ಬೆಂಗಳೂರು : ರಾಜ್ಯ ಸರ್ಕಾರವು ರೈಲ್ವೆ ಮಂತ್ರಾಲಯದೊಂದಿಗೆ 50:50 ರ ವೆಚ್ಚ ಹಂಚಿಕೆ ಆಧಾರದಲ್ಲಿ 9 ಹೊಸ ರೈಲ್ವೆ ಯೋಜನೆಗಳನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸುತ್ತಿದೆ. ರಾಜ್ಯ ಸರ್ಕಾರವು ನಿರ್ಮಾಣ ವೆಚ್ಚದ ಪಾಲನ್ನು ಒದಗಿಸುವುದಲ್ಲದೇ, ಎಲ್ಲಾ ಯೋಜನೆಗಳಿಗೆ ಭೂ ಸ್ವಾಧೀನದ ವೆಚ್ಚವನ್ನು ಸಹ ಭರಿಸಲಿದೆ. ಈ ವರ್ಷದ ಕೇಂದ್ರ ಸರ್ಕಾರದ ಆಯವ್ಯಯದಲ್ಲಿ ಕರ್ನಾಟಕದ ರೈಲು ಜಾಲವನ್ನು ಅಭಿವೃದ್ಧಿಪಡಿಸಲು 7,561 ಕೋಟಿ ರೂ. ಗಳನ್ನು ಮೀಸಲಿಡಲಾಗಿದೆ, ಎಂದು ಸಿಎಂ ಬಸವರಾಜ ಬೊಮ್ಮಾಯಿ ತಿಳಿಸಿದರು.
ಯಾವ ಯೋಜನೆ, ವೆಚ್ಚ ಎಷ್ಟು?
ಕೇಂದ್ರ ಸರ್ಕಾರವು ಈ ವರ್ಷದಲ್ಲಿ ತುಮಕೂರು-ಚಿತ್ರದುರ್ಗ ರೈಲ್ವೆ ಮಾರ್ಗಕ್ಕೆ 220 ಕೋಟಿ ರೂ., ಶಿವಮೊಗ್ಗ-ಶಿಕಾರಿಪುರ ರೈಲ್ವೆ ಮಾರ್ಗಕ್ಕೆ 150 ಕೋಟಿ ರೂ., ಬಾಗಲಕೋಟೆ-ಕುಡಚಿ ರೈಲ್ವೆ ಮಾರ್ಗಕ್ಕೆ 210 ಕೋಟಿ ರೂ., ಮುನಿರಾಬಾದ್-ಗಿಣಿಗೇರಾ- ರಾಯಚೂರು ರೈಲ್ವೆ ಮಾರ್ಗಕ್ಕೆ 150 ಕೋಟಿ ರೂ., ಗದಗ-ವಾಡಿ ರೈಲ್ವೆ ಮಾರ್ಗಕ್ಕೆ 200 ಕೋಟಿ ರೂ., ತುಮಕೂರು-ರಾಯದುರ್ಗ - ರೈಲ್ವೆ ಮಾರ್ಗಕ್ಕೆ 225 ಕೋಟಿ ರೂ., ಒಳಗೊಂಡಂತೆ ಎಲ್ಲಾ ಹೊಸ ರೈಲ್ವೆ ಕಾಮಗಾರಿಗಳಿಗೆ ಒಟ್ಟಾರೆಯಾಗಿ 1,537 ಕೋಟಿ ರೂ. ಗಳನ್ನು ಪ್ರಸಕ್ತ ಸಾಲಿನ ಆಯವ್ಯಯದಲ್ಲಿ ಒದಗಿಸಲಾಗಿದೆ.
ಇದನ್ನೂ ಓದಿ: ರಾಜ್ಯ ಬಜೆಟ್ 2023-24: ಪ್ರತಿ ಗ್ರಾಮ ಪಂಚಾಯಿತಿ ಸಶಕ್ತಿಗೆ ₹780 ಕೋಟಿ ಅನುದಾನ
ಇದಲ್ಲದೆ, ಡಬ್ಲಿಂಗ್ ಕಾಮಗಾರಿಗಳಿಗೂ ಸಹ ಕೇಂದ್ರ ಸರ್ಕಾರ ವಿಶೇಷ ಆದ್ಯತೆ ನೀಡಿದೆ. ಬೈಯ್ಯಪ್ಪನಹಳ್ಳಿ-ಹೊಸೂರು 100 ಕೋಟಿ ರೂ., ಹುಬ್ಬಳ್ಳಿ-ಚಿಕ್ಕಜಾಜೂರು 150 ಕೋಟಿ ರೂ., ಹೊಸಪೇಟೆ- ಹುಬ್ಬಳ್ಳಿ-ಲೋಂಡಾ-ವಾಸ್ಕೋ-ಡ-ಗಾಮ 400 ಕೋಟಿ ರೂ., ಗದಗ-ಹೋಟಗಿ 170 ಕೋಟಿ ರೂ., ಕೆ.ಆರ್. ಪುರಂ-ವೈಟ್ಫೀಲ್ಡ್ 250 ಕೋಟಿ ರೂ. ಒಳಗೊಂಡಂತೆ ಎಲ್ಲಾ ಡಬ್ಲಿಂಗ್ ಕಾಮಗಾರಿಗಳಿಗೆ ಈ ವರ್ಷದಲ್ಲಿ 1,490 ಕೋಟಿ ರೂ. ಗಳನ್ನು ಒದಗಿಸಲಾಗುತ್ತಿದೆ. ಈ ಎಲ್ಲಾ ಕಾಮಗಾರಿಗಳಿಗೆ ಅಗತ್ಯವಿರುವ ರಾಜ್ಯ ಸರ್ಕಾರದ ಪಾಲನ್ನು ನೀಡಲಾಗುವುದು.
ಇದನ್ನೂ ಓದಿ:ಬೊಮ್ಮಾಯಿ ಬಜೆಟ್ನಲ್ಲಿ ರೈತರಿಗೆ ಬಂಪರ್ ಗಿಫ್ಟ್
ತುಮಕೂರು ರಾಯದುರ್ಗ, ಗಿಣಿಗೇರಾ - ರಾಯಚೂರು, ಬಾಗಲಕೋಟೆ-ಕುಡಚಿ ಮತ್ತು ಚಿಕ್ಕಮಗಳೂರು-ಬೇಲೂರು ರೈಲ್ವೆ ಮಾರ್ಗಗಳ ಮೂಲ ಅಂದಾಜು 2,880 ಕೋಟಿ ರೂ. ಗಳಿದ್ದು, ಕಳೆದ ವರ್ಷದಲ್ಲಿ ಇದನ್ನು 5,838 ಕೋಟಿ ರೂ. ಗಳಿಗೆ ಪರಿಷ್ಕರಿಸಲಾಗಿದ್ದು, ಇದಕ್ಕೆ 960 ಕೋಟಿ ರೂ. ಗಳ ಹೆಚ್ಚುವರಿ ಅನುದಾನವನ್ನು ರಾಜ್ಯ ಸರ್ಕಾರದ ಒದಗಿಸಲಾಗುವುದು. ಮುಂದುವರೆದು, ವತಿಯಿಂದ ಬೆಳಗಾವಿ-ಕಿತ್ತೂರು-ಧಾರವಾಡ ರೈಲ್ವೆ ಮಾರ್ಗಕ್ಕೆ ಭೂ ಸ್ವಾಧೀನಕ್ಕಾಗಿ 150 ಕೋಟಿ ರೂ.ಗಳನ್ನು ಈ ವರ್ಷದಲ್ಲಿ ಒದಗಿಸಲಾಗುವುದು.
ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook, Youtube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.