ಬಿಜೆಪಿಗೆ ಲೋಕಸಭಾ ಚುನಾವಣೆಯಲ್ಲಿ ಸೋಲಿನ ಭಯ ಕಾಡುತ್ತಿದೆ: ಸಿಎಂ ಸಿದ್ದರಾಮಯ್ಯ

ಬಿಜೆಪಿಗೆ ಲೋಕಸಭಾ ಚುನಾವಣೆಯಲ್ಲಿ ಸೋಲಿನ ಭಯ ಕಾಡುತ್ತಿದೆ. ಸಿಎಎ ಜಾರಿ  ಬಿಜೆಪಿಯ ಚುನಾವಣಾ ಗಿಮಿಕ್ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಬಿಜೆಪಿ ವಿರುದ್ಧ ವಾಗ್ಧಾಳಿ ನಡೆಸಿದರು. 

Written by - Yashaswini V | Last Updated : Mar 13, 2024, 01:24 PM IST
  • ಬಿಜೆಪಿಯವರಿಗೆ ಲೋಕಸಭಾ ಚುನಾವಣೆಯಲ್ಲಿ ಸೋಲಿನ ಭಯ
  • ಹಾಗಾಗಿಯೇ ಚುನಾವಣಾ ಹೊಸ್ತಿಲಿನಲ್ಲಿ ಸಿಎಎ ಜಾರಿ
  • ರಾಜ್ಯದಲ್ಲಿ ಸಿಎಎ ಜಾರಿ ಬಗ್ಗೆ ನಾಳೆ ನಡೆಯಲಿರುವ ಸಚಿವ ಸಂಪುಟ ಸಭೆಯಲ್ಲಿ ಚರ್ಚೆ- ಸಿಎಂ ಸಿದ್ದರಾಮಯ್ಯ
ಬಿಜೆಪಿಗೆ ಲೋಕಸಭಾ ಚುನಾವಣೆಯಲ್ಲಿ ಸೋಲಿನ ಭಯ ಕಾಡುತ್ತಿದೆ: ಸಿಎಂ ಸಿದ್ದರಾಮಯ್ಯ title=

CM Siddaramaiah: ಪೌರತ್ವ ಕಾಯ್ದೆಯನ್ನು ಕೇವಲ ಚುನಾವಣೆಯ ದೃಷ್ಡಿಯಿಂದ ಕೇಂದ್ರ ಜಾರಿ ಮಾಡಿದ್ದು, ಬಿಜೆಪಿಯವರಿಗೆ ಲೋಕಸಭಾ ಚುನಾವಣೆಯಲ್ಲಿ ಸೋಲಿನ ಭಯ ಕಾಡುತ್ತಿರುವುದರಿಂದ ಈ ರೀತಿಯ ಗಿಮಿಕ್ಸ್ ಗಳನ್ನು ಮಾಡಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಇಂದು ಉಡುಪಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ರಾಜ್ಯದಲ್ಲಿ ಪೌರತ್ವ ಕಾಯ್ದೆ ಜಾರಿ ಬಗ್ಗೆ ಮುಖ್ಯಮಂತ್ರಿಗಳ ನಿಲುವಿನ ಬಗ್ಗೆ ಕೇಳಿದ ಪ್ರಶ್ನೆಗೆ ಉತ್ತರಿಸಿ, ಇಷ್ಟು ವರ್ಷಗಳ ಕಾಲ ಈ ಬಗ್ಗೆ ಮೌನವಹಿಸಿ , ಚುನಾವಣೆಯ ಹೊಸ್ತಿಲಲ್ಲಿ ಜಾರಿಗೊಳಿಸಿದ್ದಾರೆ. ರಾಜ್ಯದಲ್ಲಿ ಸಿಎಎ ಜಾರಿ ಬಗ್ಗೆ ನಾಳೆ ನಡೆಯಲಿರುವ ಸಚಿವ ಸಂಪುಟ ಸಭೆಯಲ್ಲಿ ಚರ್ಚಿಸಲಾಗುವುದು ಎಂದರು.

ಇದನ್ನೂ ಓದಿ-  ಪ್ರತಾಪ್ ಸಿಂಹಗೆ ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಟಿಕೆಟ್ ಕೈತಪ್ಪುವ ಸಾಧ್ಯತೆ

ಪಕ್ಷಕ್ಕೆ ಬಲ: 
ಜಯಪ್ರಕಾಶ್ ಹೆಗಡೆಯವರು ಮತ್ತೊಮ್ಮೆ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗಿರುವುದು ಕರಾವಳಿ ಪ್ರದೇಶದಲ್ಲಿ ಪಕ್ಷಕ್ಕೆ ಬಲ ತುಂಬಿದಂತಾಗಿದೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದರು. 

ಇದನ್ನೂ ಓದಿ-  Lok Sabha Election 2024: ಚುನಾವಣೆಗೂ ಮುನ್ನ ಆನ್‌ಲೈನ್‌ನಲ್ಲಿ ವೋಟರ್ ಐಡಿ ವಿಳಾಸವನ್ನು ಸುಲಭವಾಗಿ ಅಪ್ಡೇಟ್ ಮಾಡಿ

ಮೈಸೂರು-ಕೊಡಗು ಸಂಸದ ಪ್ರತಾಪ್‌ ಸಿಂಹ ಟಿಕೆಟ್‌  ಮಿಸ್! 
ಇದೇ ಸಂದರ್ಭದಲ್ಲಿ ಮೈಸೂರು-ಕೊಡಗು ಸಂಸದ ಪ್ರತಾಪ್ ಸಿಂಹ ಅವರಿಗೆ ಈ ಬಾರಿ ಲೋಕಸಭಾ ಚುನಾವಣೆ ಟಿಕೆಟ್ ನೀಡದೇ ಯದುವೀರ್ ಅವರಿಗೆ ಟಿಕೆಟ್ ನೀಡುವ  ಬಿಜೆಪಿ ನಿರ್ಧಾರ ಕೈಗೊಂಡಿರುವ ಕಾರಣದ ಬಗ್ಗೆ ನನಗೆ ಯಾವುದೇ ಮಾಹಿತಿ ಇಲ್ಲ ಎಂದು ಸಿಎಂ ಸಿದ್ದರಾಮಯ್ಯ ಮಾಧ್ಯಮ ಮಿತ್ರರ ಪ್ರಶ್ನೆಗೆ ಪ್ರತಿಕ್ರಿಯಿಸಿದರು. 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/watch?v=I87DcFM35WY

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News