ಜೆಡಿಎಸ್‌ ಅಧ್ಯಕ್ಷರಾಗಿ ಸಿ.ಎಂ. ಇಬ್ರಾಹಿಂ ಅಧಿಕಾರ ಸ್ವೀಕಾರ

ಇಂದು ಜೆಡಿಎಸ್‌ ಪಕ್ಷದ ಕಚೇರಿ ಜೆಪಿ ಭವನದಲ್ಲಿ ಪದಗ್ರಹಣ ಕಾರ್ಯಕ್ರಮ ನಡೆದಿದೆ. ಈ ಸಂದರ್ಭದಲ್ಲಿ ಜೆಡಿಎಸ್‌ ವರಿಷ್ಠ ಹೆಚ್‌.ಡಿ. ದೇವೇಗೌಡ, ಜೆಡಿಎಸ್‌ ಶಾಸಕಾಂಗ ಪಕ್ಷದ ನಾಯಕ ಹೆಚ್‌.ಡಿ. ಕುಮಾರಸ್ವಾಮಿ ಉಪಸ್ಥಿತರಿದ್ದರು.

Written by - Bhavishya Shetty | Last Updated : Apr 17, 2022, 12:28 PM IST
  • ಜೆಡಿಎಸ್‍ ರಾಜ್ಯಾಧ್ಯಕ್ಷರಾಗಿ ಸಿ.ಎಂ ಇಬ್ರಾಹಿಂ ನೇಮಕ
  • ಸಂಸದೀಯ ಮಂಡಳಿಯ ಅಧ್ಯಕ್ಷರಾಗಿ ಹೆಚ್.ಕೆ. ಕುಮಾರಸ್ವಾಮಿ ಪದಗ್ರಹಣ
  • ಜೆಡಿಎಸ್‌ ಪಕ್ಷದ ಕಚೇರಿ ಜೆಪಿ ಭವನದಲ್ಲಿ ಪದಗ್ರಹಣ ಕಾರ್ಯಕ್ರಮ
ಜೆಡಿಎಸ್‌ ಅಧ್ಯಕ್ಷರಾಗಿ ಸಿ.ಎಂ. ಇಬ್ರಾಹಿಂ ಅಧಿಕಾರ ಸ್ವೀಕಾರ title=
CM Ibrahim

ಬೆಂಗಳೂರು: ಕೇಂದ್ರ ಮಾಜಿ ಸಚಿವ ಸಿ.ಎಂ. ಇಬ್ರಾಹಿಂ ಅವರನ್ನು ಜೆಡಿಎಸ್‍ ರಾಜ್ಯಾಧ್ಯಕ್ಷರನ್ನಾಗಿ ಹಾಗೂ ಪ್ರಸ್ತುತ ರಾಜ್ಯಾಧ್ಯಕ್ಷರಾಗಿರುವ ಹೆಚ್.ಕೆ. ಕುಮಾರಸ್ವಾಮಿ ಅವರನ್ನು ಸಂಸದೀಯ ಮಂಡಳಿಯ ಅಧ್ಯಕ್ಷರನ್ನಾಗಿ ನೇಮಕಗೊಳಿಸಲಾಗಿದೆ. ಇಂದು ಜೆಡಿಎಸ್‌ ಪಕ್ಷದ ಕಚೇರಿ ಜೆಪಿ ಭವನದಲ್ಲಿ ಪದಗ್ರಹಣ ಕಾರ್ಯಕ್ರಮ ನಡೆದಿದೆ. ಈ ಸಂದರ್ಭದಲ್ಲಿ ಜೆಡಿಎಸ್‌ ವರಿಷ್ಠ ಹೆಚ್‌.ಡಿ. ದೇವೇಗೌಡ, ಜೆಡಿಎಸ್‌ ಶಾಸಕಾಂಗ ಪಕ್ಷದ ನಾಯಕ ಹೆಚ್‌.ಡಿ. ಕುಮಾರಸ್ವಾಮಿ ಉಪಸ್ಥಿತರಿದ್ದರು. 

ಇದನ್ನು ಓದಿ: ಹುಬ್ಬಳಿ ಘಟನೆಗೆ ಹೆಚ್​ಡಿ ಕುಮಾರಸ್ವಾಮಿ ಕಳವಳ!

ವಿಧಾನ ಪರಿಷತ್‌ ಕಾಂಗ್ರೆಸ್‌ ಸದಸ್ಯರಾಗಿದ್ದ ಸಿ.ಎಂ. ಇಬ್ರಾಹಿಂ ಅವರು ಇತ್ತೀಚೆಗೆ ಪರಿಷತ್‌ ವಿರೋಧ ಪಕ್ಷದ ಸ್ಥಾನ ಕೈತಪ್ಪಿದ ಕಾರಣಕ್ಕೆ ಮುನಿಸಿಕೊಂಡು ಜೆಡಿಎಸ್‌ ಪಕ್ಷಕ್ಕೆ ಸೇರಿದ್ದರು. ಅಷ್ಟೇ ಅಲ್ಲದೆ, ರಾಜಕೀಯ ಭವಿಷ್ಯ ನುಡಿದಿದ್ದ ಇಬ್ರಾಹಿಂ ಅವರು, ಯುಗಾದಿ ವರ್ಷ ಹೊಸತೊಡಕಿನ ಬಳಿಕ ದೊಡ್ಡ ಮಟ್ಟದ ರಾಜಕೀಯ ಪ್ರವಾಹ ಬರುತ್ತದೆ. ನನ್ನ ಮುಂದಿನ ನಡೆ ಇಲ್ಲಿಂದ ಆರಂಭವಾಗಲಿದೆ ಎಂದು ಇಬ್ರಾಹಿಂ ಹೇಳಿಕೆ ನೀಡಿದ್ದರು. 

ಇನ್ನು ಪಕ್ಷದ ಅಧ್ಯಕ್ಷ ಸ್ಥಾನವನ್ನು ಇಬ್ರಾಹಿಂ ಅವರಿಗೆ ಹಸ್ತಾಂತರಿಸಿದ ಬಳಿಕ ಮಾತನಾಡಿದ ಹೆಚ್‌.ಕೆ. ಕುಮಾರಸ್ವಾಮಿ, ‘ರಾಜ್ಯದ ಜನ ಮೂರನೇ ಶಕ್ತಿಗಾಗಿ ಕಾಯುತ್ತಿದ್ದಾರೆ. ಜೆಡಿಎಸ್‌ ಪರ ಜನರ ಒಲವು ಇದೆ. ಹೀಗಾಗಿ, ಎಲ್ಲರೂ ಸೇರಿ ಪಕ್ಷವನ್ನು ಬಲಪಡಿಸಬೇಕು’ ಎಂದು ಕಾರ್ಯಕರ್ತರಿಗೆ ಮನವಿ ಮಾಡಿದರು.

ಇದನ್ನು ಓದಿ: "ಚುನಾವಣೆ ಗೆಲ್ಲಲು ಮೋದಿ ಮಂತ್ರ ಸಾಲೋದಿಲ್ಲ : ಕುಟುಂಬ ರಾಜಕಾರಣಕ್ಕೆ ಅವಕಾಶ ಇಲ್ಲ"

ಇದೇ ವೇಳೆ ಹೆಚ್‌.ಡಿ. ಕುಮಾರಸ್ವಾಮಿ ಮಾತನಾಡಿ, ‘ಎರಡೂವರೆ ವರ್ಷಗಳ ಅತ್ಯಂತ ಸಂಕಷ್ಟದ ಸನ್ನಿವೇಶದಲ್ಲಿ ಪಕ್ಷದ ಅಧ್ಯಕ್ಷ ಸ್ಥಾನವನ್ನು ವಹಿಸಿದ್ದ ಹೆಚ್‌.ಕೆ. ಕುಮಾರಸ್ವಾಮಿ ಅವರು ಪಕ್ಷದಲ್ಲಿ ಎಲ್ಲರನ್ನೂ ಒಗ್ಗೂಡಿಸಿಕೊಂಡು ಹೋಗಿದ್ದಾರೆ. ಇಬ್ರಾಹಿಂ ಅವರು ಪಕ್ಷಕ್ಕೆ ಮರಳಿ ಬಂದಿದ್ದಾರೆ. ಸದ್ಯದ ಸನ್ನಿವೇಶದಲ್ಲಿ ಸಂಘಟನೆಯನ್ನು ಬಲಪಡಿಸುವ ಉದ್ದೇಶದಿಂದ ಅವರನ್ನು ಅಧ್ಯಕ್ಷರನ್ನಾಗಿ ನೇಮಿಸಲಾಗಿದೆ’ ಎಂದರು.

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

Trending News