3.5 ಲಕ್ಷ ಮೆಟ್ರಿಕ್ ಟನ್ ಹೆಚ್ಚುವರಿ ಅಕ್ಕಿ ಖರೀದಿಗೆ ಕೇಂದ್ರ ಸಮ್ಮತಿ

ಕೇಂದ್ರ ಆಹಾರ ಮತ್ತು ಗ್ರಾಹರಕರ ವ್ಯವಹಾರಗಳು ಹಾಗೂ ಸಾರ್ವಜನಿಕ ವಿತರಣೆ ಮತ್ತು ಹೊಸ ನವೀಕರಿಸಬಹುದಾದ ಇಂಧನ ಸಚಿವಾಲಯ 5 ಲಕ್ಷ ಮೆಟ್ರಿಕ್ ಟನ್ ಅಕ್ಕಿ ಖರೀದಿಗೆ ಸೂಕ್ತ ಕ್ರಮ ವಹಿಸುವಂತೆ ರಾಜ್ಯದ ಆಹಾರ, ನಾಗರೀಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಹಾಗೂ ಕಾನೂನು ಮಾಪನ ಇಲಾಖೆ ಕಾರ್ಯದರ್ಶಿರವರಿಗೆ ನಿರ್ದೇಶನ ನೀಡಿದೆ.

Written by - Krishna N K | Last Updated : Jan 13, 2025, 05:43 PM IST
    • ಕೃಷಿ ಸಚಿವರಾದ ಎನ್. ಚಲುವರಾಯಸ್ವಾಮಿರವರ ಮನವಿಗೆ ಸ್ಪಂದಿಸಿರುವ ಕೇಂದ್ರ ಸರ್ಕಾರ
    • ರಾಜ್ಯದಿಂದ 3.5 ಲಕ್ಷ ಮೆಟ್ರಿಕ್ ಟನ್ ಹೆಚ್ಚುವರಿ ಅಕ್ಕಿ ಖರೀದಿಗೆ ಸಮ್ಮತಿಸಿದೆ
    • ಅಕ್ಕಿ ಖರೀದಿಗೆ ಸಮ್ಮತಿಸಿದ್ದು ಸೂಕ್ತ ಕ್ರಮ ವಹಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದೆ.
3.5 ಲಕ್ಷ ಮೆಟ್ರಿಕ್ ಟನ್ ಹೆಚ್ಚುವರಿ ಅಕ್ಕಿ ಖರೀದಿಗೆ ಕೇಂದ್ರ ಸಮ್ಮತಿ title=

ಬೆಂಗಳೂರ: ಕೃಷಿ ಸಚಿವರಾದ ಎನ್. ಚಲುವರಾಯಸ್ವಾಮಿರವರ ಮನವಿಗೆ ಸ್ಪಂದಿಸಿರುವ ಕೇಂದ್ರ ಸರ್ಕಾರ ಸಾರ್ವಜನಿಕ ಪಡಿತರ ವಿತರಣಾ ವ್ಯವಸ್ಥೆಗೆ ರಾಜ್ಯದಿಂದ 3.5 ಲಕ್ಷ ಮೆಟ್ರಿಕ್ ಟನ್ ಹೆಚ್ಚುವರಿ ಅಕ್ಕಿ ಖರೀದಿಗೆ ಸಮ್ಮತಿಸಿದ್ದು ಸೂಕ್ತ ಕ್ರಮ ವಹಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದೆ.

ಸಾರ್ವಜನಿಕ ಪಡಿತರ ವಿತರಣಾ ವ್ಯವಸ್ಥೆಯಲ್ಲಿ ನೀಡಲಾಗುತ್ತಿರುವ ಪ್ರಮುಖ ಆಹಾರ ಪದಾರ್ಥಗಳಲ್ಲಿ ಅಕ್ಕಿಯೂ ಸೇರಿದೆ. ಕರ್ನಾಟಕ ಅಧಿಕ ಭತ್ತ ಬೆಳೆಯುವ ರಾಜ್ಯಗಳಲ್ಲಿ ಒಂದಾಗಿದ್ದು, ಹೆಚ್ಚಿನ ಪ್ರಮಾಣದಲ್ಲಿ ಅಕ್ಕಿ ಉತ್ಪಾದಿಸುತ್ತಿದೆ. ಹಾಲಿ ರಾಜ್ಯದಲ್ಲಿ 48.91 ಲಕ್ಷ ಮೆಟ್ರಿಕ್ ಟನ್ ಅಕ್ಕಿ ಉತ್ಪಾದನಾ ಸಾಮರ್ಥ್ಯವಿದ್ದು ಆದರೆ ಕೇಂದ್ರದಿಂದ ಬೆಂಬಲ ಬೆಳೆಯೊಂದಿಗೆ ಕೇವಲ 1.5 ಲಕ್ಷ ಮೆಟ್ರಿಕ್ ಟನ್ ಖರೀದಿಗೆ ಮಾತ್ರ ಅವಕಾಶ ನೀಡಲಾಗಿತ್ತು.

ಇದನ್ನೂ ಓದಿ:ಗ್ಯಾರಂಟಿ ಯೋಜನೆಗಳಿಂದ ಸರ್ಕಾರ ನಡೆಸಲು ಸಾಧ್ಯವಾಗ್ತಿಲ್ಲ

ಹಾಗಾಗಿ ಕೇಂದ್ರ ಸರ್ಕಾರ ಕೂಡಲೇ ಮದ್ಯ ಪ್ರವೇಶಿಸಿ 2024-25ನೇ ಸಾಲಿನಲ್ಲಿ ಬೆಂಬಲ ಬೆಲೆಯೊಂದಿಗೆ ಕನಿಷ್ಠ 5 ಲಕ್ಷ ಮೆಟ್ರಿಕ್ ಟನ್ ಅಕ್ಕಿ ಖರೀದಿಗೆ ನಿರ್ದೇಶನ ನೀಡುವಂತೆ ಕೃಷಿ ಸಚಿವರು ಎನ್.ಚಲುವರಾಯಸ್ವಾಮಿರವರು ದಿನಾಂಕ 13-12-2024ರಂದು ಪತ್ರ ಬರೆದು ಮನವಿ ಮಾಡಿದರು.

ಇದಕ್ಕೆ ಸ್ಪಂದನೆ ನೀಡಿರುವ ಕೇಂದ್ರ ಆಹಾರ ಮತ್ತು ಗ್ರಾಹರಕರ ವ್ಯವಹಾರಗಳು ಹಾಗೂ ಸಾರ್ವಜನಿಕ ವಿತರಣೆ ಮತ್ತು ಹೊಸ ನವೀಕರಿಸಬಹುದಾದ ಇಂಧನ ಸಚಿವಾಲಯ 5 ಲಕ್ಷ ಮೆಟ್ರಿಕ್ ಟನ್ ಅಕ್ಕಿ ಖರೀದಿಗೆ ಸೂಕ್ತ ಕ್ರಮ ವಹಿಸುವಂತೆ ರಾಜ್ಯದ ಆಹಾರ, ನಾಗರೀಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಹಾಗೂ ಕಾನೂನು ಮಾಪನ ಇಲಾಖೆ ಕಾರ್ಯದರ್ಶಿರವರಿಗೆ ನಿರ್ದೇಶನ ನೀಡಿದೆ.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News