Basavaraj Bommai : '2023ರ ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿಗೆ ಸಿಗಲಿದೆ ಬಹುಮತ'

ಉತ್ತರಪ್ರದೇಶದ ಚುನಾವಣೆಯ ನಂತರ ಯೋಗಿ ಆದಿತ್ಯನಾಥ 2ನೇ ಬಾರಿ ಮುಖ್ಯಮಂತ್ರಿಯಾಗಿ ಪದಗ್ರಹಣ ಸಮಾರಂಭದಲ್ಲಿ ಪಾಲ್ಗೊಂಡಿದ್ದೇನೆ. ಚುನಾವಣೆಯ ನಂತರ  ನಾಲ್ಕು ರಾಜ್ಯಗಳಲ್ಲಿ ಭಾರತೀಯ ಜನತಾ ಪಕ್ಷದ ಗೆಲುವು ಇಡೀ ದೇಶದಲ್ಲಿ ಹೊಸ ರಾಜಕೀಯ ಸಂಚಲನ ಪ್ರಾರಂಭವಾಗಿದೆ.

Written by - Prashobh Devanahalli | Last Updated : Mar 26, 2022, 06:46 PM IST
  • 2023ರ ಕರ್ನಾಟಕ ವಿಧಾನಸಭಾ ಚುನವಣೆ
  • ಸಂಪೂರ್ಣ ವಿಶ್ವಾಸವಿದೆ ಎಂದ ಸಿಎಂ ಬೊಮ್ಮಾಯಿ
  • ಶಿಗ್ಗಾಂವಿ ಕ್ಷೇತ್ರದಿಂದಲೇ ಸ್ಪರ್ಧೆ
Basavaraj Bommai : '2023ರ ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿಗೆ ಸಿಗಲಿದೆ ಬಹುಮತ' title=

ಹಾವೇರಿ : 2023ರ ಕರ್ನಾಟಕ ವಿಧಾನಸಭಾ ಚುನವಣೆಯಲ್ಲಿ ಭಾರತೀಯ ಜನತಾ ಪಕ್ಷ ಸ್ವಂತ ಶಕ್ತಿಯಿಂದ ಸಂಪೂರ್ಣ ಬಹುಮತದಿಂದ ಜನರ ಆರ್ಶೀವಾದದೊಂದಿಗೆ ಆಡಳಿತ ಚುಕ್ಕಾಣಿಯನ್ನು ಹಿಡಿಯಲು ಯಶಸ್ವಿಯಾಗುತ್ತೇವೆಂಬ ಸಂಪೂರ್ಣ ವಿಶ್ವಾಸವಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

ಇಂದು ಜಿಲ್ಲೆಯ ಸವಣೂರಿನ ಹೆಸ್ಕಾಂ ಕಚೇರಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಸಿಎಂ ಬೊಮ್ಮಾಯಿ(Basavaraj Bommai), ಉತ್ತರಪ್ರದೇಶದ ಚುನಾವಣೆಯ ನಂತರ ಯೋಗಿ ಆದಿತ್ಯನಾಥ 2ನೇ ಬಾರಿ ಮುಖ್ಯಮಂತ್ರಿಯಾಗಿ ಪದಗ್ರಹಣ ಸಮಾರಂಭದಲ್ಲಿ ಪಾಲ್ಗೊಂಡಿದ್ದೇನೆ. ಚುನಾವಣೆಯ ನಂತರ  ನಾಲ್ಕು ರಾಜ್ಯಗಳಲ್ಲಿ ಭಾರತೀಯ ಜನತಾ ಪಕ್ಷದ ಗೆಲುವು ಇಡೀ ದೇಶದಲ್ಲಿ ಹೊಸ ರಾಜಕೀಯ ಸಂಚಲನ ಪ್ರಾರಂಭವಾಗಿದೆ. ಉತ್ತರಖಂಡ್, ಮಣಿಪುರ, ಗೋವಾ ಮತ್ತು ಉತ್ತರ ಪ್ರದೇಶ ಗೆಲುವು 2024ರ ಲೋಕಸಭಾ ಚುನಾವಣೆಯ ದಿಕ್ಸೂಚಿಯನ್ನು ಸ್ಪಷ್ಟವಾಗಿದೆ. ಕರ್ನಾಟಕದಲ್ಲಿಯೂ ದೊಡ್ಡ ಪ್ರಮಾಣ ಬೆಂಬಲ ವ್ಯಕ್ತವಾಗುತ್ತಿದೆ. 2023 ರ ರಾಜ್ಯ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಸಂಪೂರ್ಣ ಬಹುಮತದೊಂದಿಗೆ ಅಧಿಕಾರಕ್ಕೆ ಬರಲಿದೆ ಎಂದು ತಿಳಿಸಿದರು.

ಇದನ್ನೂ ಓದಿ : Basavaraj Bommai : ಏಪ್ರಿಲ್ 05 ರಂದು ರಾಜ್ಯಕ್ಕೆ ಪಿಎಂ ಮೋದಿ ಭೇಟಿ : ಸಿಎಂ ಬೊಮ್ಮಾಯಿ

ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

Trending News