80ನೇ ವಸಂತಕ್ಕೆ ಕಾಲಿಟ್ಟ ಬಿ.ಎಸ್.ಯಡಿಯೂರಪ್ಪ: ಸಿಎಂ ಬೊಮ್ಮಾಯಿ ಸೇರಿ ಗಣ್ಯರಿಂದ ಶುಭಾಶಯ

ರೈತ ನಾಯಕರು, ಮಾಜಿ ಮುಖ್ಯಮಂತ್ರಿ, ದಿಟ್ಟ ಧೀಮಂತ ನಾಯಕರು, ನನ್ನ ಮಾರ್ಗದರ್ಶಕರಾದ ಬಿ.ಎಸ್.ಯಡಿಯೂರಪ್ಪನವರಿಗೆ ಜನ್ಮದಿನದ ಹಾರ್ದಿಕ ಶುಭಾಶಯಗಳು ಅಂತಾ ಸಿಎಂ ಬಸವರಾಜ್ ಬೊಮ್ಮಾಯಿ ಟ್ವೀಟ್ ಮಾಡಿದ್ದಾರೆ.

Written by - Zee Kannada News Desk | Last Updated : Feb 27, 2022, 09:38 AM IST
  • ಮಾಜಿ ಸಿಎಂ, ಹಿರಿಯ ನಾಯಕ ಬಿ.ಎಸ್.ಯಡಿಯೂರಪ್ಪನವರಿಗೆ ಹುಟ್ಟುಹಬ್ಬದ ಸಂಭ್ರಮ
  • 80ನೇ ವಸಂತಕ್ಕೆ ಕಾಲಿಟ್ಟ ಬಿ.ಎಸ್.ಯಡಿಯೂರಪ್ಪನವರಿಗೆ ಶುಭಾಶಯಗಳ ಮಹಾಪೂರ
  • ಕೊರೊನಾ ಹಿನ್ನಲೆ ನನ್ನ ಜನ್ಮದಿನವನ್ನು ವಿಶೇಷ ರೀತಿಯಲ್ಲಿ ಆಚರಿಸಿಕೊಳ್ಳುತ್ತಿಲ್ಲವೆಂದಿದ್ದ ಬಿಎಸ್ ವೈ
80ನೇ ವಸಂತಕ್ಕೆ ಕಾಲಿಟ್ಟ ಬಿ.ಎಸ್.ಯಡಿಯೂರಪ್ಪ: ಸಿಎಂ ಬೊಮ್ಮಾಯಿ ಸೇರಿ ಗಣ್ಯರಿಂದ ಶುಭಾಶಯ title=
80ನೇ ವಸಂತಕ್ಕೆ ಕಾಲಿಟ್ಟ ಬಿ.ಎಸ್.ಯಡಿಯೂರಪ್ಪ

ಬೆಂಗಳೂರು: ಮಾಜಿ ಮುಖ್ಯಮಂತ್ರಿ, ಬಿಜೆಪಿಯ ಹಿರಿಯ ನಾಯಕ ಬಿ.ಎಸ್.ಯಡಿಯೂರಪ್ಪನವರಿಗೆ ಇಂದು ಹುಟ್ಟುಹಬ್ಬ(BS Yediyurappa Birthday)ದ ಸಂಭ್ರಮ. 80ನೇ ವಸಂತಕ್ಕೆ ಕಾಲಿಟ್ಟ ಕರ್ನಾಟಕ ರಾಜಕಾರಣದ ‘ರಾಜಾಹುಲಿ’ ಖ್ಯಾತಿಯ ಬಿಎಸ್ ವೈಗೆ ಸಿಎಂ ಬಸವರಾಜ್ ಬೊಮ್ಮಾಯಿ ಸೇರಿದಂತೆ ಅನೇಕ ಗಣ್ಯರು ಶುಭಾಶಯಗಳನ್ನು ತಿಳಿಸಿದ್ದಾರೆ.

‘ರೈತ ನಾಯಕರು, ಮಾಜಿ ಮುಖ್ಯಮಂತ್ರಿ, ದಿಟ್ಟ ಧೀಮಂತ ನಾಯಕರು, ನನ್ನ ಮಾರ್ಗದರ್ಶಕರಾದ ಬಿ.ಎಸ್.ಯಡಿಯೂರಪ್ಪನವರಿಗೆ ಜನ್ಮದಿನದ ಹಾರ್ದಿಕ ಶುಭಾಶಯಗಳು. ದೇವರು ಅವರಿಗೆ ಹೆಚ್ಚಿನ ಆಯಸ್ಸು ಹಾಗೂ ಉತ್ತಮ ಆರೋಗ್ಯ ನೀಡಲಿಯೆಂದು ಪ್ರಾರ್ಥಿಸುತ್ತೇನೆ‌’ ಅಂತಾ ಬೊಮ್ಮಾಯಿ(Basavaraj Bommai) ಟ್ವೀಟ್ ಮಾಡಿದ್ದಾರೆ.

ಇದನ್ನೂ ಓದಿ: 'ಬಿಜೆಪಿ ಸರ್ಕಾರ ಬರೀ ಕಾರ್ಪೊರೇಟ್ ಕಂಪನಿಗಳ ಪರ ಇದೆ'- ಸಿದ್ಧರಾಮಯ್ಯ

ಗೃಹ ಸಚಿವ ಆರಗ ಜ್ನಾನೇಂದ್ರ(Araga Jnanendra) ಕೂಡ ಟ್ವೀಟ್ ಮಾಡಿದ್ದು, ‘ರಾಜ್ಯದ ಜನಪ್ರಿಯ ನಾಯಕರು, ರೈತಸ್ನೇಹಿ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪರವರಿಗೆ ಜನ್ಮದಿನದ ಹಾರ್ದಿಕ ಶುಭಾಶಯಗಳು. ದೇವರು ತಮ್ಮನ್ನು ಸದಾ ಸುಖವಾಗಿರಿಸಲಿ. ಉತ್ತಮ ಆರೋಗ್ಯ, ಆಯಸ್ಸನ್ನು ನೀಡಿ ಆಶೀರ್ವದಿಸಲಿ ಎಂದು ಕೋರುತ್ತೇನೆ’ ಅಂತಾ ಹೇಳಿದ್ದಾರೆ.

‘ನಾಡಿನ ಮುತ್ಸದ್ಧಿ ನಾಯಕರು, ನಿಕಟಪೂರ್ವ ಮುಖ್ಯಮಂತ್ರಿಗಳಾದ ಬಿ.ಎಸ್.ಯಡಿಯೂರಪ್ಪ(BS Yediyurappa,)ನವರಿಗೆ ಹುಟ್ಟುಹಬ್ಬದ ಹಾರ್ದಿಕ ಶುಭಾಶಯಗಳು. ಭಗವಂತ ತಮಗೆ ದೀರ್ಘಾಯುಷ್ಯ, ಉತ್ತಮ ಆರೋಗ್ಯ ನೀಡಿ ಹರಸಲಿ, ಇನ್ನಷ್ಟು ಕಾಲ ರಾಜ್ಯಕ್ಕೆ ತಮ್ಮ ಮಾರ್ಗದರ್ಶನ ಸಿಗುವಂತಾಗಲಿ ಎಂದು ಪ್ರಾರ್ಥಿಸುತ್ತೇನೆ’ ಅಂತಾ ಆರೋಗ್ಯ ಸಚಿವ ಡಾ.ಕೆ.ಸುಧಾಕರ್(K Sudhakar) ಟ್ವೀಟ್ ಮಾಡಿದ್ದಾರೆ.

‘ರೈತ ನಾಯಕರು, ಕಾರ್ಯಕರ್ತರಿಗೆ ಮಾರ್ಗದರ್ಶಕರು, ಬಿಜೆಪಿ ಕಟ್ಟಾಳು, ಜನಪ್ರಿಯ ರಾಜಕಾರಣಿ, ನಮ್ಮೆಲ್ಲರ ನೆಚ್ಚಿನ ನಾಯಕ ಬಿ.ಎಸ್ ಯಡಿಯೂರಪ್ಪನವರಿಗೆ ಜನ್ಮ ದಿನದ ಹಾರ್ದಿಕ ಶುಭಾಶಯಗಳು’ ಅಂತಾ ಶಿಕ್ಷಣ ಸಚಿವ ಬಿ.ಸಿ.ನಾಗೇಶ್(BC Nagesh) ಶುಭ ಹಾರೈಸಿದ್ದಾರೆ.

ಇದನ್ನೂ ಓದಿ: ಉಕ್ರೇನ್ ನಿಂದ ಆಗಮಿಸಿರುವವರನ್ನು ಅವರ ಊರುಗಳಿಗೆ ಕಳುಹಿಸಲು ಸರ್ಕಾರ ನೆರವು ನೀಡಲಿದೆ: ಸಿಎಂ ಬಸವರಾಜ ಬೊಮ್ಮಾಯಿ

ಹಾರ-ತುರಾಯಿ, ಉಡುಗೊರೆ ಬೇಡ

ಹುಟ್ಟುಹಬ್ಬದ ಸಂಭ್ರಮದಲ್ಲಿರುವ ಬಿ.ಎಸ್.ಯಡಿಯೂರಪ್ಪ(BS Yediyurappa Birthday) ತಮ್ಮ ಜನ್ಮದಿನದ ಮುಂಚಿತವಾಗಿ ಅಭಿಮಾನಿಗಳಿಗೆ ವಿಶೇಷ ಸಂದೇಶವೊಂದನ್ನು ನೀಡಿದ್ದರು. ಈ ಬಗ್ಗೆ ಟ್ವೀಟ್ ಮಾಡಿದ್ದ ಅವರು, ‘ಆತ್ಮೀಯರೇ, ಹಿತೈಷಿಗಳೇ, ಕೊರೊನಾ ಸಂಕಷ್ಟಗಳ ಹಿನ್ನಲೆ ನನ್ನ ಹುಟ್ಟಿದ ದಿನವನ್ನು ಯಾವುದೇ ವಿಶೇಷ ರೀತಿಯಲ್ಲಿ ನಾನು ಆಚರಿಸಿಕೊಳ್ಳುತ್ತಿಲ್ಲ. ಆದ್ದರಿಂದ ಯಾರೂ ಕೂಡ ಹಾರ, ತುರಾಯಿ, ಉಡುಗೊರೆ ಇತ್ಯಾದಿ ತರಬೇಡಿ ಎಂದು ಕೋರುತ್ತೇನೆ. ನೀವು ಇದ್ದಲ್ಲಿಂದಲೇ ಹಾರೈಸಿ. ನಿಮ್ಮೆಲ್ಲರ ಪ್ರೀತಿ, ಅಭಿಮಾನ, ಆಶೀರ್ವಾದಗಳೇ ನನಗೆ ಶ್ರೀರಕ್ಷೆ’ ಅಂತಾ ಹೇಳಿದ್ದರು.

ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

Trending News