ಬೆಂಗಳೂರು: 2019ರ ಲೋಕಸಭಾ ಚುನಾವಣೆಗಾಗಿ ಬಹುಜನ ಸಮಾಜವಾದಿ ಪಕ್ಷ(ಬಿಎಸ್ಪಿ) ಕರ್ನಾಟಕದ ಎರಡು ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಅಂತಿಮಗೊಳಿಸಿದೆ.
ಲೋಕಸಭಾ ಚುನಾವಣೆಯಲ್ಲಿ ಕರ್ನಾಟಕದ 28 ಕ್ಷೇತ್ರಗಳಲ್ಲೂ ತನ್ನ ಅಭ್ಯರ್ಥಿಗಳು ಸ್ಪರ್ಧಿಸಲಿದ್ದಾರೆ ತಿಳಿಸಿರುವ ಬಿಎಸ್ಪಿ, ಮಂಗಳವಾರ ಚಾಮರಾಜನಗರ ಮತ್ತು ಚಿಕ್ಕಬಳ್ಳಾಪುರ ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಘೋಷಿಸಿದೆ.
ಕರ್ನಾಟಕದ ಬಿಎಸ್ಪಿ ರಾಜ್ಯಾಧ್ಯಕ್ಷ ಪ್ರೊ. ಹರಿರಾಮ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಿದ್ದು, ಚಾಮರಾಜನಗರ(ಎಸ್ಸಿ) ಕ್ಷೇತ್ರದಿಂದ ಡಾ.ಶಿವಕುಮಾರ್ ಹಾಗೂ ಚಿಕ್ಕಬಳ್ಳಾಪುರ ಕ್ಷೇತ್ರದಿಂದ ಡಾ.ಸಿ.ಎಸ್. ದ್ವಾರಕಾನಾಥ್ ಸ್ಪರ್ಧಿಸಲಿದ್ದಾರೆ ಎಂದು ತಿಳಿಸಿದ್ದಾರೆ.