ನೂತನ ಕೊಪ್ಪಳ ವಿಶ್ವವಿದ್ಯಾಲಯಕ್ಕೆ ಮುಖ್ಯಮಂತ್ರಿ ಬೊಮ್ಮಾಯಿ ಚಾಲನೆ

ಪೂರ್ವ ನಿಗದಿಯಂತೆ ಮುಖ್ಯಮಂತ್ರಿಗಳು ಬೆಳಗ್ಗೆ ಆನ್‌ಲೈನ್ ಮೋಡ್ ಮೂಲಕ ಕೊಪ್ಪಳ ಸೇರಿದಂತೆ ರಾಜ್ಯದ ನೂತನ 7 ವಿಶ್ವವಿದ್ಯಾಲಯಗಳನ್ನು ಲೋಕಾರ್ಪಣೆಗೊಳಿಸುತ್ತಿದ್ದಂತೆ ಕೊಪ್ಪಳ ಸ್ನಾತಕೋತ್ತರ ಸಭಾಂಗಣದಲ್ಲಿ ಹಬ್ಬದ ಸಂಭ್ರಮ ಕಂಡುಬಂದಿತು.

Written by - Manjunath N | Last Updated : Mar 28, 2023, 10:35 PM IST
  • ರಾಜ್ಯ ಸರ್ಕಾರವು ಶಿಕ್ಷಣ ಮತ್ತು ಆರೋಗ್ಯಕ್ಕೆ ವಿಶೇಷ ಒತ್ತು ನೀಡಿದೆ ಎಂದರು.
  • ರಾಜ್ಯದಲ್ಲಿ ಹೊಸದಾಗಿ ಏಳು ವಿವಿಗಳು ಆರಂಭವಾಗುತ್ತಿರುವುದು ಸಂತಷ ತಂದಿದೆ.
  • ಈ ರೀತಿಯ ವಿಶ್ವ ವಿದ್ಯಾಲಯಗಳು ದೇಶದಲ್ಲಿಯೇ ಪ್ರಥಮವಾಗಿ ಪ್ರಾರಂಭವಾಗಿವೆ ಎಂದರು.
 ನೂತನ ಕೊಪ್ಪಳ ವಿಶ್ವವಿದ್ಯಾಲಯಕ್ಕೆ ಮುಖ್ಯಮಂತ್ರಿ ಬೊಮ್ಮಾಯಿ ಚಾಲನೆ title=

ಕೊಪ್ಪಳ: ನೂತನವಾಗಿ ಸ್ಥಾಪಿತವಾಗಿರುವ ಕೊಪ್ಪಳ ವಿಶ್ವವಿದ್ಯಾಲಯವನ್ನು ರಾಜ್ಯದ ಮುಖ್ಯಮಂತ್ರಿಗಳಾದ ಮಾನ್ಯ ಬಸವರಾಜ ಬೊಮ್ಮಾಯಿ ಅವರು ಮಾರ್ಚ 28ರಂದು ಲೋಕಾರ್ಪಣೆಗೊಳಿಸಿದರು.

ಇದಕ್ಕಾಗಿ ತಳಕಲ್ ಸರ್ಕಾರಿ ಎಂಜಿನಿಯರಿಂಗ್ ಕಾಲೇಜಿನಲ್ಲಿರುವ ಕೊಪ್ಪಳ ಸ್ನಾತಕೋತ್ತರ ಕೇಂದ್ರವನ್ನು ಶೃಂಗಾರಗೊಳಿಸಲಾಗಿತ್ತು.

ಪೂರ್ವ ನಿಗದಿಯಂತೆ ಮುಖ್ಯಮಂತ್ರಿಗಳು ಬೆಳಗ್ಗೆ ಆನ್‌ಲೈನ್ ಮೋಡ್ ಮೂಲಕ ಕೊಪ್ಪಳ ಸೇರಿದಂತೆ ರಾಜ್ಯದ ನೂತನ 7 ವಿಶ್ವವಿದ್ಯಾಲಯಗಳನ್ನು ಲೋಕಾರ್ಪಣೆಗೊಳಿಸುತ್ತಿದ್ದಂತೆ ಕೊಪ್ಪಳ ಸ್ನಾತಕೋತ್ತರ ಸಭಾಂಗಣದಲ್ಲಿ ಹಬ್ಬದ ಸಂಭ್ರಮ ಕಂಡುಬಂದಿತು.

ಇದನ್ನೂ ಓದಿ: Bollywood Actress: ಮದುವೆ ಬಳಿಕ ಕುಟುಂಬಕ್ಕಾಗಿ ಸಿನಿರಂಗವನ್ನೇ ತ್ಯಜಿಸಿದ ನಟಿಯರು; ಈಗ ವಿದೇಶದಲ್ಲಿ ಸೆಟಲ್!

ಈ ಕಾರ್ಯಕ್ರಮಕ್ಕೆ ಉನ್ನತ ಶಿಕ್ಷಣ ಸಚಿವರಾದ ಅಶ್ವತ್ಥ ನಾರಾಯಣ, ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವರಾದ ಮುರಗೇಶ್ ಆರ್ ನಿರಾಣಿ, ಮುಖ್ಯಮಂತ್ರಿಗಳ ಪ್ರಧಾನ ಕಾರ್ಯದರ್ಶಿ ಮಂಜುನಾಥ್ ಪ್ರಸಾದ್, ಶಿಕ್ಷಣ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ಎಸ್.ಆರ್.ಉಮಾಶಂಕರ್ ಹಾಗೂ ಉನ್ನತ ಶಿಕ್ಷಣ ಅಧಿಕಾರಿಗಳು, ವಿವಿಧ ವಿಶ್ವ ವಿದ್ಯಾಲಯಗಳ ಕುಲಪತಿಗಳು ಸಾಕ್ಷಿಯಾದರು.

ಈ ಸಂದರ್ಭದಲ್ಲಿ ಮುಖ್ಯಮಂತ್ರಿಗಳು ಮಾತನಾಡಿ, ರಾಜ್ಯ ಸರ್ಕಾರವು ಶಿಕ್ಷಣ ಮತ್ತು ಆರೋಗ್ಯಕ್ಕೆ ವಿಶೇಷ ಒತ್ತು ನೀಡಿದೆ ಎಂದರು. ರಾಜ್ಯದಲ್ಲಿ ಹೊಸದಾಗಿ ಏಳು ವಿವಿಗಳು ಆರಂಭವಾಗುತ್ತಿರುವುದು ಸಂತಷ ತಂದಿದೆ. ಈ ರೀತಿಯ ವಿಶ್ವ ವಿದ್ಯಾಲಯಗಳು ದೇಶದಲ್ಲಿಯೇ ಪ್ರಥಮವಾಗಿ ಪ್ರಾರಂಭವಾಗಿವೆ ಎಂದರು.

ಇದನ್ನೂ ಓದಿ : ಈ ಅರಮನೆಯಲ್ಲಿದ್ದ ರಾಣಿಯರಿಗೆಂದೇ ಕಾಯುತ್ತಿದ್ದರು ಬ್ರಿಟಿಷರು; ಇವರನ್ನು ಆ ರೀತಿ ತೃಪ್ತಿಪಡಿಸಲು 20 ನಿಮಿಷ ಬೇಕಿತ್ತಂತೆ…!

ಕಾರ್ಯಕ್ರಮದಲ್ಲಿ ಕೊಪ್ಪಳ ಜಿಲ್ಲಾಧಿಕಾರಿಗಳಾದ ಎಂ.ಸುಂದರೇಶ್ ಬಾಬು, ಕೊಪ್ಪಳ ವಿಶ್ವವಿದ್ಯಾಲಯದ ಕುಲಪತಿಗಳಾದ ಪ್ರೊ.ಬಿ.ಕೆ.ರವಿ, ಮಾಜಿ ವಿಧಾನ ಪರಿಷತ್ ಸದಸ್ಯರಾದ ಕರಿಯಣ್ಣ ಸಂಗಟಿ, ಕೊಪ್ಪಳ ಸ್ನಾತಕೋತ್ತರ ಕೇಂದ್ರದ ನಿರ್ದೇಶಕರಾದ ಡಾ.ಮನೋಜ್ ಡೊಳ್ಳಿ, ಯಲಬುರ್ಗಾ ಸ್ನಾತಕೋತ್ತರ ಕೇಂದ್ರದ ನಿರ್ದೇಶಕ ಡಾ. ಪ್ರಕಾಶ್ ಯಳವಟ್ಟಿ ಸೇರಿದಂತೆ ಹಲವು ಗಣ್ಯರು ಭಾಗವಹಿಸಿದ್ದರು.

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

 

Trending News