ಏಪ್ರಿಲ್ 22, 23ರಂದು ನಡೆಸಬೇಕಿದ್ದ CET ಪರೀಕ್ಷೆ ಮುಂದೂಡಿಕೆ

ಕೋವಿಡ್-19 (Covid-19) ಕಾರಣಕ್ಕೆ ದ್ವಿತೀಯ ಪಿಯುಸಿ ಪರೀಕ್ಷೆಗಳು ಇನ್ನೂ ಪೂರ್ಣವಾಗಿಲ್ಲ. ಅಲ್ಲದೆ ಸಹಜ ಸ್ಥಿತಿಯೂ ಇಲ್ಲ.  ಹೀಗಾಗಿ ಸಿಇಟಿ  ಮುಂದೂಡಲಾಗಿದೆ. 

Written by - Yashaswini V | Last Updated : Mar 31, 2020, 05:56 AM IST
ಏಪ್ರಿಲ್ 22, 23ರಂದು ನಡೆಸಬೇಕಿದ್ದ CET ಪರೀಕ್ಷೆ ಮುಂದೂಡಿಕೆ title=

ಬೆಂಗಳೂರು: ವೃತ್ತಿಪರ ಕೋರ್ಸ್ ಗಳ ಪ್ರವೇಶಕ್ಕೆ ಏಪ್ರಿಲ್ 22, 23ರಂದು ನಡೆಸಬೇಕಿದ್ದ ಸಾಮಾನ್ಯ ಪ್ರವೇಶ ಪರೀಕ್ಷೆಯನ್ನು (CET) ಅನಿರ್ದಿಷ್ಟಾವಧಿಗೆ ಮುಂದೂಡಲಾಗಿದೆ ಎಂದು ಉನ್ನತ ಶಿಕ್ಷಣ ಸಚಿವರೂ ಆದ ಉಪ ಮುಖ್ಯಮಂತ್ರಿ ಡಾ.ಸಿ.ಎನ್ ಅಶ್ವತ್ಥನಾರಾಯಣ (CN AshwathNarayana) ಸೋಮವಾರ ತಿಳಿಸಿದರು.

ದ್ವಿತೀಯ ಪಿಯುಸಿ ಪರೀಕ್ಷೆ ಕುರಿತಂತೆ ಶಿಕ್ಷಣ ಸಚಿವರು ಹೇಳಿದ್ದೇನು?

ಕೋವಿಡ್-19 (Covid-19) ಕಾರಣಕ್ಕೆ ದ್ವಿತೀಯ ಪಿಯುಸಿ ಪರೀಕ್ಷೆಗಳು ಇನ್ನೂ ಪೂರ್ಣವಾಗಿಲ್ಲ. ಅಲ್ಲದೆ ಸಹಜ ಸ್ಥಿತಿಯೂ ಇಲ್ಲ.  ಹೀಗಾಗಿ ಸಿಇಟಿ  ಮುಂದೂಡಲಾಗಿದೆ. ಏಪ್ರಿಲ್ ಮೂರನೇ ವಾರದಲ್ಲಿ ಸಿಇಟಿ ಪರೀಕ್ಷೆಯ ದಿನಾಂಕವನ್ನು ತಿಳಿಸಲಾಗುವುದು ಎಂದು ಅವರು ತಿಳಿಸಿದ್ದಾರೆ.

ಕೊರೊನಾಗೆ ಕರ್ನಾಟಕ ತತ್ತರ: SSLC-PUC ಪರೀಕ್ಷೆ ಮುಂದೂಡಿಕೆ

ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಅಧಿಕಾರಿಗಳ ಜತೆ ಮಾತುಕತೆ ನಡೆಸಿದ ನಂತರ‌ ಅವರು ಈ ತೀರ್ಮಾನವನ್ನು ಪ್ರಕಟಿಸಿದರು.

Trending News