ಬೆಂಗಳೂರು: ಬೆಂಗಳೂರು ಸೇರಿದಂತೆ ರಾಜ್ಯದ 31 ಜಿಲ್ಲೆಗಳಲ್ಲೂ ಸರ್ಕಾರದ ವತಿಯಿಂದ ನಾಡಪ್ರಭು ಕೆಂಪೇಗೌಡರ ಜಯಂತಿ ಆಚರಿಸುತ್ತಿದ್ದೇವೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
ಮಂಗಳವಾರ ವಿಧಾನಸೌಧದಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಅವರು, 'ಇಂದು ಬೆಂಗಳೂರು ಇಷ್ಟೊಂದು ಬೆಳೆಯಲು ಕೆಂಪೇಗೌಡರೇ ಮುಖ್ಯ ಕಾರಣ. ಈ ಹಿಂದೆ ಕೂಡ ನಮ್ಮ ಸರ್ಕಾರವೇ ಕೆಂಪೇಗೌಡ ಜಯಂತಿ ಆರಂಭಿಸಿದ್ದು, ಸರ್ಕಾರದಿಂದ ರಾಜ್ಯಮಟ್ಟದ ಕೆಂಪೇಗೌಡ ಜಯಂತ್ಯೋತ್ಸವ ಆಚರಿಸಲು ನಾವು ಆದೇಶ ನೀಡಿದ್ದೆವು’ ಎಂದು ಹೇಳಿದರು.
ಇದನ್ನೂ ಓದಿ: ರಾಜ್ಯದಲ್ಲಿ ATM ಸರ್ಕಾರ ದಿನೇ ದಿನೆ ಜನರಿಗೆ ತನ್ನ ಉಗ್ರರೂಪ ತೋರಿಸುತ್ತಿದೆ: ಬಿಜೆಪಿ
ರಾಜ್ಯದ ಎಲ್ಲಾ 31 ಜಿಲ್ಲೆಗಳಲ್ಲೂ ಜಿಲ್ಲಾಮಟ್ಟದಲ್ಲಿ, ಜಿಲ್ಲಾ ಕೇಂದ್ರಗಳಲ್ಲಿ ಬಹಳ ವಿಜೃಂಭಣೆಯಿಂದ ಕೆಂಪೇಗೌಡ ಜಯಂತಿ ಆಚರಿಸುತ್ತಿದ್ದೇವೆ. ಬೆಂಗಳೂರಿನ 5 ದಿಕ್ಕುಗಳಿಂದ ಜ್ಯೋತಿ ಹಿಡಿದು ವಿಧಾನಸೌಧಕ್ಕೆ ಜಾತ್ರಾ ಮೆರವಣಿಗೆ ನಡೆಸಲಾಗಿದೆ. ಸಚಿವ ಕೃಷ್ಣಭೈರೇಗೌಡ ಜ್ಯೋತಿಗಳನ್ನು ಸ್ವಾಗತಿಸಿ ಕೆಂಪೇಗೌಡರಿಗೆ ನಮನ ಸಲ್ಲಿಸಲಿದ್ದಾರೆ ಎಂದು ಸಿದ್ದರಾಮಯ್ಯ ಹೇಳಿದರು.
ನಾಡಪ್ರಭು ಕೆಂಪೇಗೌಡ ಅವರ 514ನೇ ಜಯಂತಿ ಅಂಗವಾಗಿ ವಿಧಾನಸೌಧದಲ್ಲಿರುವ ಕೆಂಪೇಗೌಡರ ಪ್ರತಿಮೆಗೆ ಮುಖ್ಯಮಂತ್ರಿ @siddaramaiah ಅವರು ಮಾಲಾರ್ಪಣೆ ಮಾಡಿ ಗೌರವ ಸಲ್ಲಿಸಿದರು.
ಕಂದಾಯ ಸಚಿವರಾದ @krishnabgowda, ಮಾಜಿ ಸಚಿವರಾದ @HMRevanna, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಕೆ.ಗೋವಿಂದರಾಜು ಅವರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು. pic.twitter.com/aktnugUllQ— CM of Karnataka (@CMofKarnataka) June 27, 2023
‘ನಮ್ಮ ಸರ್ಕಾರವೇ ಕೆಂಪೇಗೌಡ ಜಯಂತಿ ಆರಂಭಿಸಿದ್ದು, ಅಲ್ಲದೇ ಕೆಂಪೇಗೌಡ ಪ್ರಾಧಿಕಾರವನ್ನು ರಚನೆ ಮಾಡಿದ್ದು ಮತ್ತು ದೇವನಹಳ್ಳಿಯ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಕೆಂಪೇಗೌಡ ವಿಮಾನ ನಿಲ್ದಾಣ ಅಂತಾ ಹೆಸರು ಇಟ್ಟಿದ್ದು ಕೂಡ ನಾವೇ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.
ಇದನ್ನೂ ಓದಿ: ಸಂವಿಧಾನ ಇಲ್ಲದಿದ್ರೆ ನಾನು, ಸಿಟಿ ರವಿ, ಈಶ್ವರಪ್ಪ ಕುರಿ ಮೇಯಿಸ್ತಾ ಇರಬೇಕಿತ್ತು: ಸಿದ್ದರಾಮಯ್ಯ
ರಾಜ್ಯಮಟ್ಟ ಮತ್ತು ಜಿಲ್ಲಾಮಟ್ಟದಲ್ಲಿ ಕೆಂಪೇಗೌಡ ಜಯಂತಿ ಆಚರಿಸುವ ಮೂಲಕ ನಾಡಪ್ರಭುಗಳನ್ನು ಸ್ಮರಿಸಿಕೊಳ್ಳುತ್ತಿದ್ದೇವೆ. ದಕ್ಷ ಆಡಳಿತಗಾರರಾಗಿದ್ದ ಕೆಂಪೇಗೌಡರು ಬೆಂಗಳೂರಿನ ಅಭಿವೃದ್ಧಿಗೆ ಅಡಿಪಾಯ ಹಾಕಿದ್ದರು. ಕೆಂಪೇಗೌಡರ ದೂರದೃಷ್ಟಿಯಿಂದಲೇ ಇಂದು ಬೆಂಗಳೂರು ಉತ್ತಮವಾಗಿ ಅಭಿವೃದ್ಧಿಯಾಗಿದೆ. ಇಂದು ಪ್ರತಿಯೊಬ್ಬರೂ ಅವರ ಕೊಡುಗೆಯನ್ನು ಸ್ಮರಿಸಬೇಕು’ ಎಂದು ಹೇಳಿದರು.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://bit.ly/3LwfnhK
Instagram Link - https://bit.ly/3LyfY2l
Sharechat Link - https://bit.ly/3LCjokI ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.