ಸಚಿವ ಸ್ಥಾನ ಆಕಾಂಕ್ಷಿಗಳಿಗೆ ಗುಡ್ ನ್ಯೂಸ್: 2-3 ದಿನದಲ್ಲಿ 'ಸಂಪುಟ ವಿಸ್ತರಣೆ'..!

ಸಚಿವ ಸ್ಥಾನದ ನಿರೀಕ್ಷೆಯಲ್ಲಿದ್ದವರಿಗೆ ಸಿಎಂ ಬಿ.ಎಸ್. ಯಡಿಯೂರಪ್ಪ ಗುಡ್ ನ್ಯೂಸ್

Last Updated : Nov 10, 2020, 06:22 PM IST
  • ಸಚಿವ ಸ್ಥಾನದ ನಿರೀಕ್ಷೆಯಲ್ಲಿದ್ದವರಿಗೆ ಸಿಎಂ ಬಿ.ಎಸ್. ಯಡಿಯೂರಪ್ಪ ಗುಡ್ ನ್ಯೂಸ್
  • ಉಪ ಚುನಾವಣೆಯಲ್ಲಿ ಬಿಜೆಪಿಯ ಅಭ್ಯರ್ಥಿಗಳನ್ನು ಗೆಲ್ಲಿಸಿದಂತ ಮತದಾರರಿಗೆ ಧನ್ಯವಾದ
  • ಬಿಜೆಪಿ ಹೈಕಮಾಂಡ್ ಭೇಟಿಯ ಬಳಿಕ, 2-3 ದಿನಗಳಲ್ಲಿ ಸಚಿವ ಸಂಪುಟವನ್ನು ವಿಸ್ತರಣೆ
ಸಚಿವ ಸ್ಥಾನ ಆಕಾಂಕ್ಷಿಗಳಿಗೆ ಗುಡ್ ನ್ಯೂಸ್: 2-3 ದಿನದಲ್ಲಿ 'ಸಂಪುಟ ವಿಸ್ತರಣೆ'..! title=
Image Courtesy: cm of karnataka twitter

ಬೆಂಗಳೂರು: ಶಿರಾ ಹಾಗೂ ರಾಜರಾಜೇಶ್ವರಿ()ನಗರಕ್ಕೆ ನಡೆದಂತ ಬೈಎಲೆಕ್ಷನ್ ನಲ್ಲಿ ಬಿಜೆಪಿಯ ಅಭ್ಯರ್ಥಿಗಳು ಭರ್ಜರಿ ಗೆಲುವನ್ನು ಸಾಧಿಸಿದ್ದಾರೆ. ಇಂತಹ ಸಂದರ್ಭದಲ್ಲಿಯೇ ಸಚಿವ ಸ್ಥಾನದ ನಿರೀಕ್ಷೆಯಲ್ಲಿದ್ದವರಿಗೆ ಸಿಎಂ ಬಿ.ಎಸ್. ಯಡಿಯೂರಪ್ಪ(CM B S Yediyurappa) ಗುಡ್ ನ್ಯೂಸ್ ನೀಡಿದ್ದಾರೆ. ಇನ್ನೂ ಎರಡು ಮೂರು ದಿನಗಳಲ್ಲಿಯೇ ಸಂಪುಟ ವಿಸ್ತರಣೆ ಮಾಡುವುದಾಗಿ ತಿಳಿಸಿದ್ದಾರೆ.

ಅಕ್ರಮ ಗಳಿಕೆಯ ಹಣ ಮತ್ತು ಆಡಳಿತ ಯಂತ್ರದ ದುರುಪಯೋಗಕ್ಕೆ ಸಿಕ್ಕಿರುವ ಗೆಲುವು-ಸಿದ್ಧರಾಮಯ್ಯ

ನಗರದಲ್ಲಿ ಉಪ ಚುನಾವಣೆಯ ಗೆಲುವಿನ ಕುರಿತು ಪ್ರತಿಕ್ರಿಯಿಸಿದ ಸಿಎಂ ಬಿಎಸ್ ವೈ, ನಾವು ಉಪ ಚುನಾವಣೆಯಲ್ಲಿ ಜನರಿಗೆ ಕೊಟ್ಟಿರುವಂತ ಭರವಸೆಯನ್ನು ಈಡೇರಿಸುತ್ತೇವೆ. 2 ವರ್ಷಗಳಲ್ಲಿ ಕ್ಷೇತ್ರದ ಅಭಿವೃದ್ಧಿ ಕೆಲಸಗಳನ್ನು ಮಾಡಿಯೇ ತೋರಿಸುತ್ತೇವೆ. ಉಪ ಚುನಾವಣೆಯಲ್ಲಿ ಬಿಜೆಪಿಯ ಅಭ್ಯರ್ಥಿಗಳನ್ನು ಗೆಲ್ಲಿಸಿದಂತ ಮತದಾರರಿಗೆ ಧನ್ಯವಾದಗಳನ್ನು ತಿಳಿಸಿದರು.

ಶಿರಾ ಹಾಗೂ RR. ನಗರದ 'ಉಪ ಸಮರ'ದಲ್ಲಿ ಕಾಂಗ್ರೆಸ್ -ಜೆಡಿಎಸ್ ಧೂಳಿಪಟ

ಇನ್ನೂ ಮುಂದುವರೆದು ಮಾತನಾಡಿದ ಅವರು, ನಾಳೆ ಅಥವಾ ನಾಡಿದ್ದು ಬಿಜೆಪಿ ವರಿಷ್ಠರನ್ನು ಭೇಟಿ ಮಾಡಲಿದ್ದೇನೆ. ಬಿಜೆಪಿ ಹೈಕಮಾಂಡ್ ಭೇಟಿಯ ಬಳಿಕ, 2-3 ದಿನಗಳಲ್ಲಿ ಸಚಿವ ಸಂಪುಟವನ್ನು ವಿಸ್ತರಣೆ ಮಾಡಲಾಗುತ್ತದೆ ಎಂದು ತಿಳಿಸಿದರು. ಈ ಮೂಲಕ ಸಚಿವ ಸ್ಥಾನ ಆಕಾಂಕ್ಷಿಗಳಿಗೆ 'ಗುಡ್ ನ್ಯೂಸ್' ನೀಡಿದ್ದಾರೆ.

Bihar Election 2020: ಫಲಿತಾಂಶಗಳ ಕುರಿತು Prakash Rai ನೀಡಿರುವ ಹೇಳಿಕೆ ಭಾರಿ ವೈರಲ್

Trending News