ಡಿ.ಕೆ. ಶಿವಕುಮಾರ್ ಹಾಗೂ ಡಿ.ಕೆ. ಸುರೇಶ್ ಮನೆ ಮೇಲೆ ಸಿಬಿಐ ದಾಳಿ

ಆದಾಯ ತೆರಿಗೆ ಇಲಾಖೆ ಹಾಗೂ ಜಾರಿ ನಿರ್ದೇಶನಾಲಯ ಈಗಾಗಲೇ ಡಿ.ಕೆ‌. ಶಿವಕುಮಾರ್ ವಿರುದ್ಧ ದೂರು ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದು, ಈ‌ ಹಿನ್ನಲೆಯಲ್ಲಿ ಪ್ರಕರಣದ ತನಿಖೆ ನಡೆಸುವಂತೆ ರಾಜ್ಯ ಸರ್ಕಾರ ಸಿಬಿಐಗೆ ಅನುಮತಿ ನೀಡಿತ್ತು.

Written by - Yashaswini V | Last Updated : Oct 5, 2020, 09:58 AM IST
  • ಡಿ.ಕೆ. ಶಿವಕುಮಾರ್ ಭ್ರಷ್ಟಾಚಾರದಿಂದ ಅಕ್ರಮವಾಗಿ ಹಣ ಮತ್ತು ಆಸ್ತಿ ಗಳಿಸಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಜಾರಿ‌ ನಿರ್ದೇಶನಾಲಯ ತನಿಖೆ ನಡೆಸುತ್ತಿದೆ.
  • ಆದಾಯ ತೆರಿಗೆ ಇಲಾಖೆ ಹಾಗೂ ಜಾರಿ ನಿರ್ದೇಶನಾಲಯ ಈಗಾಗಲೇ ಡಿ.ಕೆ‌. ಶಿವಕುಮಾರ್ ವಿರುದ್ಧ ದೂರು ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದು, ಈ‌ ಹಿನ್ನಲೆಯಲ್ಲಿ ಪ್ರಕರಣದ ತನಿಖೆ ನಡೆಸುವಂತೆ ರಾಜ್ಯ ಸರ್ಕಾರ ಸಿಬಿಐಗೆ ಅನುಮತಿ ನೀಡಿತ್ತು.
  • ರಾಜ್ಯ ಸರ್ಕಾರದ ಅನುಮತಿ ಆಧಾರದ ಮೇರೆಗೆ ಸಿಬಿಐ ಈಗ ವಿಚಾರಣೆ ಆರಂಭಿಸಿರುವ ಸಾಧ್ಯತೆ ಇದೆ.
ಡಿ.ಕೆ. ಶಿವಕುಮಾರ್ ಹಾಗೂ ಡಿ.ಕೆ. ಸುರೇಶ್ ಮನೆ ಮೇಲೆ ಸಿಬಿಐ ದಾಳಿ title=
File Image

ಬೆಂಗಳೂರು: ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ (DK Shivakumar) ಹಾಗೂ ಅವರ ಸಹೋದರ, ಸಂಸದ ಡಿ.ಕೆ. ಸುರೇಶ್ ಅವರ ಬೆಂಗಳೂರು ಮನೆಗಳ ಮೇಲೆ ಇಂದು ಬೆಳಿಗ್ಗೆ ಸಿಬಿಐ (CBI) ಅಧಿಕಾರಿಗಳು ದಾಳಿ ನಡೆಸಿದ್ದಾರೆ‌.

ಡಿ.ಕೆ. ಶಿವಕುಮಾರ್ ಭ್ರಷ್ಟಾಚಾರದಿಂದ ಅಕ್ರಮವಾಗಿ ಹಣ ಮತ್ತು ಆಸ್ತಿ ಗಳಿಸಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಜಾರಿ‌ ನಿರ್ದೇಶನಾಲಯ ತನಿಖೆ ನಡೆಸುತ್ತಿದೆ. ಜಾರಿ ನಿರ್ದೇಶನಾಲಯ (Enforcement Directorate) 'ಡಿ.ಕೆ. ಶಿವಕುಮಾರ್ ಭ್ರಷ್ಟಾಚಾರದಿಂದ ಹಣ ಸಂಪಾದಿಸಿರುವ ಬಗ್ಗೆ ತನಿಖೆ ನಡೆಸಬಹುದೆಂದು' ಸಿಬಿಐಗೂ ಹೇಳಿದೆ. ಈ ಹಿನ್ನಲೆಯಲ್ಲಿ ಸಿಬಿಐ ಇಂದು ದಾಳಿ ಮಾಡಿದೆ ಎಂದು ಹೇಳಲಾಗುತ್ತಿದೆ.

ಇಡಿ ಸಮನ್ಸ್: ನಾನು ಕೆಂಪೇಗೌಡನ ಮಗ, ಹೆದರಿ ಹೋಗುವ ಮಾತೇ ಇಲ್ಲ- ಡಿ.ಕೆ. ಶಿವಕುಮಾರ್‌

ಆದಾಯ ತೆರಿಗೆ ಇಲಾಖೆ ಹಾಗೂ ಜಾರಿ ನಿರ್ದೇಶನಾಲಯ ಈಗಾಗಲೇ ಡಿ.ಕೆ‌. ಶಿವಕುಮಾರ್ ವಿರುದ್ಧ ದೂರು ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದು, ಈ‌ ಹಿನ್ನಲೆಯಲ್ಲಿ ಪ್ರಕರಣದ ತನಿಖೆ ನಡೆಸುವಂತೆ ರಾಜ್ಯ ಸರ್ಕಾರ ಸಿಬಿಐಗೆ ಅನುಮತಿ ನೀಡಿತ್ತು. ರಾಜ್ಯ ಸರ್ಕಾರದ ಅನುಮತಿ ಆಧಾರದ ಮೇರೆಗೆ ಸಿಬಿಐ ಈಗ ವಿಚಾರಣೆ ಆರಂಭಿಸಿರುವ ಸಾಧ್ಯತೆ ಇದೆ.

ಡಿ.ಕೆ.ಶಿವಕುಮಾರ್‌ಗೆ ಟೀಕೆ ಮಾಡಿ ಕಡೆಗೆ ಅಣ್ಣ ಎಂದ ಸಚಿವ ಆರ್. ಅಶೋಕ್

ಡಿ.ಕೆ. ಶಿವಕುಮಾರ್ ಹಾಗೂ ಡಿ.ಕೆ. ಸುರೇಶ್ (DK Suresh) ಅವರ ಬೆಂಗಳೂರಿನ ಸದಾಶಿವನಗರ ನಿವಾಸಗಳ ಮೇಲೆ 5 ಜನ ಸಿಬಿಐ ಅಧಿಕಾರಿಗಳು ದಾಳಿ ನಡೆಸಿದ್ದು ಮುಂಜಾನೆಯಿಂದಲೂ ದಾಖಲೆಗಳ ಪರಿಶೀಲನೆಯಲ್ಲಿ ನಿರತರಾಗಿದ್ದಾರೆ. ಡಿ.ಕೆ. ಶಿವಕುಮಾರ್ ಆದಾಯಕ್ಕಿಂತ ಹೆಚ್ಚು ಆಸ್ತಿ ಗಳಿಸಿರುವ ಬಗ್ಗೆ ಸಿಬಿಐ ಅಧಿಕಾರಿಗಳು ಮಾಹಿತಿ ಸಂಗ್ರಹಿಸುತ್ತಿರುವ ಸಾಧ್ಯತೆ ಇದೆ.

ಸಿಬಿಐ ಅಧಿಕಾರಿಗಳ ದಾಳಿಯ ಹಿನ್ನಲೆಯಲ್ಲಿ ಡಿ.ಕೆ. ಶಿವಕುಮಾರ್ ಮನೆಗೆ ಅವರ ವಕೀಲ ವಿಕ್ರಮ್ ಆಗಿಸಿದ್ದಾರೆ. ವಿಕ್ರಮ್ ಅವರು ಕರ್ನಾಟಕದಲ್ಲಿ ಡಿ.ಕೆ. ಶಿವಕುಮಾರ್ ಅವರ ವ್ಯಾಜ್ಯಗಳನ್ನು ನೋಡಿಕೊಳ್ಳುತ್ತಿದ್ದಾರೆ. ಸದ್ಯ ಡಿ.ಕೆ‌. ಶಿವಕುಮಾರ್ ಹಾಗೂ ಡಿ.ಕೆ.‌ ಸುರೇಶ್ ಅವರನ್ನು ವಿಚಾರಣೆಗೆ ಒಳಪಡಿಸಲಾಗಿದೆ. ಸಿಬಿಐ ದಾಳಿ ಸುದ್ದಿ ತಿಳಿಯುತ್ತಿದ್ದಂತೆ ಡಿ.ಕೆ. ಶಿವಕುಮಾರ್ ಬೆಂಬಲಿಗರು ಹಾಗೂ ಕಾಂಗ್ರೆಸ್ ಕಾರ್ಯಕರ್ತರು ಸದಾಶಿವನಗರದ ಮನೆ ಬಳಿ ಆಗಮಿಸುತ್ತಿದ್ದಾರೆ.

Trending News