ಉಪ ಸಮರ ಫಲಿತಾಂಶ: ಹುಣಸೂರು ಕ್ಷೇತ್ರದಲ್ಲಿ ಕಾಂಗ್ರೆಸ್‌ಗೆ ಮುನ್ನಡೆ

ಡಿಸೆಂಬರ್ 5 ರಂದು ನಡೆದ ರಾಜ್ಯ ವಿಧಾನಸಭಾ ಉಪಚುನಾವಣೆಯ ಫಲಿತಾಂಶ ಇಂದು ಹೊರಬೀಳಲಿದೆ. 

Last Updated : Dec 9, 2019, 09:03 AM IST
ಉಪ ಸಮರ ಫಲಿತಾಂಶ: ಹುಣಸೂರು ಕ್ಷೇತ್ರದಲ್ಲಿ ಕಾಂಗ್ರೆಸ್‌ಗೆ ಮುನ್ನಡೆ title=
Photo Courtesy: ANI

ಮೈಸೂರು: ಡಿಸೆಂಬರ್ 5 ರಂದು ನಡೆದ ರಾಜ್ಯದ 15 ವಿಧಾನಸಭಾ ಕ್ಷೇತ್ರಗಳಿಗೆ ನಡೆದ ಉಪಚುನಾವಣೆಯ ಫಲಿತಾಂಶ ಇಂದು ಹೊರಬೀಳಲಿದೆ. ಬೆಳಗ್ಗೆಯಿಂದಲೇ ಮತ ಎಣಿಕೆ ಆರಂಭವಾಗಿದ್ದು, ಸುಮಾರು 11 ಗಂಟೆ ಹೊತ್ತಿಗೆ ಸ್ಪಷ್ಟ ಚಿತ್ರಣ ಸಿಗುವ ಸಾಧ್ಯತೆ ಇದೆ.

ಈಗಾಗಲೇ ಮೊದಲ ಸುತ್ತಿನ ಮತ ಎಣಿಕೆ ಪ್ರಕ್ರಿಯೆಯಲ್ಲಿದ್ದು, ಬಿಜೆಪಿ 7 ಕ್ಷೇತ್ರಗಳಲ್ಲಿ , ಕಾಂಗ್ರೆಸ್ 2 ಮತ್ತು ಜೆಡಿಎಸ್ 1 ಕ್ಷೇತ್ರದಲ್ಲಿ ಮುನ್ನಡೆ ಸಾಧಿಸಿದೆ. 

ಇನ್ನು ಪ್ರತಿಷ್ಠೆಯ ಕಣವಾಗಿದ್ದ ಹುಣಸೂರು ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಹೆಚ್.ಪಿ. ಮಂಜುನಾಥ್ ಗೆ ಮೊದಲ ಸುತ್ತಿನಲ್ಲಿ ಮುನ್ನಡೆ ಸಾಧಿಸಿದರೆ, ಕೆ.ಆರ್. ಪೇಟೆಯಲ್ಲಿ ಮೊದಲ ಸುತ್ತಿನಲ್ಲಿ ಜೆಡಿಎಸ್ ನ ಬಿ.ಆರ್. ದೇವರಾಜ್ ಮುನ್ನಡೆ ಸಾಧಿಸಿದ್ದಾರೆ.

ಶಿವಾಜಿನಗರ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ರಿಜ್ವಾನ್ ಅರ್ಷದ್ ಮುನ್ನಡೆ ಸಾಧಿಸಿದ್ದಾರೆ.

ಹಿರೇಕೆರೂರು ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಬಿ.ಸಿ. ಪಾಟೀಲ್ ಗೆ ಆರಂಭಿಕ ಮುನ್ನಡೆ ಸಾಧಿಸಿದ್ದಾರೆ. ಗೋಕಾಕ್ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ರಮೇಶ್ ಜಾರಕಿಹೊಳಿ 2 ಸಾವಿರ ಮತಗಳ ಅಂತರದಲ್ಲಿ ಮುನ್ನಡೆ ಸಾಧಿಸಿದರೆ, ಹೊಸಕೋಟೆ ಕ್ಷೇತ್ರದಲ್ಲಿ ಪಕ್ಷೇತರ ಅಭ್ಯರ್ಥಿ ಶರತ್ ಬಚ್ಚೇಗೌಡ ಆರಂಭಿಕ ಮುನ್ನಡೆ ಸಾಧಿಸಿದ್ದಾರೆ.

Trending News