By-Election Results 2024: ಉಪಚುನಾವಣೆ ಫಲಿತಾಂಶ ಬೆನ್ನಲ್ಲೇ ಡಿ.ಕೆ.ಶಿವಕುಮಾರ್‌ ಮುಂದಿನ ಸಿಎಂ ಎಂದು ಘೋಷಣೆ!

By-Election Results 2024: ಚುನಾವಣಾ ಚತುರ ಡಿಕೆಶಿಯವರ ರಣತಂತ್ರದಿಂದಲೇ ಉಪಚುನಾವಣೆಯ ಮೂರು ಕ್ಷೇತ್ರಗಳಲ್ಲಿ ಕಾಂಗ್ರೆಸ್‌ ಅಭ್ಯರ್ಥಿಗಳು ಗೆಲುವು ಸಾಧಿಸಿದ್ದಾರೆ. ಹೀಗಾಗಿ ಡಿ.ಕೆ.ಶಿವಕುಮಾರ್‌ ಅವರೇ ಮುಂದಿನ ಸಿಎಂ ಎಂದು ಕಾರ್ಯಕರ್ತರು ಘೋಷಣೆ ಕೂಗಿ ಸಂಭ್ರಮಿಸಿದರು.

Written by - Puttaraj K Alur | Last Updated : Nov 23, 2024, 02:46 PM IST
  • ಚನ್ನಪಟ್ಟಣ, ಶಿಗ್ಗಾಂವಿ & ಸಂಡೂರು ಕ್ಷೇತ್ರಗಳಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳಿಗೆ ಜಯ
  • ಡಿಕೆಶಿ ರಣತಂತ್ರದಿಂದಲೇ ಮೂರು ಕ್ಷೇತ್ರಗಳಲ್ಲಿ ಕಾಂಗ್ರೆಸ್‌ ಗೆಲುವು ಸಾಧಿಸಿದೆ
  • ಮುಂದಿನ ಸಿಎಂ ಡಿ.ಕೆ.ಶಿವಕುಮಾರ್‌ ಎಂದು ಜೈಕಾರ ಹಾಕಿದ ಕಾರ್ಯಕರ್ತರು!
By-Election Results 2024: ಉಪಚುನಾವಣೆ ಫಲಿತಾಂಶ ಬೆನ್ನಲ್ಲೇ ಡಿ.ಕೆ.ಶಿವಕುಮಾರ್‌ ಮುಂದಿನ ಸಿಎಂ ಎಂದು ಘೋಷಣೆ! title=
ಮೂರು ಕ್ಷೇತ್ರಗಳಲ್ಲಿ ಕಾಂಗ್ರೆಸ್‌ ಗೆಲುವು!

Karnataka By-Election Results 2024: ಶಿಗ್ಗಾವಿ, ಚನ್ನಪಟ್ಟಣ, ಸಂಡೂರಲ್ಲಿ ಕಾಂಗ್ರೆಸ್‌ಗೆ ಭರ್ಜರಿ ಗೆಲುವು ಸಾಧಿಸಿದ್ದು, ಬಿಜೆಪಿ-ಜೆಡಿಎಸ್‌ಗೆ ಭಾರೀ ಮುಖಭಂಗವಾಗಿದೆ. 2028ರ ವಿಧಾನಸಭೆ ಚುನಾವಣೆಗೆ ದಿಕ್ಸೂಚಿ ಎಂದೇ ಹೇಳಲಾಗಿರುವ ಚನ್ನಪಟ್ಟಣ, ಶಿಗ್ಗಾಂವಿ, ಸಂಡೂರು ಕ್ಷೇತ್ರಗಳಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳಿಗೆ ಜನರು ಮತ ನೀಡಿ ಗೆಲ್ಲಿಸಿದ್ದಾರೆ.

ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಸಿ.ಪಿ ಯೋಗೇಶ್ವರ್ ಅಭೂತಪೂರ್ವ ಗೆಲುವು ಸಾಧಿಸಿದ್ದಾರೆ. 20 ಸುತ್ತಿನಲ್ಲಿ ನಡೆದ ಮತ ಎಣಿಕೆಯಲ್ಲಿ ಕಾಂಗ್ರೆಸ್‌ ಅಭ್ಯರ್ಥಿ ಯೋಗೇಶ್ವರ್‌ ಒಟ್ಟು 1,12,642 ಮತಗಳನ್ನು ಪಡೆಯುವ ಮೂಲಕ ಜಯಭೇರಿ ಬಾರಿಸಿದ್ದಾರೆ. ಕಳೆದ ಚುನಾವಣೆಯಲ್ಲಿ ಮಾಜಿ ಸಿಎಂ ಎಚ್‌.ಡಿ.ಕುಮಾರಸ್ವಾಮಿ ವಿರುದ್ಧ ಸೋಲು ಕಂಡಿದ್ದ ಯೋಗೇಶ್ವರ್‌ ಇದೀಗ ಉಪಚುನಾವಣೆಯಲ್ಲಿ ಅವರ ಪುತ್ರ ನಿಖಿಲ್‌ ಕುಮಾರಸ್ವಾಮಿಯವರನ್ನು 25,413 ಮತಗಳಿಂದ ಸೋಲಿಸಿ ಸೇಡು ತೀರಿಸಿಕೊಂಡಿದ್ದಾರೆ. ನಿಖಿಲ್‌ ಒಟ್ಟು 87,229 ಮತಗಳನ್ನು ಪಡೆದಿದ್ದಾರೆ. 

ಇದನ್ನೂ ಓದಿ: ಈ ಉಪಚುನಾವಣೆ ಫಲಿತಾಂಶ, 2028ರ ಚುನಾವಣೆ ಫಲಿತಾಂಶಕ್ಕೆ ರಾಜ್ಯದ ಜನರ ಮುನ್ನುಡಿ: ಡಿಸಿಎಂ ಡಿಕೆ ಶಿವಕುಮಾರ್ ಆತ್ಮವಿಶ್ವಾಸ

ಒಟ್ಟು 19 ಸುತ್ತಿನಲ್ಲಿ ನಡೆದ ಸಂಡೂರು ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಮತ ಎಣಿಕೆಯಲ್ಲಿ  ಕಾಂಗ್ರೆಸ್ ಅಭ್ಯರ್ಥಿ ಅನ್ನಪೂರ್ಣ ಈ ತುಕಾರಾಮ್ ಭರ್ಜರಿ ಗೆಲುವು ಸಾಧಿಸಿದ್ದಾರೆ. ಒಟ್ಟು 93,616 ಮತಗಳನ್ನು ಪಡೆದುಕೊಂಡ ಅವರು ತಮ್ಮ ಪ್ರತಿಸ್ಪರ್ಧಿ ಬಿಜೆಪಿಯ ಬಂಗಾರು ಹನುಮಂತು (83,967) ರನ್ನು 9,649 ಮತಗಳ ಅಂತರದಿಂದ ಸೋಲಿಸಿದ್ದಾರೆ. ಒಟ್ಟು 18 ಸುತ್ತಿನಲ್ಲಿ ನಡೆದ ಶಿಗ್ಗಾಂವಿ - ಸವಣೂರ ವಿಧಾನಸಭಾ ಉಪ ಚುನಾವಣೆಯ ಮತ ಎಣಿಕೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪಠಾಣ್ ಯಾಸಿರ್ ಅಹ್ಮದ್‌ಖಾನ್‌ ಅಭೂತಪೂರ್ವ ಗೆಲುವು ಸಾಧಿಸಿದ್ದಾರೆ. ಒಟ್ಟು 1,00,756 ಮತಗಳನ್ನು ಪಡೆದ ಅವರು ತಮ್ಮ ಪ್ರತಿಸ್ಪರ್ಧಿ ಬಿಜೆಪಿಯ ಭರತ್‌ ಬೊಮ್ಮಾಯಿ (87,308) ಯನ್ನು 13,448 ಮತಗಳ ಅಂತದಲ್ಲಿ ಸೋಲಿಸಿದ್ದಾರೆ. 

3 ಕ್ಷೇತ್ರಗಳಲ್ಲಿ ಕಾಂಗ್ರೆಸ್‌ ಅಭ್ಯರ್ಥಿಗಳು ಗೆಲುವು ಸಾಧಿಸಿದ ಬೆನ್ನಲ್ಲೇ ಡಿಸಿಎಂ ಡಿ.ಕೆ.ಶಿವಕುಮಾರ್‌ ಪರ ಕಾಂಗ್ರೆಸ್‌ ಕಾರ್ಯಕರ್ತರು ಘೋಷಣೆ ಕೂಗಿದ್ದಾರೆ. ಚುನಾವಣಾ ಚತುರ ಡಿಕೆಶಿಯವರ ರಣತಂತ್ರದಿಂದಲೇ ಉಪಚುನಾವಣೆಯ ಮೂರು ಕ್ಷೇತ್ರಗಳಲ್ಲಿ ಕಾಂಗ್ರೆಸ್‌ ಅಭ್ಯರ್ಥಿಗಳು ಗೆಲುವು ಸಾಧಿಸಿದ್ದಾರೆ. ಹೀಗಾಗಿ ಡಿ.ಕೆ.ಶಿವಕುಮಾರ್‌ ಅವರೇ ಮುಂದಿನ ಸಿಎಂ ಎಂದು ಕಾರ್ಯಕರ್ತರು ಘೋಷಣೆ ಕೂಗಿ ಸಂಭ್ರಮಿಸಿದರು. ಸಿಎಂ ಸಿದ್ದರಾಮಯ್ಯಗೆ ಜೈ.. ಡಿ.ಕೆ.ಶಿವಕುಮಾರ್‌ಗೆ ಜೈ.. ರಾಜ್ಯದ ಮುಂದಿನ ಸಿಎಂ ಡಿ.ಕೆ.ಶಿವಕುಮಾರ್‌ಗೆ ಜೈ... ಮುಂದಿನ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ಗೆ ಜೈ.. ಎಂದು ಕಾಂಗ್ರೆಸ್‌ ಕಾರ್ಯಕರ್ತರು ಘೋಷಣೆ ಕೂಗಿದರು.

ಇದನ್ನೂ ಓದಿ: ವಯನಾಡ್‌ ನಲ್ಲಿ ರಾಹುಲ್ ಗಾಂಧಿ ದಾಖಲೆ ಮುರಿದ ಪ್ರಿಯಾಂಕಾ ಗಾಂಧಿ...!

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://tinyurl.com/7jmvv2nz

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್.

Trending News