ಬೆಂಗಳೂರು: ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಜೂನ್ 21ರಿಂದ ತಮ್ಮ ಗ್ರಾಮ ವಾಸ್ತವ್ಯ ಹೂಡಲಿದ್ದಾರೆ.
ಗ್ರಾಮ ವಾಸ್ತವ್ಯದ ಕುರಿತು ಸೋಮವಾರ ತಮ್ಮ ಗೃಹ ಕಚೇರಿ ಕೃಷ್ಣಾದಲ್ಲಿ ಅಧಿಕಾರಿಗಳ ಸಭೆ ನಡೆಸಿ ಚರ್ಚಿಸಿದ ಮುಖ್ಯಮಂತ್ರಿ ಕುಮಾರಸ್ವಾಮಿ ಅವರು, ಗ್ರಾಮ ವಾಸ್ತವ್ಯದ ಸ್ವರೂಪ ಹೇಗಿರಬೇಕು ಎಂಬುದರ ಬಗ್ಗೆ ಸಭೆಯಲ್ಲಿ ಚರ್ಚಿಸಿದರು.
ಅದರಂತೆ ಜೂನ್21ರಂದು ಯಾದಗಿರಿ ಜಿಲ್ಲೆಯ ಗುರುಮಿಟ್ಕಲ್ ತಾಲ್ಲೂಕಿನಲ್ಲಿ ಹಾಗೂ ಜೂನ್22ರಂದು ಕಲಬುರಗಿ ಜಿಲ್ಲೆಯ ಅಫಜಲಪುರ ತಾಲ್ಲೂಕಿನಲ್ಲಿ ನಡೆಸಲಿದ್ದಾರೆ. ಅಂತೆಯೇ ಜುಲೈ 5 ಹಾಗೂ ಜುಲೈ 6ರಂದು ಬೀದರ್ ಜಿಲ್ಲೆಯ ಬಸವಕಲ್ಯಾಣ ಹಾಗೂ ರಾಯಚೂರು ಜಿಲ್ಲೆ ಸಿಂಧನೂರು ತಾಲ್ಲೂಕುಗಳಲ್ಲಿ ಸಿಎಂ ಗ್ರಾಮವಾಸ್ತವ್ಯ ಹೂಡಲಿದ್ದಾರೆ.
ಸಿಎಂ ಕುಮಾರಸ್ವಾಮಿ ತಮ್ಮ ಗ್ರಾಮ ವಾಸ್ತವ್ಯವನ್ನು ಜೂನ್21ರಂದು ಯಾದಗಿರಿ ಜಿಲ್ಲೆಯ ಗುರುಮಿಟ್ಕಲ್ ತಾಲ್ಲೂಕಿನಲ್ಲಿ ಹಾಗೂ ಜೂನ್22ರಂದು ಕಲಬುರಗಿ ಜಿಲ್ಲೆಯ ಅಫಜಲಪುರ ತಾಲ್ಲೂಕಿನಲ್ಲಿ ನಡೆಸಲಿದ್ದಾರೆ.
ಅಂತೆಯೇ ಜುಲೈ5 ಹಾಗೂ 6ರಂದು ಬೀದರ್ ಜಿಲ್ಲೆ ಬಸವಕಲ್ಯಾಣ ಹಾಗೂ ರಾಯಚೂರು ಜಿಲ್ಲೆ ಸಿಂಧನೂರು ತಾಲ್ಲೂಕುಗಳಲ್ಲಿ ಗ್ರಾಮವಾಸ್ತವ್ಯ ನಡೆಸಲಿದ್ದಾರೆ— CM of Karnataka (@CMofKarnataka) June 3, 2019
ಇದೇ ಸಂದರ್ಭದಲ್ಲಿ ಸಿಎಂ ಕುಮಾರಸ್ವಾಮಿ ಅವರನ್ನು ಭೇಟಿಯಾದ ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ ಅವರು ಗ್ರಾಮ ವಾಸ್ತವ್ಯವನ್ನು ಮರಳಿ ಪ್ರಾರಂಭಿಸುತ್ತಿರುವ ಕುರಿತು ಮೆಚ್ಚುಗೆ ವ್ಯಕ್ತಪಡಿಸಿದರು.