ಎರಡೂ ಕ್ಷೇತ್ರಗಳಲ್ಲಿ ವಿ ಸೋಮಣ್ಣಗೆ ಸೋಲು : ಕೈ ಅಭ್ಯರ್ಥಿ ಪುಟ್ಟರಂಗಶೆಟ್ಟಿ ವಿಶ್ವಾಸ

ಬಿಜೆಪಿಯವರು ಬರೀ ಸುಳ್ಳು ಹೇಳಿಕೊಂಡು ರಾಜಕಾರಣ ಮಾಡಿದ್ದಾರೆ, ಕಾಂಗ್ರೆಸ್ ಅಭಿವೃದ್ಧಿ ಪರದ ಸರ್ಕಾರ ನೋಡಿದ್ದಾರೆ ಆದ್ದರಿಂದ ಎರಡೂ ಕ್ಷೇತ್ರಗಳಲ್ಲಿ ಬಿಜೆಪಿ ಸೋಲಲಿದ್ದು ಕಾಂಗ್ರೆಸ್ ಗೆಲ್ಲಲಿದೆ ಎಂದು ಚಾಮರಾಜನಗರ ಕಾಂಗ್ರೆಸ್‌ ಅಭ್ಯರ್ಥಿ ಸಿ. ಪುಟ್ಟರಂಗಶೆಟ್ಟಿಯವರು ಹೇಳಿದರು.

Written by - Krishna N K | Last Updated : Apr 12, 2023, 10:07 AM IST
  • ವರುಣ ಮತ್ತು ಚಾಮರಾಜನಗರ ಎರಡೂ ಕ್ಷೇತ್ರಗಳಲ್ಲಿ ಸೋಮಣ್ಣ ಸೋಲ್ತಾರೆ.
  • ಜನರು ಕಾಂಗ್ರೆಸ್ ಅಭಿವೃದ್ಧಿ ಪರದ ಸರ್ಕಾರ ನೋಡಿದ್ದಾರೆ.
  • ಆದ್ದರಿಂದ ಎರಡೂ ಕ್ಷೇತ್ರಗಳಲ್ಲಿ ಬಿಜೆಪಿ ಸೋಲಲಿದ್ದು ಕಾಂಗ್ರೆಸ್ ಗೆಲ್ಲಲಿದೆ ಎಂದ ಸಿ ಪುಟ್ಟರಂಗಶೆಟ್ಟಿ.
ಎರಡೂ ಕ್ಷೇತ್ರಗಳಲ್ಲಿ ವಿ ಸೋಮಣ್ಣಗೆ ಸೋಲು : ಕೈ ಅಭ್ಯರ್ಥಿ ಪುಟ್ಟರಂಗಶೆಟ್ಟಿ ವಿಶ್ವಾಸ title=

ಚಾಮರಾಜನಗರ : ವರುಣ ಹಾಗೂ ಚಾಮರಾಜನಗರ ಎರಡೂ ಕ್ಷೇತ್ರಗಳಲ್ಲಿ ವಿ. ಸೋಮಣ್ಣ ಸೋಲ್ತಾರೆ, ಕಾಂಗ್ರೆಸ್ ಗೆಲ್ಲಲಿದೆ ಎಂದು ಚಾಮರಾಜನಗರ ಕಾಂಗ್ರೆಸ್‌ ಅಭ್ಯರ್ಥಿ ಸಿ.ಪುಟ್ಟರಂಗಶೆಟ್ಟಿ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ತಾಲೂಕಿನ ಬಿಸಲವಾಡಿಯಲ್ಲಿ ಮಾಧ್ಯಮದವರೊಟ್ಟಿಗೆ ಸಿ‌.ಪುಟ್ಟರಂಗಶೆಟ್ಟಿ ಮಾತನಾಡಿ, ಬಿಜೆಪಿಯವರು ಬರೀ ಸುಳ್ಳು ಹೇಳಿಕೊಂಡು ರಾಜಕಾರಣ ಮಾಡಿದ್ದಾರೆ, ಕಾಂಗ್ರೆಸ್ ಅಭಿವೃದ್ಧಿ ಪರದ ಸರ್ಕಾರ ನೋಡಿದ್ದಾರೆ ಆದ್ದರಿಂದ ಎರಡೂ ಕ್ಷೇತ್ರಗಳಲ್ಲಿ ಬಿಜೆಪಿ ಸೋಲಲಿದ್ದು ಕಾಂಗ್ರೆಸ್ ಗೆಲ್ಲಲಿದೆ ಎಂದರು. ಅಲ್ಲದೆ, ನಾವು ಅಭಿವೃದ್ಧಿಪರ ಇದ್ದೇವೆ, ನಮಗೆ ಜನರು ಆಶೀರ್ವಾದ ಮಾಡಲಿದ್ದಾದೆ, ಬಿಜೆಪಿ-ಕಾಂಗ್ರೆಸ್ ನಡುವೆ ಪ್ರಬಲ ಪೈಪೋಟಿಯೇ ಇಲ್ಲಾ, ಕಾಂಗ್ರೆಸ್ ಗೆಲ್ಲಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಇದನ್ನೂ ಓದಿ: ಇಂದು ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಮಳೆ ಸಾಧ್ಯತೆ : ಬೆಂಗಳೂರಿನಲ್ಲಿ 34.3ಗೆ ಉಷ್ಣಾಂಶ ಏರಿಕೆ

ಇನ್ನು ವಿ ಸೋಮಣ್ಣ ಅವರು ವರುಣ ಕ್ಷೇತ್ರದಲ್ಲಿ ಮಾಜಿ ಮುಖ್ಯಮಂತ್ರಿ, ವಿಪಕ್ಷ ನಾಯಕ ಸಿದ್ದರಾಮಯ್ಯ ಅವರ ವಿರುದ್ಧ ಕಮಲಪಾಳಯದ ಮೂಲಕ ಸ್ಪರ್ಧೆ ಮಾಡುತ್ತಿದ್ದಾರೆ. ಬಾದಾಮಿ ನಂತರ ಸಿದ್ದರಾಮಯ್ಯ ಅವರು ಕೋಲಾರದಿಂದ ವಿಧಾನಸಭೆ ಚುನಾವಣೆ ಕಣಕ್ಕಿಳಿಯಲಿದ್ದಾರೆ ಎನ್ನುವ ಮಾತುಗಳು ಕೇಳಿ ಬಂದಿದ್ದವು. ನಂತರ ವರುಣ ಕ್ಷೇತ್ರದಿಂದ ಸಿದ್ದರಾಮಯ್ಯ ಅವರು ಸ್ಪರ್ಧೆ ಮಾಡುವುದಾಗಿ ಖಚಿತವಾಗಿತ್ತು. ಇದೀಗ ಸಿದ್ದರಾಮಯ್ಯ ಮತ್ತು ವಿ ಸೋಮಣ್ಣ ನಡುವೆ ನೇರ ಹಣಾಹಣಿ ನಡೆಯಲಿದೆ.

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

Trending News