ನೀಟ್ ಪರೀಕ್ಷೆಯಲ್ಲಿ ವಿಳಂಬ.. ವಿದ್ಯಾರ್ಥಿಗಳಿಗೆ ವಿಧಿಸುತ್ತಿದ್ದ ದಂಡ ಶುಲ್ಕ ರದ್ದು: ಸಚಿವ ಅಶ್ವತ್ಥ ನಾರಾಯಣ

ನೀಟ್ ಪರೀಕ್ಷೆಯಲ್ಲಿ (NEET Exam) ಆಗಿರುವ ವಿಳಂಬದಿಂದಾಗಿ, ಈಗಾಗಲೇ ಎಂಜಿನಿಯರಿಂಗ್ ಸೀಟು ಪಡೆದುಕೊಂಡು ಈಗ ವೈದ್ಯಕೀಯ ಕೋರ್ಸಿಗೆ (Medical) ಪ್ರವೇಶ ಪಡೆಯುತ್ತಿರುವ ವಿದ್ಯಾರ್ಥಿಗಳಿಗೆ ವಿಧಿಸುತ್ತಿದ್ದ ದಂಡ ಶುಲ್ಕವನ್ನು ರದ್ದುಪಡಿಸಲಾಗಿದೆ.

Written by - Prashobh Devanahalli | Edited by - Zee Kannada News Desk | Last Updated : Feb 11, 2022, 02:50 PM IST
  • ನೀಟ್ ಪರೀಕ್ಷೆಯಲ್ಲಿ ವಿಳಂಬ
  • ಎಂಜಿನಿಯರಿಂಗ್ ಸೀಟು ಪಡೆದುಕೊಂಡು ಈಗ ವೈದ್ಯಕೀಯ ಕೋರ್ಸಿಗೆ ಪ್ರವೇಶ ಪಡೆಯುತ್ತಿರುವ ವಿದ್ಯಾರ್ಥಿಗಳಿಗೆ ವಿಧಿಸುತ್ತಿದ್ದ ದಂಡ ಶುಲ್ಕ ರದ್ದು
  • ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್.ಅಶ್ವತ್ಥ ನಾರಾಯಣ ಹೇಳಿಕೆ
ನೀಟ್ ಪರೀಕ್ಷೆಯಲ್ಲಿ ವಿಳಂಬ.. ವಿದ್ಯಾರ್ಥಿಗಳಿಗೆ ವಿಧಿಸುತ್ತಿದ್ದ ದಂಡ ಶುಲ್ಕ ರದ್ದು: ಸಚಿವ ಅಶ್ವತ್ಥ ನಾರಾಯಣ  title=
ಸಚಿವ ಅಶ್ವತ್ಥ ನಾರಾಯಣ

ರಾಮನಗರ: ನೀಟ್ ಪರೀಕ್ಷೆಯಲ್ಲಿ (NEET Exam) ಆಗಿರುವ ವಿಳಂಬದಿಂದಾಗಿ, ಈಗಾಗಲೇ ಎಂಜಿನಿಯರಿಂಗ್ ಸೀಟು ಪಡೆದುಕೊಂಡು ಈಗ ವೈದ್ಯಕೀಯ ಕೋರ್ಸಿಗೆ (Medical) ಪ್ರವೇಶ ಪಡೆಯುತ್ತಿರುವ ವಿದ್ಯಾರ್ಥಿಗಳಿಗೆ ವಿಧಿಸುತ್ತಿದ್ದ ದಂಡ ಶುಲ್ಕವನ್ನು ರದ್ದುಪಡಿಸಲಾಗಿದೆ ಎಂದು ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್.ಅಶ್ವತ್ಥ ನಾರಾಯಣ ತಿಳಿಸಿದ್ದಾರೆ. 

ಇದನ್ನೂ ಓದಿ:WhatsApp: ಈ ಕೆಟ್ಟ ಚಟದಿಂದ ವಾಟ್ಸಾಪ್ ಜನರನ್ನು 'ಅನಾರೋಗ್ಯ'ಕ್ಕೆ ತಳ್ಳುತ್ತಿದೆ!

ಹಾಗೆಯೇ ಈ ವರ್ಷ ವಿದ್ಯಾರ್ಥಿಗಳಿಂದ ಸಂಗ್ರಹ ಮಾಡಿದ್ದ ಶುಲ್ಕವನ್ನೂ ಹಿಂದಿರುಗಿಸಲು ಕರ್ನಾಟಕ ಪರೀಕ್ಷಾ ಪ್ರಾಧಿಕಾರಕ್ಕೆ ಸೂಚಿಸಲಾಗಿದೆ ಎಂದು ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್.ಅಶ್ವತ್ಥ ನಾರಾಯಣ  (Ashwaththa Narayana)ತಿಳಿಸಿದ್ದಾರೆ.

ಸಾಮಾನ್ಯವಾಗಿ ಎಂಜಿನಿಯರಿಂಗ್ ಮತ್ತು ವೈದ್ಯಕೀಯ ಸೀಟು ಹಂಚಿಕೆ ಒಟ್ಟಿಗೆ ನಡೆಯುತ್ತಿತ್ತು. ಆದರೆ ಈ ವರ್ಷ ನೀಟ್ ಪರೀಕ್ಷಾ ವಿಚಾರ ಕೋರ್ಟ್ ಮೆಟ್ಟಿಲೇರಿದ್ದರಿಂದ ವೈದ್ಯಕೀಯ ಸೀಟು ಹಂಚಿಕೆ ಪ್ರಕ್ರಿಯೆ ವಿಳಂಬವಾಗಿದೆ ಎಂದಿದ್ದಾರೆ. 

ಈಗಾಗಲೇ ಎಂಜಿನಿಯರಿಂಗ್ (Engineering) ಪ್ರವೇಶಾತಿ ಪಡೆದಿರುವವರಿಗೆ ಈಗ ವೈದ್ಯಕೀಯ ಸೀಟು ಸಿಕ್ಕಿದ್ದರೆ, ಆಸಕ್ತರು ಅಲ್ಲಿಗೆ ಹೋಗಬಹುದು. ಅದಕ್ಕೆ ಯಾವುದೇ ದಂಡ ವಸೂಲಿ ಮಾಡುವುದಿಲ್ಲ. ಹಾಗೆಯೇ ಈ ವರ್ಷ ಕಟ್ಟಿದ್ದ ಶುಲ್ಕವನ್ನೂ ಮುಟ್ಟುಗೋಲು ಹಾಕಿಕೊಳ್ಳುವುದಿಲ್ಲ. ಬದಲಿಗೆ ವಿದ್ಯಾರ್ಥಿಗಳಿಗೆ ಹಿಂದಿರುಗಿಸಲಾಗುವುದು ಎಂಡು ಹೇಳಿದ್ದಾರೆ.

ಇದನ್ನೂ ಓದಿ:Viral video :ನಾಗಿಣಿಗಾಗಿ ನಾಗರ ಹಾವುಗಳ ಮಧ್ಯೆ ನಡೆಯಿತು ಐದು ಗಂಟೆಗಳ ಕಾಳಗ..! ಮುಂದೆ ಆಗಿದ್ದು ?

ಪ್ರವೇಶ ಪಡೆದ ನಂತರ ಸೀಟು ಬಿಟ್ಟು ಹೋಗುವವರಿಗೆ ಶುಲ್ಕದ ಐದು ಪಟ್ಟು ದಂಡ ವಿಧಿಸಲು ಕಾನೂನಿನಲ್ಲಿ ಅವಕಾಶ ಇದೆ. ಆದರೆ ಈ ಬಾರಿ ಇದಕ್ಕೆ ವಿನಾಯಿತಿ ನೀಡಲಾಗಿದೆ ಎಂಡಿದ್ದಾರೆ.

ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

Trending News