ಬೆಂಗಳೂರಿನಲ್ಲಿ ಕ್ರಿಕೆಟ್ ಬೆಟ್ಟಿಂಗ್, ಇಬ್ಬರು ಅರೆಸ್ಟ್

ಬೆಂಗಳೂರಿನಲ್ಲಿ ನಡೆದ ಭಾರತ ಮತ್ತು ದಕ್ಷಿಣ ಆಫ್ರಿಕಾ ನಡುವಿನ ಟಿ -20 ಸರಣಿಯ ಮೂರನೇ ಪಂದ್ಯದ ವೇಳೆ ಬೆಟ್ಟಿಂಗ್ ಕಟ್ಟಿದ್ದ ಆರೋಪದ ಮೇಲೆ ಇಬ್ಬರನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.

Last Updated : Sep 24, 2019, 12:07 PM IST
ಬೆಂಗಳೂರಿನಲ್ಲಿ ಕ್ರಿಕೆಟ್ ಬೆಟ್ಟಿಂಗ್, ಇಬ್ಬರು ಅರೆಸ್ಟ್ title=
Pic Courtesy: ANI

ಬೆಂಗಳೂರು: ಕ್ರಿಕೆಟ್ ಬೆಟ್ಟಿಂಗ್‌ನಲ್ಲಿ ತೊಡಗಿದ್ದ ಇಬ್ಬರು ವ್ಯಕ್ತಿಗಳನ್ನು ಸಿಸಿಬಿ ಪೊಲೀಸರು ಮಂಗಳವಾರ ಬಂಧಿಸಿದ್ದಾರೆ.

ಬೆಂಗಳೂರಿನಲ್ಲಿ ನಡೆದ ಭಾರತ ಮತ್ತು ದಕ್ಷಿಣ ಆಫ್ರಿಕಾ ನಡುವಿನ ಟಿ -20 ಸರಣಿಯ ಮೂರನೇ ಪಂದ್ಯದ ವೇಳೆ ಬೆಟ್ಟಿಂಗ್ ಕಟ್ಟಿದ್ದ ಆರೋಪದ ಮೇಲೆ ಇಬ್ಬರನ್ನು ಬಂಧಿಸಿರುವ ಪೊಲೀಸರು ಆರೋಪಿಗಳಿಂದ 41 ಲಕ್ಷ ರೂ. ನಗದು ವಶಪಡಿಸಿಕೊಂಡಿದ್ದಾರೆ.

ಈ ವರ್ಷದ ಜೂನ್‌ನಲ್ಲಿ ವಿದೇಶದಿಂದ ಕಾರ್ಯಾಚರಣೆ ನಡೆಸುತ್ತಿದ್ದ ಸಂಘಟಿತ ಕ್ರಿಕೆಟ್ ಬೆಟ್ಟಿಂಗ್ ದಂಧೆಯನ್ನು ಹೈದರಾಬಾದ್‌ನಲ್ಲಿ ಪೊಲೀಸರು ಬಂಧಿಸಿದ್ದರು. ಒಟ್ಟು ಆರು ಜನರನ್ನು ಬಂಧಿಸಿದ್ದ ತನಿಖಾ ತಂಡ 8 ಲಕ್ಷ ರೂ.ಗಳನ್ನು ವಶಪಡಿಸಿಕೊಂಡಿತ್ತು.

Trending News