ಕಾಂಗ್ರೆಸ್ ಸರಕಾರ ಒಳಮೀಸಲಾತಿ ವಿಚಾರದಲ್ಲಿ ಚಕಾರವನ್ನೂ ಎತ್ತಲಿಲ್ಲ: ಬಿ.ವೈ. ವಿಜಯೇಂದ್ರ

BY Vijayendra: ಕಾಂಗ್ರೆಸ್ ಸರಕಾರವು 2013-18ರಲ್ಲಿ ಒಳಮೀಸಲಾತಿ ವಿಚಾರದಲ್ಲಿ ಚಕಾರವನ್ನೂ ಎತ್ತಲಿಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ. ವಿಜಯೇಂದ್ರ ಅವರು ಆಕ್ಷೇಪಿಸಿದ್ದಾರೆ.

Written by - Prashobh Devanahalli | Last Updated : Dec 16, 2024, 06:17 PM IST
  • ಒಳಮೀಸಲಾತಿ ವಿಚಾರ
  • ಕಾಂಗ್ರೆಸ್‌ ಚಕಾರವನ್ನೂ ಎತ್ತಲಿಲ್ಲ
  • ಬಿ.ವೈ. ವಿಜಯೇಂದ್ರ ಕಿಡಿ
ಕಾಂಗ್ರೆಸ್ ಸರಕಾರ ಒಳಮೀಸಲಾತಿ ವಿಚಾರದಲ್ಲಿ ಚಕಾರವನ್ನೂ ಎತ್ತಲಿಲ್ಲ: ಬಿ.ವೈ. ವಿಜಯೇಂದ್ರ title=
ವಿಜಯೇಂದ್ರ

ಬೆಳಗಾವಿ: ಕಾಂಗ್ರೆಸ್ ಸರಕಾರವು 2013-18ರಲ್ಲಿ ಒಳಮೀಸಲಾತಿ ವಿಚಾರದಲ್ಲಿ ಚಕಾರವನ್ನೂ ಎತ್ತಲಿಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ. ವಿಜಯೇಂದ್ರ ಅವರು ಆಕ್ಷೇಪಿಸಿದ್ದಾರೆ. ಮಾದಿಗ ಮತ್ತು ಮಾದಿಗ ಉಪಜಾತಿಗಳ ಸಂಘಟನೆಗಳ ಒಕ್ಕೂಟದ ವತಿಯಿಂದ ಇಂದು ಇಲ್ಲಿನ ಮಾಲಿನಿ ಸಿಟಿ, ಯಡಿಯೂರಪ್ಪ ರಸ್ತೆಯಲ್ಲಿ ಒಳಮೀಸಲಾತಿ ಹಕ್ಕೊತ್ತಾಯ ಕುರಿತು ಬೃಹತ್ ಸಮಾವೇಶವನ್ನು ಹಮ್ಮಿಕೊಳ್ಳಲಾಗಿತ್ತು. ಈ ಸಮಾವೇಶವನ್ನುದ್ದೇಶಿಸಿ ಅವರು ಮಾತನಾಡಿದರು.

30 ವರ್ಷಗಳಿಂದ ನಿರಂತರ ಹೋರಾಟ ನಡೆಸುತ್ತಿದ್ದು, ನಾವೂ ಬಡವರಿದ್ದು, ನಮ್ಮ ಮಕ್ಕಳಿಗೂ ಶಿಕ್ಷಣದಲ್ಲಿ ಅವಕಾಶ ಬೇಕು. ಶಿಕ್ಷಣವಂಚಿತರಾಗಬಾರದು ಎಂಬ ಕಳಕಳಿ ನಿಮ್ಮದು. ಶಿಕ್ಷಣ ಪಡೆದ ನಮ್ಮ ಸಮಾಜ ಎತ್ತರಕ್ಕೇರಿ ಗೌರವದಿಂದ ಬಾಳಿ ಬದುಕಬೇಕು ಎಂಬ ಕನಸು ಇವರ ಮುಂದಿದೆ ಎಂದರು.
ನಾವು ಈ ಸಮಾಜದಲ್ಲಿ ಹುಟ್ಟಿದ್ದೇ ತಪ್ಪೆಂಬ ಭಾವನೆಯಲ್ಲಿ ಕೆಲವರಿದ್ದಾರೆ. 3 ದಶಕಗಳ ಹೋರಾಟ ನಡೆಯಿತು. ಸದಾಶಿವ ಆಯೋಗ ರಚನೆಯಾಯಿತು. ಆದರೂ ಸಹ ಆ ಆಯೋಗಕ್ಕೆ ನ್ಯಾಯಬದ್ಧವಾಗಿ ಕಾರ್ಯ ನಿರ್ವಹಿಸಲು ಅಂದಿನ ರಾಜ್ಯ ಸರಕಾರವು ಸವಲತ್ತುಗಳನ್ನು ಕೊಡಲಿಲ್ಲ ಎಂದು ಹೇಳಿದರು. ನಿವೃತ್ತ ನ್ಯಾಯಾಧೀಶ ಸದಾಶಿವ ಅವರು ಆಯೋಗಕ್ಕೆ ರಾಜೀನಾಮೆ ಕೊಡುವ ಸಂದರ್ಭ ಸೃಷ್ಟಿ ಆಗಿತ್ತು ಎಂದು ವಿವರ ನೀಡಿದರು. ಆದರೂ ರಾಜ್ಯ ಸರಕಾರ ಎಚ್ಚತ್ತುಕೊಳ್ಳಲಿಲ್ಲ; 2013-18ರಲ್ಲಿ ಒಳಮೀಸಲಾತಿ ವಿಚಾರದಲ್ಲಿ ಅಂದಿನ ಕಾಂಗ್ರೆಸ್ ಸರಕಾರ ಚಕಾರವನ್ನೂ ಎತ್ತಲಿಲ್ಲ ಎಂದು ತಿಳಿಸಿದರು.

ಇದನ್ನೂ ಓದಿ: ರಂಗು ರಂಗಿನ ಬಟ್ಟೆಯಲ್ಲಿ ಮಂಗನಾಟ...! ಕೋತಿಯ ಈ ಡ್ಯಾನ್ಸ್‌ ವಿಡಿಯೋ ನೋಡಿದ್ರೆ ನಿಮ್ಗೆ ಯಾರ್‌ ನೆನಪಾಗ್ತಾರೆ?

ಒಳಮೀಸಲಾತಿ ಕೊಡಲು ಸಾಧ್ಯವೇ ಇಲ್ಲ ಎಂದು ಸಿದ್ದರಾಮಯ್ಯನವರು ಉಲ್ಲೇಖಿಸಿದ್ದರು. ಹಿಂದಿನ ಬಿಜೆಪಿ ಸರಕಾರ ಒಳಮೀಸಲಾತಿಗೆ ಶಿಫಾರಸು ಮಾಡಿ ಕೇಂದ್ರಕ್ಕೆ ಕಳಿಸಿದರೂ ಸಹ ಅದರ ಕುರಿತು ಅಪಪ್ರಚಾರ ಮಾಡುವ ಕೆಲಸ ಆಗಿದೆ ಎಂದು ಆಕ್ಷೇಪಿಸಿದರು. ಬೋವಿ, ಬಣಜಾರರಿಗೆ ಅನ್ಯಾಯ ಮಾಡುತ್ತಿದ್ದಾರೆ ಎಂದು ತಪ್ಪಾಗಿ ಬಿಂಬಿಸುವ ಕೆಲಸ ಮಾಡಿ, ರಾಜ್ಯದಲ್ಲಿ ಅಶಾಂತಿ ಮೂಡಿಸುವ ಪಿತೂರಿ ಕೂಡ ಹಿಂದಿನ ಅವಧಿಯಲ್ಲಿ ನಡೆದುದನ್ನು ನಾವ್ಯಾರೂ ಮರೆಯಬಾರದು ಎಂದು ತಿಳಿಸಿದರು.

12ನೇ ಶತಮಾನದಲ್ಲಿ ಅಣ್ಣ ಬಸವಣ್ಣನವರು ಸಮ ಸಮಾಜದ ನಿರ್ಮಾಣದ ಕನಸನ್ನು ಕಂಡಿದ್ದರು. ಆದರೆ, ರಾಜಕಾರಣಿಗಳು ತಮ್ಮ ಸ್ವಾರ್ಥ ಈಡೇರಿಸಿಕೊಂಡರು ಮತ್ತು ರಾಜಕೀಯ ಬೇಳೆ ಬೇಯಿಸಿಕೊಂಡರೇ ಹೊರತು ನಮ್ಮ ಸಮಾಜದ ಧ್ವನಿಯಾಗಿ ಕೆಲಸ ಯಾರೂ ಮಾಡಲಿಲ್ಲ. ಬಿಜೆಪಿ ಸರಕಾರ ಮೀಸಲಾತಿ ಹೆಚ್ಚಿಸಿ ನ್ಯಾಯ ಕೊಡಿಸುವ ಕೆಲಸ ಮಾಡಿತ್ತು ಎಂದು ಹೇಳಿದರು.

ಯಡಿಯೂರಪ್ಪ ಅವರು ಶೋಷಿತರು, ಬಡವರು, ಪೀಡಿತ ಸಮುದಾಯಗಳ ಪರವಾಗಿ ಪ್ರಾಮಾಣಿಕವಾಗಿ ಮತ್ತು ನಿರಂತರವಾಗಿ ಕೆಲಸ ಮಾಡಿಕೊಂಡು ಬಂದಿದ್ದಾರೆ. ರಾಜ್ಯ ಸರಕಾರಗಳು ಒಳ ಮೀಸಲಾತಿ ಕೊಡುವ ಕುರಿತು ತೀರ್ಮಾನಿಸಬಹುದೆಂದು ಸುಪ್ರೀಂ ಕೋರ್ಟ್ ತೀರ್ಪು ತಿಳಿಸಿದೆ. ಆದರೂ ರಾಜ್ಯ ಸರಕಾರವು ಮೀನಾಮೇಷ ಮಾಡುತ್ತಿದೆ ಎಂದು ಆರೋಪಿಸಿದರು.

ನಾಗಮೋಹನ್‍ದಾಸ್ ಕಮಿಟಿ ರಚಿಸಿ 50 ದಿನಗಳಾದರೂ ಸಹ ಅವರಿಗೆ ಈ ಸರಕಾರವು ಒಂದು ಕಚೇರಿ ಕೊಟ್ಟಿಲ್ಲ; ಒಂದು ಬೆಂಚೂ ಕೊಟ್ಟಿಲ್ಲ. ವ್ಯವಸ್ಥೆಗಳನ್ನೂ ಮಾಡಿಕೊಟ್ಟಿಲ್ಲ ಎಂದು ಬಿ.ವೈ. ವಿಜಯೇಂದ್ರ ಅವರು ಟೀಕಿಸಿದರು. ಇಂಥ ರಾಜ್ಯ ಸರಕಾರಕ್ಕೆ ತಮ್ಮ ಬೇಡಿಕೆಗಳಿಗೆ ನ್ಯಾಯ ಒದಗಿಸಿಕೊಡುವ ಮನಸ್ಥಿತಿ ಇದೆಯೇ? ಇಲ್ಲವೇ ಎಂಬ ಪ್ರಶ್ನೆಯನ್ನು ರಾಜ್ಯದ ಪ್ರತಿಯೊಬ್ಬರೂ ಕೇಳುತ್ತಿದ್ದಾರೆ ಎಂದು ತಿಳಿಸಿದರು.

ಇದನ್ನೂ ಓದಿ: ಸಿಸೇರಿಯನ್ ಹೆರಿಗೆಗಳಿಗೆ ಕಡಿವಾಣ ಹಾಕಲು ನೂತನ ಕಾರ್ಯಕ್ರಮ ಜಾರಿ - ಆರೋಗ್ಯ ಸಚಿವ ದಿನೇಶ್ ಗುಂಡೂರಾವ್

ಈ ಸಂದರ್ಭದಲ್ಲಿ ಶ್ರೀ ಮಾದರ ಚೆನ್ನಯ್ಯ ಸ್ವಾಮೀಜಿ, ಶ್ರೀ ಷಡಕ್ಷರಿ ಮುನಿ ಸ್ವಾಮೀಜಿ, ವಿರೋಧ ಪಕ್ಷದ ನಾಯಕ ಆರ್. ಅಶೋಕ್, ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ, ಮಾಜಿ ಉಪಮುಖ್ಯಮಂತ್ರಿ ಮತ್ತು ಸಂಸದ ಗೋವಿಂದ ಕಾರಜೋಳ, ಮಾಜಿ ಕೇಂದ್ರ ಸಚಿವ ಎ. ನಾರಾಯಣಸ್ವಾಮಿ, ವಿಧಾನಪರಿಷತ್ ಸದಸ್ಯ ಸಿ.ಟಿ. ರವಿ ಮತ್ತು ಪ್ರಮುಖರು ಉಪಸ್ಥಿತರಿದ್ದರು.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ. 

Trending News