ಬೆಂಗಳೂರು: ಕಾವೇರಿ ನದಿ ನೀರು ನಿರ್ವಹಣಾ ಮಂಡಳಿ ರಚನೆ ವಿಚಾರವಾಗಿ ರಾಜ್ಯ ಸರ್ಕಾರವನ್ನು ವಿಶ್ವಾಸಕ್ಕೆ ತೆಗೆದುಕೊಳ್ಳದೆ ಸದಸ್ಯರನ್ನು ನೇಮಕ ಮಾಡಿದ ಕೇಂದ್ರದ ನಡೆಯ ಬಗ್ಗೆ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಈ ಬಗ್ಗೆ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಕುಮಾರಸ್ವಾಮಿ ಅವರು, ಪ್ರಾಧಿಕಾರ ರಚನೆ ಬಗ್ಗೆ ಲೋಕಸಭೆಯಲ್ಲಿ ಚರ್ಚೆ ನಡೆಸುವಂತೆ ಕೇಳಿಕೊಂಡಿದ್ದೆವು. ಆದರೆ ಕೇಂದ್ರ ಸರ್ಕಾರ ಈಗ ಏಕಪಕ್ಷೀಯ ನಿರ್ಧಾರ ಕೈಗೊಂಡಿದೆ. ಹಾಗಾಗಿ ಪ್ರಾಧಿಕಾರ ರಚನೆ ತೀರ್ಮಾನ ಮರು ಪರಿಶೀಲಿಸುವಂತೆ ಕೇಂದ್ರಕ್ಕೆ ಮತ್ತೊಮ್ಮೆ ಪತ್ರ ಬರೆಯುತ್ತೇವೆ ಎಂದು ಹೇಳಿದರು.
ತಮಿಳುನಾಡಿಗೆ 4 ಟಿಎಂಸಿ ನೀರು ಬಿಡಲು ಕರ್ನಾಟಕಕ್ಕೆ ಸುಪ್ರೀಂ ಆದೇಶ
ಮುಂದುವರೆದು ಮಾತನಾಡಿದ ಅವರು, ಪ್ರಾಧಿಕಾರ ರಚನೆ ಬಗ್ಗೆ ನಮ್ಮ ವಿರೋಧವಿಲ್ಲ. ಆದರೆ ಅದರಲ್ಲಿನ ಕೆಲವು ನಿಯಮಗಳ ಬಗ್ಗೆ ನಮ್ಮ ಆಕ್ಷೇಪವಿದೆ. ಇದೀಗ ಏಕಾಏಕಿ ಮಂಡಳಿ ರಚನೆ ಮಾಡಿರುವುದರಿಂದ ರಾಜ್ಯಕ್ಕೆ ಅನ್ಯಾಯ ಆಗಿದೆ. ಹಾಗಾಗಿ ಕೇಂದ್ರ ನೀರಾವರಿ ಸಚಿವರನ್ನೂ ಸಂಪರ್ಕ ಮಾಡಿದ್ದೇನೆ. 15 ದಿನಗಳ ಒಳಗೆ ಭೇಟಿಗೆ ಅವಕಾಶ ಮಾಡಿಕೊಡ್ತೇವೆ ಎಂದಿದ್ದಾರೆ. ಈ ಬಗ್ಗೆ ಅಡ್ವೋಕೇಟ್ ಜನರಲ್ ಸಲಹೆ ಪಡೆದು ಮುಂದುವರಿಯುತ್ತೇವೆ ಎಂದರು. ಹಾಗಾಗಿ ಅಡ್ವೋಕೇಟ್ ಜನರಲ್ ಸಲಹೆ ಪಡೆದು ಮುಂದುವರೆಯುತ್ತೇವೆ. ಮತ್ತೊಮ್ಮೆ ಕೇಂದ್ರದ ನೀರಾವರಿ ಸಚಿವರನ್ನು ಭೇಟಿ ಮಾಡಿ ಚರ್ಚೆ ನಡೆಸುತ್ತೇನೆ. ನಮ್ಮ ಸಹನೆಯೇ ದೌರ್ಬಲ್ಯ ಅಲ್ಲ ಎಂದು ಕುಮಾರಸ್ವಾಮಿ ಹೇಳಿದರು.
ಕಾವೇರಿ ನೀರು ನಿಯಂತ್ರಣ ಸಮಿತಿಯಲ್ಲಿ ಕನ್ನಡಿಗರಿಗಿಲ್ಲ ಸ್ಥಾನ!
ಕಾವೇರಿ ನೀರು ನಿರ್ವಹಣಾ ಮಂಡಳಿ ರಚನೆಗೆ ಕರ್ನಾಟಕದಾದ್ಯಂತ ತೀವ್ರ ವಿರೋಧ ವ್ಯಕ್ತವಾಗಿದ್ದರೂ, ಅದ್ಯಾವುದನ್ನೂ ಲೆಕ್ಕಿಸದೆ ನೇಮಕಾತಿ ಕುರಿತು ಶುಕ್ರವಾರ ಕೇಂದ್ರ ಜಲಸಂಪನ್ಮೂಲ ಇಲಾಖೆ ಆದೇಶ ಹೊರಡಿಸಿತ್ತು. ಅದರಂತೆ ಕೇಂದ್ರ ಜಲ ಆಯೋಗದ ಮುಖ್ಯ ಇಂಜಿನಿಯರ್ ನವೀನ್ ಕುಮಾರ್ ಅವರನ್ನು ಸಮಿತಿಯ ಅಧ್ಯಕ್ಷರಾಗಿ ನೇಮಕ ಮಾಡಲಾಗಿದ್ದು, ಈ ಸಮಿತಿ 8 ಸದ್ಯರನ್ನೊಳಗೊಂಡಿದೆ. ಆದರೆ ಈ ಸಮಿತಿಯಲ್ಲಿ ಕರ್ನಾಟಕದಿಂದ ಯಾವ ಸದಸ್ಯರೂ ಇಲ್ಲದಿರುವುದರಿಂದ ರಾಜ್ಯಕ್ಕೆ ಅನ್ಯಾಯವಾಗಿದೆ.