ಟ್ರಂಪ್ ಔತಣಕೂಟದಲ್ಲಿ ಭಾಗಿಯಾಗಲಿರುವ ಬಿಎಸ್​ವೈ

ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ರಾತ್ರಿ 8 ಗಂಟೆಗೆ ಡೊನಾಲ್ಡ್ ಟ್ರಂಪ್ ಅವರಿಗೆ ಆಯೋಜಿಸಿರುವ ಔತಣಕೂಟದಲ್ಲಿ ಭಾಗಿಯಾಗಲಿದ್ದಾರೆ.

Written by - Yashaswini V | Last Updated : Feb 25, 2020, 06:20 AM IST
ಟ್ರಂಪ್ ಔತಣಕೂಟದಲ್ಲಿ ಭಾಗಿಯಾಗಲಿರುವ ಬಿಎಸ್​ವೈ title=

ನವದೆಹಲಿ: ಎರಡು ದಿನಗಳ ಭಾರತ ಪ್ರವಾಸ ಕೈಗೊಂಡಿರುವ ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಆಯೋಜಿಸಿರುವ ಔತಣಕೂಟದಲ್ಲಿ ಭಾಗವಹಿಸುವ ದೃಷ್ಟಿಯಿಂದ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಇಂದು ದೆಹಲಿಗೆ ಆಗಮಿಸಲಿದ್ದಾರೆ‌.

ಬೆಳಗ್ಗೆ 11.45ಕ್ಕೆ ಬೆಂಗಳೂರು ವಿಮಾನ ನಿಲ್ದಾಣದಿಂದ ಹೊರಡುವ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ(B S Yediyurappa) ಮಧ್ಯಾಹ್ನ 2.15ಕ್ಕೆ ದೆಹಲಿಗೆ ಬಂದಿಳಿಯಲಿದ್ದಾರೆ. ಬಳಿಕ ರಾತ್ರಿ 8 ಗಂಟೆಗೆ ಡೊನಾಲ್ಡ್ ಟ್ರಂಪ್(Donald Trump) ಅವರಿಗೆ ಆಯೋಜಿಸಿರುವ ಔತಣಕೂಟದಲ್ಲಿ ಭಾಗಿಯಾಗಲಿದ್ದಾರೆ.

ರಾಷ್ಟ್ರಪತಿ ರಮನಾಥ್ ಕೋವಿಂದ್ ಅವರು ರಾಷ್ಟ್ರಪತಿ ಭವನದಲ್ಲಿ ಈ ಔತಣಕೂಟ ಆಯೋಜಿಸಿದ್ದು ಇದರಲ್ಲಿ ಭಾಗಿಯಾಗುವಂತೆ ಆಹ್ವಾನ‌ ನೀಡಿದ ಹಿನ್ನೆಲೆಯಲ್ಲಿ ದಿಢೀರನೇ ಯಡಿಯೂರಪ್ಪ ದೆಹಲಿಗೆ ಆಗಮಿಸುತ್ತಿದ್ದಾರೆ. ಈ ಔತಣಕೂಟದಲ್ಲಿ ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಸಚಿವರು, ವಿವಿಧ ರಾಜ್ಯಗಳ ಮುಖ್ಯಮಂತ್ರಿಗಳು ಮತ್ತಿತರರು ಪಾಲ್ಗೊಳ್ಳಲಿದ್ದಾರೆ. ನಂತರ ದೆಹಲಿಯ ಕರ್ನಾಟಕ ಭವನದಲ್ಲೇ ವಾಸ್ತವ್ಯ ಹೂಡಲಿರುವ ಯಡಿಯೂರಪ್ಪ ನಾಳೆ ಬೆಳಿಗ್ಗೆ ಬೆಂಗಳೂರಿಗೆ ವಾಪಸ್ ಆಗಲಿದ್ದಾರೆ.

Trending News