ನಾಳೆ ಸಂಜೆ 5 ಗಂಟೆಗೆ ಸಚಿವ ಸಂಪುಟ ವಿಸ್ತರಣೆ

ಜನವರಿ 3, 2017 ರಂದು ಸಚಿವ ಎಚ್.ಎಸ್. ಮಹದೇವಪ್ರಸಾದ್ ಅವರ ನಿಧನ ಮತ್ತು ಸಚಿವ ಎಚ್,ವೈ,ಮೇಟಿ ಮತ್ತು ಡಾ.ಜಿ.ಪರಮೇಶ್ವರ್ ಅವರ ರಾಜಿನಾಮೆಯಿಂದ ತೆರವಾಗಿದ್ದ ಮೂರು ಸಚಿವ ಸ್ಥಾನಗಳು ನಾಳೆ ಭರ್ತಿಯಾಗಳಿವೆ.

Last Updated : Aug 31, 2017, 04:24 PM IST
ನಾಳೆ ಸಂಜೆ 5 ಗಂಟೆಗೆ ಸಚಿವ ಸಂಪುಟ ವಿಸ್ತರಣೆ title=

ಬೆಂಗಳೂರು: ಜನವರಿ 3, 2017 ರಂದು ಸಚಿವ ಎಚ್.ಎಸ್. ಮಹದೇವಪ್ರಸಾದ್ ಅವರ ನಿಧನ ಮತ್ತು ಸಚಿವ ಎಚ್,ವೈ,ಮೇಟಿ ಮತ್ತು ಡಾ.ಜಿ.ಪರಮೇಶ್ವರ್ ಅವರ ರಾಜಿನಾಮೆಯಿಂದ ತೆರವಾಗಿದ್ದ ಮೂರು ಸಚಿವ ಸ್ಥಾನಗಳು ನಾಳೆ ಭರ್ತಿಯಾಗಳಿವೆ.

ವಿಧಾನ ಪರಿಷತ್ ಸದಸ್ಯರಾದ ಹೆಚ್.ಎಂ.ರೇವಣ್ಣ, ಆರ್.ಬಿ.ತಿಮ್ಮಾಪುರ್ ಹಾಗೂ ದಿ.ಎಚ್.ಎಸ್. ಮಹದೇವಪ್ರಸಾದ್ ಅವರ ಪತ್ನಿ ಗೀತಾ ಮಹಾದೇವ ಪ್ರಸಾದ್ ಸಚಿವರಾಗಿ ನಾಳೆ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ.

ಶಾಸಕ ಷಡಕ್ಷರಿ ಬದಲು ಗೀತಾ ಮಹದೇವ್ ಪ್ರಸಾದ್ ಗೆ ಸಚಿವ ಸ್ಥಾನ ನೀಡಲಾಗಿದೆ ಎಂಬ ಮಾಹಿತಿ ತಿಳಿದುಬಂದಿದೆ.

ನಾಳೆ ಸಂಜೆ 5 ಗಂಟೆಗೆ ರಾಜಭವನದಲ್ಲಿ ಪ್ರಮಾಣವಚನ ಸಮಾರಂಭ ನಡೆಯಲಿದೆ. ರಾಜ್ಯಪಾಲ ವಜುಬಾಯಿ ವಾಲಾ ನೂತನ ಸಚಿವರಿಗೆ ಪ್ರಮಾಣವಚನ ಭೋದಿಸಲಿದ್ದಾರೆ.

Trending News