ರಾಷ್ಟ್ರೀಯ ಪಲ್ಸ್ ಪೋಲಿಯೋ ಕಾರ್ಯಕ್ರಮಕ್ಕೆ ಸಿಎಂ ಕುಮಾರಸ್ವಾಮಿ ಚಾಲನೆ

ಭಾನುವಾರ ಬೆಳಗ್ಗೆ 8 ಗಂಟೆಯಿಂದಲೇ ಪೋಲಿಯೋ ಡ್ರಾಪ್ಸ್ ಹಾಕುವ ಕಾರ್ಯಕ್ಕೆ ಚಾಲನೆ ಸಿಕ್ಕಿದ್ದು ಸಂಜೆ 5 ಗಂಟೆಯ ತನಕ ಕಾರ್ಯಕ್ರಮ ನಡೆಯಲಿದೆ. 

Last Updated : Mar 10, 2019, 02:11 PM IST
ರಾಷ್ಟ್ರೀಯ ಪಲ್ಸ್ ಪೋಲಿಯೋ ಕಾರ್ಯಕ್ರಮಕ್ಕೆ ಸಿಎಂ ಕುಮಾರಸ್ವಾಮಿ ಚಾಲನೆ title=

ಬೆಂಗಳೂರು: ರಾಷ್ಟ್ರೀಯ ಪಲ್ಸ್ ಪೋಲಿಯೋ ಕಾರ್ಯಕ್ರಮ 2019ಕ್ಕೆ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಭಾನುವಾರ ಚಲನೆ ನೀಡಿದರು.

ರಾಷ್ಟ್ರೀಯ ಪೋಲಿಯೋ ಲಸಿಕಾ ದಿನಾಚರಣೆ ಅಂಗವಾಗಿ ನಗರದ ಗೃಹ ಕಚೇರಿ ಕೃಷ್ಣಾದಲ್ಲಿ ಮಕ್ಕಳಿಗೆ ಪಲ್ಸ್ ಪೋಲಿಯೋ ಹಾಕುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಸಿಎಂ, 5 ವರ್ಷದೊಳಗಿನ ಮಕ್ಕಳಿಗೆ ಪೋಷಕರು ತಪ್ಪದೇ ಪೋಲಿಯೋ ಲಸಿಕೆ ಹಾಕಿಸುವಂತೆ ಮನವಿ ಮಾಡಿದರು.

ಭಾನುವಾರ ಬೆಳಗ್ಗೆ 8 ಗಂಟೆಯಿಂದಲೇ ಪೋಲಿಯೋ ಡ್ರಾಪ್ಸ್ ಹಾಕುವ ಕಾರ್ಯಕ್ಕೆ ಚಾಲನೆ ಸಿಕ್ಕಿದ್ದು ಸಂಜೆ 5 ಗಂಟೆಯ ತನಕ ಕಾರ್ಯಕ್ರಮ ನಡೆಯಲಿದೆ. ಇದಕ್ಕಾಗಿ 32,571 ಬೂತ್‌ಗಳನ್ನು ತೆರೆಯಲಾಗಿದೆ. 51,918 ತಂಡಗಳನ್ನು ರಚನೆ ಮಾಡಲಾಗಿದೆ. 2481 ಸಂಚಾರಿ ತಂಡಗಳನ್ನು ಸಹ ರಚನೆ ಮಾಡಲಾಗಿದೆ.

ಅಲ್ಲದೆ, ಜನರಿಗೆ ಪಾಲ್ಸ್ ಪೋಲಿಯೋ ಲಸಿಕಾ ಕೇಂದ್ರ ಹುಡುಕಲು ಸಹಾಯವಾಗುವಂತೆ ಮೊಬೈಲ್ ಅಪ್ಲಿಕೇಶನ್ ಸಹ ಅಭಿವೃದ್ಧಿ ಮಾಡಿರುವ ಆರೋಗ್ಯ ಇಲಾಖೆ, ಗೂಗಲ್ ಪ್ಲೇ ಸ್ಟೋರ್'ನಿಂದ ಡೌನ್ಲೋಡ್ ಮಾಡಿಕೊಳ್ಳಲು ತಿಳಿಸಿದೆ. 

Trending News