ಕೇಂದ್ರ ಸರ್ಕಾರ ರೈತರ ಹಣ ಕಡಿತಗೊಳಿಸಿ ರೈತರನ್ನು ಲೇವಾದೇವಿದಾರರ ಕಪಿಮುಷ್ಠಿಗೆ ಒಪ್ಪಿಸಿದೆ: ಸಿಎಂ ಸಿದ್ದರಾಮಯ್ಯ ಆಕ್ರೋಶ

CM Siddaramaiah: ರೈತರಿಗೆ ನೀಡುತ್ತಿದ್ದ ಸಬ್ಸಡಿ ಸಾಲ ಕಡಿತಗೊಳಿಸಿದ್ದರಿಂದ ರಾಜ್ಯದಲ್ಲಿ ಮತ್ತು ದೇಶದಲ್ಲಿ ಆಹಾರ ಉತ್ಪಾದನೆಯ ಮೇಲೆ ಕೆಟ್ಟ ಪರಿಣಾಮ ಬೀರಲಿದೆ ಎಂದರು.

Written by - Prashobh Devanahalli | Last Updated : Nov 29, 2024, 04:04 PM IST
  • ನಬಾರ್ಡ್ 4.5% ಬಡ್ಡಿಗೆ ರೈತರ ಸಾಲದ ಹಣ ನೀಡುತ್ತಿತ್ತು
  • ನಾವು ರೈತರಿಗೆ ಬಡ್ಡಿ ರಹಿತವಾಗಿ ಸಾಲ ನೀಡಿ ಈ 4.5% ಬಡ್ಡಿಯನ್ನು ಸರ್ಕಾರವೇ ಭರಿಸುತ್ತಿತ್ತು
  • ಮುಖ್ಯಮಂತ್ರಿ ಸಿದ್ದರಾಮಯ್ಯ ಆಕ್ರೋಶ
ಕೇಂದ್ರ ಸರ್ಕಾರ ರೈತರ ಹಣ ಕಡಿತಗೊಳಿಸಿ ರೈತರನ್ನು ಲೇವಾದೇವಿದಾರರ ಕಪಿಮುಷ್ಠಿಗೆ ಒಪ್ಪಿಸಿದೆ: ಸಿಎಂ ಸಿದ್ದರಾಮಯ್ಯ ಆಕ್ರೋಶ title=

ದೆಹಲಿ: ರಾಜ್ಯದ ರೈತರಿಗೆ ನೀಡಬೇಕಾಗಿದ್ದ ನಬಾರ್ಡ್ ಹಣದಲ್ಲಿ ಶೇ58 ರಷ್ಟು ಕೇಂದ್ರ ಸರ್ಕಾರ ಕಡಿತಗೊಳಿಸಿರುವುದರಿಂದ ರೈತರು ಅಧಿಕ ಬಡ್ಡಿಗೆ ಸಾಲಕೊಡುವ ಲೇವಾದೇವಿದಾರರ ಸುಳಿಗೆ ಸಿಲುಕಲಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಆಕ್ರೋಶ ವ್ಯಕ್ತಪಡಿಸಿದರು. 

ದೆಹಲಿಯ ಕರ್ನಾಟಕ ಭವನದಲ್ಲಿ ಮಾಧ್ಯಮದವರ ಜೊತೆ ಮಾತನಾಡಿದರು. ರೈತರಿಗೆ ನೀಡುತ್ತಿದ್ದ ಸಬ್ಸಡಿ ಸಾಲ ಕಡಿತಗೊಳಿಸಿದ್ದರಿಂದ ರಾಜ್ಯದಲ್ಲಿ ಮತ್ತು ದೇಶದಲ್ಲಿ ಆಹಾರ ಉತ್ಪಾದನೆಯ ಮೇಲೆ ಕೆಟ್ಟ ಪರಿಣಾಮ ಬೀರಲಿದೆ ಎಂದರು.

ರಾಜ್ಯದ ರೈತರಿಗೆ ಮಾತ್ರ ನಬಾರ್ಡ್ ಸಾಲದ ಪ್ರಮಾಣ ಕಡಿಮೆ ಮಾಡಿಲ್ಲ. ಇಡೀ ದೇಶದಲ್ಲಿ ಕಡಿತಗೊಳಿಸಲಾಗಿದೆ ಎನ್ನುವ ಮಾಧ್ಯಮದವರ ಪ್ರಶ್ನೆಗೆ ಉತ್ತರಿಸಿದ ಸಿಎಂ, ಇದರಿಂದ ಇಡೀ ದೇಶದ ರೈತರನ್ನು ಸಂಕಷ್ಟಕ್ಕೆ ದೂಡಿದಂತಾಗಿದೆ. ಇಡೀ ದೇಶದ ಕೃಷಿ ಉತ್ಪಾದನೆ ಮೇಲೆ ಕೆಟ್ಟ ಪರಿಣಾಮ ಬೀರಲಿದೆ ಎಂದರು.

ಇದನ್ನೂ ಓದಿ : ರಾಜ್ಯದಲ್ಲಿ ಸಚಿವ ಸಂಪುಟ ವಿಸ್ತರಣೆ ಅಥವಾ ಪುನರ್‌ರಚನೆಯಾಗುತ್ತಾ? ದೆಹಲಿ ಭೇಟಿ ಬಳಿಕ ಸಿಎಂ ಸಿದ್ದರಾಮಯ್ಯ ಹೇಳಿದ್ದೇನು?

ನಬಾರ್ಡ್ 4.5% ಬಡ್ಡಿಗೆ ರೈತರ ಸಾಲದ ಹಣ ನೀಡುತ್ತಿತ್ತು. ನಾವು ರೈತರಿಗೆ ಬಡ್ಡಿ ರಹಿತವಾಗಿ ಸಾಲ ನೀಡಿ ಈ 4.5% ಬಡ್ಡಿಯನ್ನು ಸರ್ಕಾರವೇ ಭರಿಸುತ್ತಿತ್ತು. ಈಗ ರಾಷ್ಟ್ರೀಕೃತ ವಾಣಿಜ್ಯ ಬ್ಯಾಂಕ್ ಗಳಿಂದ ಸಾಲ ಪಡೆಯುವಂತೆ ಕೇಂದ್ರ ಸರ್ಕಾರ ಹೇಳುತ್ತಿದೆ. ಶೇ10 ಬಡ್ಡಿ ದರದಲ್ಲಿ ವಾಣಿಜ್ಯ ಬ್ಯಾಂಕ್ ಗಳು ಸಾಲ ನೀಡುತ್ತವೆ. ಇದರಿಂದ ಬ್ಯಾಂಕ್ ಗಳಿಗೆ ಲಾಭ ಆಗುತ್ತದೆಯೇ ಹೊರತು ರೈತರಿಗೆ ಅನುಕೂಲ ಇಲ್ಲ ಎಂದರು.‌

15 ನೇ ಹಣಕಾಸು ಆಯೋಗದಲ್ಲೂ ರಾಜ್ಯಕ್ಕೆ ಅನ್ಯಾಯ ಆಯಿತು. ಭದ್ರಾ ಮೇಲ್ದಂಡೆ ಯೋಜನೆಗೆ 5000 ಕೋಟಿ ಘೋಷಿಸಿ ಒಂದು ಪೈಸೆಯನ್ನೂ ಕೊಡಲಿಲ್ಲ. ಫೆರಿಫೆರಲ್ ರಿಂಗ್ ರಸ್ತೆಗೂ ಕೊಡಲಿಲ್ಲ. ಇವೆಲ್ಲದರಿಂದ 11000 ಕೋಟಿ ರೂ ರಾಜ್ಯಕ್ಕೆ ನಷ್ಟವಾಗಿದ್ದನ್ನೂ ಪ್ರಧಾನಮಂತ್ರಿಯವರಿಗೆ ನೆನಪಿಸಿದ್ದೇವೆ. ಹೀಗಾಗಿ ಈ ಬಾರಿ ಮತ್ತೆ ನಬಾರ್ಡ್ ಮೂಲಕ ಆಗಿರುವ ಅನ್ಯಾಯವನ್ನು ಸರಿಪಡಿಸಲು ಮನವಿ ಮಾಡಿದ್ದೇವೆ  ಎಂದರು.

ರಾಜ್ಯಕ್ಕೆ ನಿರಂತರ ಅನ್ಯಾಯ ಆಗುತ್ತಿದೆ.  ಮಹದಾಯಿ, ಮೇಕೆದಾಟುಗೆ ಅನುಮತಿ ನೀಡುತ್ತಿಲ್ಲ. ಇಷ್ಟಾದರೂ ರಾಜ್ಯದಿಂದ ಆಯ್ಕೆ ಆಗಿರುವ ಬಿಜೆಪಿ ಸಂಸದರು ಬಾಯಿ ಬಿಡುತ್ತಿಲ್ಲ. ಮಣ್ಣಿನ ಮಗ ಅಂದುಕೊಂಡಿರುವ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಏನು ಮಾಡುತ್ತಿದ್ದಾರೆ. ರಾಜ್ಯಸಭಾ ಸದಸ್ಯರಾದ ಮಾಜಿ ಪ್ರಧಾನಿ ದೇವೇಗೌಡರೂ ರಾಜ್ಯಕ್ಕೆ ಆಗುತ್ತಲೇ ಇರುವ ಅನ್ಯಾಯಗಳ ವಿರುದ್ಧ ಬಾಯಿ ಬಿಡುತ್ತಿಲ್ಲ ಏಕೆ ಎಂದು ಪ್ರಶ್ನಿಸಿದರು. ಸಚಿವರಾದ ಕೆ.ಜೆ.ಜಾರ್ಜ್, ಬೈರತಿ ಸುರೇಶ್, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಗೋವಿಂದರಾಜು ಉಪಸ್ಥಿತರಿದ್ದರು.

ಇದನ್ನೂ ಓದಿ : ತುಮಕೂರಿನಲ್ಲಿ ಅಂತಾರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಯಂ ನಿರ್ಮಾಣಕ್ಕೆ ಮುಖ್ಯಮಂತ್ರಿಯವರಿಂದ ಶಂಕುಸ್ಥಾಪನೆ

ಇತ್ತೀಚಿನ ಅಪ್ಡೇಟ್ ಸುದ್ದಿಗಳನ್ನು ವೀಕ್ಷಿಸಲು ನಮ್ಮ Youtube Link - https://www.youtube.com/@ZeeKannadaNews/featured ಸಬ್ ಸ್ಕ್ರೈಬ್ಆಗಿರಿ.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ. 

Trending News