ಬೆಂಗಳೂರು: ಯಾರು ಏನೇ ಮಾಡಿದರೂ ಮೈತ್ರಿ ಸರ್ಕಾರವನ್ನು ಉರುಳಿಸು ಸಾಧ್ಯವಿಲ್ಲ ಎಂದು ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಹೇಳಿದ್ದಾರೆ.
ಪತ್ನಿ ಅನಿತಾ ಕುಮಾರಸ್ವಾಮಿ ಅವರೊಂದಿಗೆ ಮಲ್ಲೇಶ್ವರಂನಲ್ಲಿರುವ ಕಾಡು ಮಲ್ಲೇಶ್ವರ ದೇವಾಲಯಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸಿದ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಸಿಎಂ ಹೆಚ್.ಡಿ. ಕುಮಾರಸ್ವಾಮಿ, ಇಂದು ಕಡೆ ಕಾರ್ತಿಕ ಸೋಮವಾರದ ನಿಮಿತ್ತ ದೇವಸ್ಥಾನಕ್ಕೆ ಬಂದಿದ್ದೇವೆ. ದೇವರಿಗೆ ವಿಶೇಷ ಪೂಜೆ ಸಲ್ಲಿಸಿದ್ದೇವೆ. ರಾಜ್ಯದ ಜನರಿಗೆ ದೇವರು ಒಳ್ಳೆಯದು ಮಾಡಲಿ ಎಂದು ಕೇಳಿಕೊಂಡಿದ್ದೇನೆ ಎಂದು ಹೇಳಿದರು.
ಇದೇ ವೇಳೆ ಮಾತನಾಡಿದ ಅವರು ಬಿಜೆಪಿ ನಾಯಕರು ಸರ್ಕಾರವನ್ನು ಅಸ್ಥಿರಗೊಳಿಸಲು ಇನ್ನಿಲ್ಲದ ಪ್ರಯತ್ನಮಾಡುತ್ತಿದ್ದಾರೆ. ಯಾರು ಏನೇ ಮಾಡಿದರೂ ಸರ್ಕಾರ ಉರುಳಿಸಲು ಸಾಧ್ಯವಿಲ್ಲ ಎಂದು ವಿಶ್ವಾಸ ವ್ಯಕ್ತಪಡಿಸಿದರು.