ವಿಜಯೇಂದ್ರ ರಾಜ್ಯಾಧ್ಯಕ್ಷ: ಹಲವು ನಾಯಕರ ಆಕಾಂಕ್ಷೆಗಳಿಗೆ ತಣ್ಣೀರು!

BJP State President BY Vijayendra: ಮಾಜಿ ಸಚಿವ ವಿ.ಸೋಮಣ್ಣ ಹಾಗೂ ಬಸನಗೌಡ ಪಾಟೀಲ್ ಯತ್ನಾಳ್ ಕೂಡ ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನದ ಆಕಾಂಕ್ಷೆ ಇಟ್ಟುಕೊಂಡಿದ್ದರು. ಆದರೆ ವಿಜಯೇಂದ್ರರ ಆಯ್ಕೆ ಉಭಯ ನಾಯಕರಿಗೆ ಹಿನ್ನಡೆಯಾಗಿದೆ.

Written by - Prashobh Devanahalli | Edited by - Puttaraj K Alur | Last Updated : Nov 11, 2023, 12:19 PM IST
  • ಕರ್ನಾಟಕ ಬಿಜೆಪಿ ರಾಜ್ಯಾಧ್ಯಕ್ಷರಾಗಿ ಬಿ.ವೈ.ವಿಜಯೇಂದ್ರ ಆಯ್ಕೆ ವಿಚಾರ
  • ರಾಜ್ಯಾಧ್ಯಕ್ಷರ ರೇಸ್‍ನಲ್ಲಿದ್ದ ಸಿಟಿ ರವಿ, ಸೋಮಣ್ಣ ಹಾಗೂ ಯತ್ನಾಳ್‍ಗೆ ಹಿನ್ನಡೆ
  • ರೇಸ್‍ನಲ್ಲಿ ಹಿಂದೆ ಬಿದ್ದ ಮಾಜಿ ಸಿಎಂ ಬಸವರಾಜ್ ಬೊಮ್ಮಾಯಿ & ಆರಗ ಜ್ಞಾನೇಂದ್ರ
ವಿಜಯೇಂದ್ರ ರಾಜ್ಯಾಧ್ಯಕ್ಷ: ಹಲವು ನಾಯಕರ ಆಕಾಂಕ್ಷೆಗಳಿಗೆ ತಣ್ಣೀರು! title=
ಬಿಜೆಪಿಯ ಹಲವು ನಾಯಕರಿಗೆ ನಿರಾಸೆ!

ಬೆಂಗಳೂರು: ಶುಕ್ರವಾರ ಸಂಜೆ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಪುತ್ರ, ಶಿಕಾರಿಪುರ ಶಾಸಕ ಬಿ.ವೈ.ವಿಜಯೇಂದ್ರರಿಗೆ ಬಿಜೆಪಿ ರಾಜ್ಯಾಧ್ಯಕ್ಷ ಪಟ್ಟ ನೀಡಿಲಾಗಿದೆ. ಇದರ ಪರಿಣಾಮ ಸಹಜವಾಗಿ ಬಿಎಸ್‍ವೈ ಬೆಂಬಲಿಗರಿಗೆ ಸಂತಸ ತಂದಿದೆ. ಆದರೆ ಈ ಆಯ್ಕೆ ಬಗ್ಗೆ ಕೆಲವು ನಾಯಕರು ಅಸಮಾಧಾನ ಹೊರಹಾಕಿದ್ದಾರೆ.

ಸಿಟಿ ರವಿ, ಸೋಮಣ್ಣ ಹಾಗೂ ಯತ್ನಾಳ್‍ಗೆ ಹಿನ್ನಡೆ!

ಬೆಂಗಳೂರಿಗೆ ಆಗಮಿಸಿದ ಬಿಜೆಪಿಯ ಮಾಜಿ ರಾಷ್ಟೀಯ ಪ್ರಧಾನ ಕಾರ್ಯದರ್ಶಿ ಸಿಟಿ ರವಿ ಅಸಮಾಧಾನ ಹಾಗೂ ಬೇಸರವನ್ನು ಹೊರಹಾಕಿದ್ದಾರೆ. ಮಧ್ಯಪ್ರದೇಶದಿಂದ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಿದ ವೇಳೆ ಸುದ್ದಿಗಾರರೊಂದಗಿಎ ಮಾತನಾಡಿದ ಅವರು, ‘ಪಕ್ಷ ನೇಮಕ ಮಾಡಿದೆ ವೈಚಾರಿಕ ಭದ್ರತೆ ಜೊತೆಗೆ ಪಕ್ಷ ಕಟ್ಟುವ ಬೆಳೆಸುವ ಕೆಲಸ ಮಾಡಬೇಕಿದೆ. ಜೊತೆಗೆ 28ಕ್ಕೆ 28 ಸ್ಥಾನ ಗೆಲ್ಲಿಸುವ ಹೊಣೆಗಾರಿಕೆ ಇದೆ ಯಶಸ್ವಿಯಾಗಲಿ. ಬದಲಾಗದೆ ಇರೋದು ಕಾರ್ಯಕರ್ತ ಅನ್ನೂದು ನಾನೊಬ್ಬ ಈಗ ಸಾಮಾನ್ಯ ಕಾರ್ಯಕರ್ತ’ ಅಂತಾ ಹೇಳಿದ್ದಾರೆ.  

ಇದನ್ನೂ ಓದಿ: ಬಿಜೆಪಿ ರಾಜ್ಯಾಧ್ಯಕ್ಷರಾಗಿ ವಿಜಯೇಂದ್ರ ನೇಮಕ.. ಮುಗಿಲು ಮುಟ್ಟಿದ ಸಂಭ್ರಮ

ನೂತನ ಅಧ್ಯಕ್ಷನ ಆಯ್ಕೆ ಬಗ್ಗೆ ಕಾಂಗ್ರೆಸ್ ಟ್ವಿಟ್ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ ಸಿಟಿ ರವಿ, ‘ಅಸಮಾಧಾನದ ಬಗ್ಗೆ ಈಗ ನಾನು ಏನು ಮಾತನಾಡಲ್ಲ, ಈಗಾಗಲೇ ಬಹಳಷ್ಟು ಮಾತನಾಡಿದ್ದೇನೆ. 35 ವರ್ಷಗಳಿಂದ ರಾಜಕೀಯ ಕ್ಷೇತ್ರದಲ್ಲಿದ್ದೀನಿ. ಬೂತ್ ಅಧ್ಯಕ್ಷನಿಂದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿವರೆಗೂ ಜವಬ್ದಾರಿ ನಿರ್ವಹಿಸಿದ್ದೀನಿ. ಈಗಾಗಲೇ ಬಹಳ‌ ವಿಷಯ ಮಾತನಾಡಿ ಬಿಟ್ಟಿದ್ದೇನೆ. ಈಗ ಏನಾದ್ರೂ ಮಾತನಾಡಿದ್ರೆ ನಮ್ಮ ಮಾತೇ ನಮಗೆ ತಿರುಗುಬಾಣವಾಗುತ್ತದೆ ಅಂತಾ ಹೇಳಿ ಅಸಮಾಧಾನ ಹೊರ ಹಾಕಿ ತಲೆ ಮೇಲೆ‌ ಕೈಯಿಟ್ಟುಕೊಂಡು ಹೊರಟರು.

ಸೋಮಣ್ಣ, ಯತ್ನಾಳ್ ಯತ್ನ ವ್ಯರ್ಥ!

ಇನ್ನುಳಿದಂತೆ ಮಾಜಿ ಸಚಿವ ವಿ.ಸೋಮಣ್ಣ ಹಾಗೂ ಬಸನಗೌಡ ಪಾಟೀಲ್ ಯತ್ನಾಳ್ ಕೂಡ ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನದ ಆಕಾಂಕ್ಷೆ ಇಟ್ಟುಕೊಂಡಿದ್ದರು. ಆದರೆ ವಿಜಯೇಂದ್ರರ ಆಯ್ಕೆ ಉಭಯ ನಾಯಕರಿಗೆ ಹಿನ್ನಡೆಯಾಗಿದೆ. ಇದಲ್ಲದೆ ವಿ.ಸೋಮಣ್ಣ ಸದ್ಯ ಶಾಸಕ ಇಲ್ಲದಿರುವ ಕಾರಣ ವಿರೋಧ ಪಕ್ಷ ನಾಯಕ ಸ್ಥಾನ ಕೂಡ ಇಲ್ಲದ ಪರಿಸ್ಥಿತಿ ಎದುರಾಗಿದೆ.

ಇದಲ್ಲದೆ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ರಾಜ್ಯಾಧ್ಯಕ್ಷ ಅಥವಾ ವಿರೋಧ ಪಕ್ಷದ ನಾಯಕ ಸ್ಥಾನಕ್ಕೆ ಪ್ರಯತ್ನ ನಡೆಸಿದ್ದರು. ಆದರೆ ಈಗ ಲಿಂಗಾಯತ ಸಮುದಾಯದ ನಾಯಕ ವಿಜಯೇಂದ್ರರಿಗೆ ರಾಜ್ಯಾಧ್ಯಕ್ಷ ಸ್ಥಾನ ನೀಡಿರುವ ಬಿಜೆಪಿ ಜಾತಿ ಲೆಕ್ಕಾಚಾರದಲ್ಲಿ ವಿರೋಧ ಪಕ್ಷದ ನಾಯಕ ಸ್ಥಾನ ಲಿಂಗಾಯತ ಸಮುದಾಯಕ್ಕೆ ಕೊಡುವ ಸಾಧ್ಯತೆ ಇಲ್ಲ. ಈ ಕಾರಣ ಯತ್ನಾಳ್ ಅವರಿಗೂ ಸ್ಥಾನ ಕೈತಪ್ಪಿದೆ.

ಇದನ್ನೂ ಓದಿ: ಜನಪ್ರತಿನಿಧಿಗಳು ರೈತರ ಹಿತ ಕಾಯುತ್ತಿಲ್ಲ ಎಂದು ಆಕ್ರೋಶ

ಬೊಮ್ಮಾಯಿ & ಆರಗ ಜ್ಞಾನೇಂದ್ರ ರೇಸ್‍ನಲ್ಲಿ ಹಿಂದೆ!

ಲಿಂಗಾಯತ ಸಮುದಾಯದವರೇ ಆದ ಮಾಜಿ ಸಿಎಂ ಬಸವರಾಜ್ ಬೊಮ್ಮಾಯಿ ಅವರಿಗೂ ಕೂಡ ವಿರೋಧ ಪಕ್ಷದ ಸ್ಥಾನ ಕೈತಪ್ಪುವ ಸಾಧ್ಯತೆ ಹೆಚ್ಚಿದೆ. ಜೊತೆಗೆ ಶಿವಮೊಗ್ಗ ಜಿಲ್ಲೆಗೆ ಈಗ ರಾಜ್ಯಾಧ್ಯಕ್ಷ ದೊರಕಿದೆ. ಇದೀಗ ಮತ್ತೆ ಅದೇ ಜಿಲ್ಲೆಯವರಾದ ಒಕ್ಕಲಿಗ ಸಮುದಾಯಕ್ಕೆ ಸೇರಿದ ಶಾಸಕ ಆರಗ ಜ್ಞಾನೇಂದ್ರರಿಗೆ ವಿರೋಧ ಪಕ್ಷ ನಾಯಕ ಸ್ಥಾನ ನೀಡುವ ಸಾಧ್ಯತೆ ಕಡಿಮೆ. ಒಟ್ಟಾರೆ ಬಿ.ವೈ.ವಿಜಯೇಂದ್ರರಿಗೆ ರಾಜ್ಯಾಧ್ಯಕ್ಷರ ಪಟ್ಟ ನೀಡಿರುವುದರಿಂದ ಕಮಲ ಪಕ್ಷಕ್ಕೆ ಮುಂದಿನ ದಿನಗಳಲ್ಲಿ ಯಾವ ರೀತಿ ಪರಿಣಾಮ ಎದುರಾಗಲಿದೆ. ಬಿಜೆಪಿ ನಾಯಕರು ಇವುಗಳನ್ನು ಹೇಗೆ ನಿಭಾಯಿಸುತ್ತಾರೆ ಅಂತಾ ಕಾದು ನೋಡಬೇಕಿದೆ.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://tinyurl.com/7jmvv2nz

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್.

Trending News