CM Siddaramaiah : ಇಂದು ಕರ್ನಾಟಕ ಶೋಷಿತ ವರ್ಗಗಳ ಮಹಾಒಕ್ಕೂಟದ ನಿಯೋಗವನ್ನು ಭೇಟಿ ಮಾಡಿ ಮಾತನಾಡಿದರು. ಜಾತಿವಾರು ಸಮೀಕ್ಷೆಯಿಂದ ಜನರಿಗೆ ಒದಗಿಸಬೇಕಾದ ಸೌಲಭ್ಯಗಳು, (preferential treatment) ಮೊದಲಾದ ಅಂಶಗಳ ಕುರಿತು ಸೂಕ್ತ ನಿರ್ಧಾರ ಕೈಗೊಳ್ಳಲು ಅಗತ್ಯವಿರುವ ದತ್ತಾಂಶ ಲಭ್ಯವಾಗುವುದು. ಮೀಸಲಾತಿ ಮತ್ತಿತರ ಸೌಲಭ್ಯಗಳನ್ನು ಒದಗಿಸಲು ವೈಜ್ಞಾನಿಕ ಹಾಗೂ ನಿಖರ ಮಾಹಿತಿ ಅತಿ ಅಗತ್ಯ.
ಇದನ್ನೂ ಓದಿ-200 ಯೂನಿಟ್ ಉಚಿತ ವಿದ್ಯುತ್, 13 ಸಾವಿರ ಕೋಟಿ ಆರ್ಥಿಕ ಹೊರೆ: ಕೆಜೆ ಜಾರ್ಜ್
ಈ ಉದ್ದೇಶದಿಂದ ಜಾತಿವಾರು ಸಮೀಕ್ಷೆಯನ್ನು ನಡೆಸಲಾಗಿತ್ತು. ಇದೀಗ ವರದಿಯನ್ನು ಸ್ವೀಕರಿಸಿ, ಅದರಲ್ಲಿನ ದತ್ತಾಂಶಗಳ ಆಧಾರದಲ್ಲಿ ಸೂಕ್ತ ಕ್ರಮಗಳನ್ನು ಕೈಗೊಳ್ಳಲಾಗುವುದು ಎಂದು ತಿಳಿಸಿದರು. ಬಿಜೆಪಿ ಸರ್ಕಾರವು ಮೀಸಲಾತಿಯಲ್ಲಿ ಸೃಷ್ಟಿಸಿದ ಗೊಂದಲ ನಿವಾರಣೆ ಮಾಡಲಾಗುವುದು. ಇಲ್ಲವಾದರೆ ಯಾರಿಗೂ ಸಾಮಾಜಿಕ ನ್ಯಾಯ ಒದಗಿಸಲು ಸಾಧ್ಯವಾಗದು ಎಂದು ಮುಖ್ಯಮಂತ್ರಿಗಳು ಅಭಿಪ್ರಾಯಪಟ್ಟರು.
ಒಕ್ಕೂಟದ ಮುಖಂಡರಾದ ಕೆ.ಎಂ.ರಾಮಚಂದ್ರಪ್ಪ ಅವರ ನೇತೃತ್ವದಲ್ಲಿ ಮಾವಳ್ಳಿ ಶಂಕರ್, ಪ್ರೊ.ರವಿ ವರ್ಮಕುಮಾರ್, ಅನಂತ್ ನಾಯಕ್, ಡಾ.ನರಸಿಂಹಯ್ಯ, ಪ್ರೊ.ಜಾಫೆಟ್, ಬಿ.ಟಿ.ಲಲಿತಾನಾಯಕ್, ಜಿ.ಎಸ್.ಪಾಟೀಲ್ ಸೇರಿ 150 ಕ್ಕೂ ಹೆಚ್ಚು ಮಂದಿ ನಾನಾ ಜಾತಿಗಳ ಪ್ರತಿನಿಧಿಗಳು ಹಾಗೂ ಮುಖಂಡರು ಭಾಗವಹಿಸಿದ್ದರು.
ಇದನ್ನೂ ಓದಿ-Crime News: ಟ್ಯಾಕ್ಟರ್ ಆರ್ಭಟಕ್ಕೆ ಪುಟ್ಟ ಕಂದಮ್ಮ ಬಲಿ; ಮುಗಿಲು ಮುಟ್ಟಿದ ಪೋಷಕರ ಆಕ್ರಂದನ!
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://bit.ly/3LwfnhK
Instagram Link - https://bit.ly/3LyfY2l
Sharechat Link - https://bit.ly/3LCjokI ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.