ಡಿಕೆ ಸಹೋದರರ ಆಪ್ತರ ಮೇಲೆ ಸಿಬಿಐ ದಾಳಿ

ಕನಕಪುರ ಕ್ಷೇತ್ರದ ಶಾಸಕ ಮತ್ತು ಬೆಂಗಳೂರು ಗ್ರಾಮಾಂತರ ಕ್ಷೇತ್ರದ ಸಂಸದರ ಆಪ್ತರ ಮೇಲೆ ಸಿಬಿಐ ದಾಳಿ ನಡೆಸಿದೆ.

Last Updated : May 31, 2018, 01:58 PM IST
ಡಿಕೆ ಸಹೋದರರ ಆಪ್ತರ ಮೇಲೆ ಸಿಬಿಐ ದಾಳಿ title=

ಬೆಂಗಳೂರು: ಕೇಂದ್ರ ಸರ್ಕಾರ ನಮ್ಮ ಮೇಲೆ ಸಂಚು ಹೂಡಿದೆ. 11 ಮಂದಿ ನಮ್ಮ ಆಪ್ತರ ಮನೆ ಮೇಲೆ ಸರ್ಚ್ ವಾರಂಟ್ ಹೊರಡಿಸಲಾಗಿದೆ ಎಂದು ಕಾಂಗ್ರೆಸ್‌ ನಾಯಕ ಡಿ.ಕೆ.ಶಿಕುಮಾರ್‌ ಮತ್ತು ಸಂಸದ ಡಿ.ಕೆ.ಸುರೇಶ್‌ ಅವರು ಸುದ್ದಿಗೋಷ್ಠಿ ನಡೆಸಿ ಹೇಳಿಕೆ ನೀಡಿದ ಬೆನ್ನಲ್ಲೇ, ಕನಕಪುರ ಕ್ಷೇತ್ರದ ಶಾಸಕ ಡಿ.ಕೆ.ಶಿವಕುಮಾರ್ ಮತ್ತು ಬೆಂಗಳೂರು ಗ್ರಾಮಾಂತರ ಕ್ಷೇತ್ರದ ಸಂಸದ ಡಿ.ಕೆ.ಸುರೇಶ್ ಅವರ 11 ಆಪ್ತರ ಮನೆಗಳ ಮೇಲೆ ಸಿಬಿಐ ಇಂದು  ದಾಳಿ ನಡೆಸಿದೆ.

ಡಿ.ಕೆ.ಶಿವಕುಮಾರ್‌ ಅವರ ಕೆಲ ವ್ಯವಹಾರದ ಪಾಲುದಾರರ ನಿವಾಸಗಳ ಮೇಲೆ ಮೇಲೆ ಸಿಬಿಐ ಅಧಿಕಾರಿಗಳು ದಾಳಿ ನಡೆಸಿರುವ ಕುರಿತು ವರದಿಯಾಗಿದೆ. ಬುಧವಾರ ಸಿಬಿಐ 11 ಮಂದಿಯ ವಿರುದ್ಧ ಕೋರ್ಟ್‌ನಲ್ಲಿ ಸರ್ಚ್‌ ವಾರೆಂಟ್‌ ಪಡೆದಿತ್ತು. ಈ ಬಗ್ಗೆ ಡಿಕೆ ಸಹೋದರರು ಗುರುವಾರ ಬೆಳಿಗ್ಗೆ ಸುದ್ದಿಗೋಷ್ಠಿ ನಡೆಸಿ, ಸಿಬಿಐ, ಆದಾಯ ತೆರಿಗೆ ಇಲಾಖೆ ಹಾಗೂ ಇಡಿ ಅಧಿಕಾರಿಗಳೊಂದಿಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್‌ ಶಾ ಮತ್ತು ಪ್ರಧಾನಿ ನರೇಂದ್ರ ಮೋದಿ ಸಭೆ ನಡೆಸಿದ್ದಾರೆ. ನಮ್ಮ ವಿರುದ್ಧ ಪ್ರಕರಣ ದಾಖಲಿಸಲು ತಂತ್ರ ರೂಪಿಸಿದ್ದಾರೆ ಎಂದು ಆರೋಪಿಸಿದರು. ರಾಜಕೀಯ ಉದ್ದೇಶದಿಂದ ತೊಂದರೆ ನೀಡಲಾಗುತ್ತಿದೆ. ನಮ್ಮ ಬಂಧುಗಳು ಹಾಗೂ ಸ್ನೇಹಿತರಿಗೂ ಚಿತ್ರಹಿಂಸೆ ಕೊಡುವ ಕೆಲಸದಲ್ಲಿ ಬಿಜೆಪಿ ಸರ್ಕಾರ ತೊಡಗಿದೆ ಎಂದು ಹೇಳಿದ್ದರು.

Trending News