ಮಂದಿ ಸದಸ್ಯರ ಚುನಾವಣಾ ಸಮಿತಿಯಲ್ಲಿ ಪ್ರಧಾನಿ ಮೋದಿ, ಕೇಂದ್ರ ಸಚಿವರಾದ ರಾಜನಾಥ್ ಸಿಂಗ್, ಅಮಿತ್ ಶಾ ಕೂಡ ಇದ್ದಾರೆ.
ಪ್ರಧಾನಿ ಮೋದಿಗೆ ಬಿಎಸ್‍ವೈ ಕೃತಜ್ಞತೆ
ಪಕ್ಷದ ಕೇಂದ್ರೀಯ ಸಂಸದೀಯ ಮಂಡಳಿ ಹಾಗೂ ಚುನಾವಣಾ ಸಮಿತಿಯಲ್ಲಿ ನನ್ನನ್ನು ಸದಸ್ಯನನ್ನಾಗಿ ನೇಮಿಸಿರುವ ಪ್ರಧಾನಿ ಶ್ರೀ @narendramodi, ರಾಷ್ಟ್ರೀಯ ಅಧ್ಯಕ್ಷ ಶ್ರೀ @JPNadda ಮತ್ತು ಗೃಹ ಸಚಿವ ಶ್ರೀ @AmitShah ರವರಿಗೆ ಕೃತಜ್ಞತೆಗಳು. ನಮ್ಮ ಪಕ್ಷದ ಉನ್ನತ ಮಟ್ಟದ ಸಮಿತಿಯಲ್ಲಿ ಸೇವೆ ಸಲ್ಲಿಸುವ ಈ ಗೌರವಕ್ಕಾಗಿ ನಾನು ಆಭಾರಿಯಾಗಿದ್ದೇನೆ.
— B.S.Yediyurappa (@BSYBJP) August 17, 2022
‘ಪಕ್ಷದ ಕೇಂದ್ರೀಯ ಸಂಸದೀಯ ಮಂಡಳಿ ಹಾಗೂ ಚುನಾವಣಾ ಸಮಿತಿಯಲ್ಲಿ ನನ್ನನ್ನು ಸದಸ್ಯನನ್ನಾಗಿ ನೇಮಿಸಿರುವ ಪ್ರಧಾನಿ ಮೋದಿ, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಮತ್ತು ಗೃಹ ಸಚಿವ ಅಮಿತ್ ಶಾ ಅವರಿಗೆ ಕೃತಜ್ಞತೆಗಳು. ನಮ್ಮ ಪಕ್ಷದ ಉನ್ನತ ಮಟ್ಟದ ಸಮಿತಿಯಲ್ಲಿ ಸೇವೆ ಸಲ್ಲಿಸುವ ಈ ಗೌರವಕ್ಕಾಗಿ ನಾನು ಆಭಾರಿಯಾಗಿದ್ದೇನೆ’ ಎಂದು ಬಿಎಸ್‍ವೈ ಟ್ವೀಟ್ ಮಾಡಿದ್ದಾರೆ.
ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook, Youtube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.