ಚಾಮರಾಜನಗರ: ಕೆಆರ್ಎಸ್ ಮತ್ತು ಕಬಿನಿ ಜಲಾಶಯದ ಹೊರಹರಿವಿನಿಂದ ಕಾವೇರಿ ಆರ್ಭಟಿಸುತ್ತಿದ್ದು ಕೊಳ್ಳೇಗಾಲದ ನದಿ ಪಾತ್ರದ ಜನರಲ್ಲಿ ಪ್ರವಾಹ ಆತಂಕ ಎದುರಾಗಿದೆ.
ಕೊಳ್ಳೇಗಾಲದ ನದಿ ತೀರದ ಗ್ರಾಮಗಳಲ್ಲಿ ಪ್ರವಾಹ ಆತಂಕ (Flood fears in riverside villages) ಸೃಷ್ಟಿಯಾಗಿದ್ದು ಹಳೇ ಹಂಪಾಪುರ, ದಾಸನಪುರ, ಸರಗೂರು, ಅಣಗಳ್ಳಿ ಗ್ರಾಮಗಳು ಜಲಾವೃತವಾಗುವ ಭೀತಿ ಎದುರಾಗಿದೆ.
ಇದನ್ನೂ ಓದಿ- ರಾಜ್ಯದ 1,199 ಗ್ರಾಮ ಪಂಚಾಯತಿಗಳಲ್ಲಿ ಕೊಳಚೆ ನೀರಿಗೆ ಮುಕ್ತಿ ನೀಡುವುದಕ್ಕಾಗಿ ಪೈಲಟ್ ಯೋಜನೆ ಜಾರಿ!
ಈಗಾಗಲೇ ಹಳೇ ಹಂಪಾಪುರದ ಹತ್ತಾರು ಎಕರೆ ಜಮೀನು ಜಲಾವೃತಗೊಂಡಿದ್ದು ನೀರಿನ ಹರಿವು ಮತ್ತಷ್ಟು ಹೆಚ್ಚಾದರೇ ಜನ-ಜಾನುವಾರುಗಳಿಗೆ ಸಂಕಷ್ಠ ಎದುರಾಗಲಿದೆ. ಜಿಲ್ಲಾಡಳಿತ ಮತ್ತು ತಾಲೂಕು ಆಡಳಿತ ದಿನವೀಡಿ ನಿಗಾ ಇರಿಸಿದ್ದು
ತುರ್ತು ಸಂದರ್ಭದಲ್ಲಿ ಕಾಳಜಿ ಕೇಂದ್ರಕ್ಕೆ ಜನರನ್ನು ಕರೆದೊಯ್ಯಲು ಸಿದ್ಧತೆ ನಡೆಸಲಾಗಿದೆ.
ಇದನ್ನೂ ಓದಿ- ಬೆಳೆ ಸಮೀಕ್ಷೆ’ ರೈತರಿಗೆ ಒಂದು ಸುವರ್ಣಾವಕಾಶ
ಮತ್ತೊಂದೆಡೆ, ಕೆಆರ್ಎಸ್ ಡ್ಯಾಂ (KRS Dam) ನಿಂದ ನದಿಗೆ 1.50 ಲಕ್ಷ ಕ್ಯೂಸೆಕ್ ನೀರು ಬಿಡುಗಡೆ ಬಗ್ಗೆ ಮಾಹಿತಿ ನೀಡಿರುವ ಕಾವೇರಿ ನೀರಾವರಿ ನಿಗಮದಿಂದ, ಕಾವೇರಿ ನದಿಯಲ್ಲಿ ಭಾರೀ ಪ್ರವಾಹದ ಬಗ್ಗೆ ತುರ್ತು ಸಂದೇಶ ರವಾನಿಸಿದೆ.
ಪ್ರವಾಹ ಮುನ್ನೆಚ್ಚರಿಕೆ;
ಕಾವೇರಿ ನದಿ ಜಲಾನಯನ ಪ್ರದೇಶದಲ್ಲಿ (Cauvery River Basin) ಭಾರೀ ಮಳೆಯಾಗುತ್ತಿರುವುದರಿಂದ ಕೃಷ್ಣರಾಜಸಾಗರ ಜಲಾಶಯಕ್ಕೆ ಹೆಚ್ಚಿನ ನೀರು ಬರುತ್ತಿದ್ದು, ಕೆಆರ್ಎಸ್ ನಿಂದ ಸುಮಾರು 1,50,000ಕ್ಯೂಸೆಕ್ಸ್ ನೀರನ್ನು ಕಾವೇರಿ ನದಿಗೆ ಬಿಡಲಾಗುವುದು. ಈ ಪ್ರಮಾಣ ಹೆಚ್ಚಾಗುವ ಸಂಭವವಿರುವುದರಿಂದ ಕಾವೇರಿ ನದಿಯ ತಗ್ಗು ಪ್ರದೇಶದಲ್ಲಿರುವ ಮತ್ತು ನದಿಯ ಎರಡೂ ದಂಡೆಗಳಲ್ಲಿರುವ ಸಾರ್ವಜನಿಕರು ತಮ್ಮ ಆಸ್ತಿಪಾಸ್ತಿ ಹಾಗೂ ಜಾನುವಾರುಗಳ ರಕ್ಷಣೆ ಬಗ್ಗೆ ಎಚ್ಚರ ವಹಿಸುವಂತ ಮನವಿ ಮಾಡಲಾಗಿದೆ.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://tinyurl.com/7jmvv2nz
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.