ಬೆಳಗಾವಿ ಲೋಕಸಭಾ ಕ್ಷೇತ್ರದಲ್ಲಿ ನಾನೇ ಅಭ್ಯರ್ಥಿ. ಇಲ್ಲಿ ಭರ್ಜರಿ ಬಹುಮತದಿಂದ ಕಾಂಗ್ರೆಸ್ ಗೆಲ್ಲಿಸಿ: ಸಿಎಂ ಸಿದ್ದರಾಮಯ್ಯ ಕರೆ

ಬೆಳಗಾವಿ: ಬೆಳಗಾವಿ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾದ ಮೃಣಾಳ್ ಹೆಬ್ಬಾಳ್ಕರ್ ಗೆಲುವಿನ ಸಂದೇಶ ನೀಡಲು ಸಂಘಟಿಸಿದ್ದ ಪ್ರಜಾಧ್ವನಿ-2 ಜನ ಸಮಾವೇಶವನ್ನು ಉದ್ಘಾಟಿಸಿ ಮಾತನಾಡಿದರು.

Written by - Prashobh Devanahalli | Last Updated : Apr 28, 2024, 06:37 PM IST
    • ಬೆಳಗಾವಿ ಲೋಕಸಭಾ ಕ್ಷೇತ್ರದಲ್ಲಿ ನಾನೇ ಅಭ್ಯರ್ಥಿ
    • ಮೃಣಾಳ್ ಹೆಬ್ಬಾಳ್ಕರ್ ಗೆಲುವಿನ ಸಂದೇಶ ನೀಡಲು ಸಂಘಟಿಸಿದ್ದ ಪ್ರಜಾಧ್ವನಿ-2 ಜನ ಸಮಾವೇಶ
    • ಸೋಲಿಸಿ ವಾಪಾಸ್ ಕಳುಹಿಸಿ ಎಂದ ಮುಖ್ಯಮಂತ್ರಿ ಸಿದ್ದರಾಮಯ್ಯ
ಬೆಳಗಾವಿ ಲೋಕಸಭಾ ಕ್ಷೇತ್ರದಲ್ಲಿ ನಾನೇ ಅಭ್ಯರ್ಥಿ. ಇಲ್ಲಿ ಭರ್ಜರಿ ಬಹುಮತದಿಂದ ಕಾಂಗ್ರೆಸ್ ಗೆಲ್ಲಿಸಿ: ಸಿಎಂ ಸಿದ್ದರಾಮಯ್ಯ ಕರೆ  title=
File Photo

ಬೆಳಗಾವಿ: ಬೆಳಗಾವಿ ಲೋಕಸಭಾ ಕ್ಷೇತ್ರದಲ್ಲಿ ನಾನೇ ಅಭ್ಯರ್ಥಿ. ಇಲ್ಲಿ ಭರ್ಜರಿ ಬಹುಮತದಿಂದ ಕಾಂಗ್ರೆಸ್ ಗೆಲ್ಲಿಸಿ. ಹುಬ್ಬಳ್ಳಿಯಲ್ಲಿ ಸೋತಿದ್ದ ಜಗದೀಶ್ ಶೆಟ್ಟರ್ ಅವರನ್ನು ಬೆಳಗಾವಿಯಲ್ಲೂ ಸೋಲಿಸಿ ವಾಪಾಸ್ ಕಳುಹಿಸಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ನೀಡಿದರು.

ಬೆಳಗಾವಿ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾದ ಮೃಣಾಳ್ ಹೆಬ್ಬಾಳ್ಕರ್ ಗೆಲುವಿನ ಸಂದೇಶ ನೀಡಲು ಸಂಘಟಿಸಿದ್ದ ಪ್ರಜಾಧ್ವನಿ-2 ಜನ ಸಮಾವೇಶವನ್ನು ಉದ್ಘಾಟಿಸಿ ಮಾತನಾಡಿದರು.

ಇದನ್ನೂ ಓದಿ: ಮುಂಜಾನೆ ಎದ್ದಂತೆ ಮೊಸರಿಗೆ ಈ ಕಪ್ಪು ಬೀಜ ಬೆರೆಸಿ ತಿನ್ನಿ: ದಿನಪೂರ್ತಿ ನಾರ್ಮಲ್ ಇರುತ್ತೆ ಬ್ಲಡ್ ಶುಗರ್! ಯಾವ ಔಷಧಿಯೂ ಬೇಕಿಲ್ಲ

ಬೆಳಗಾವಿ ಲೋಕಸಭಾ ಕ್ಷೇತ್ರದಲ್ಲಿ ಸಿದ್ದರಾಮಯ್ಯರೇ ಚುನಾವಣೆಗೆ ನಿಂತಿದ್ದಾರೆ ಅಂದುಕೊಂಡು ಮತ ಹಾಕಿ ಎಂದು ಕರೆ ನೀಡಿದರು. ಲಕ್ಷ್ಮಿ ಹೆಬ್ಬಾಳ್ಕರ್ ಅವರು ಕ್ಷೇತ್ರದ ಅಭಿವೃದ್ಧಿಗೆ ನಿರಂತರವಾಗಿ ಶ್ರಮಿಸುತ್ತಿದ್ದಾರೆ. ಇವರ ಪುತ್ರನನ್ನು ಲೋಕಸಭೆಯಲ್ಲಿ ಗೆಲ್ಲಿಸಿದರೆ ಜಿಲ್ಲೆಯ ಅಭಿವೃದ್ಧಿ ಹೆಚ್ಚಾಗತ್ತೆ ಎಂದರು.

ಮೋದಿ ಬೆಳಗಾವಿಗೆ ಬಂದು ಭಯಾನಕ ಹಸಿ ಸುಳ್ಳು ಹೇಳಿ ಹೋಗಿದ್ದಾರೆ. ಪ್ರತೀ ಬಾರಿ ರಾಜ್ಯಕ್ಕೆ ಬರೋದು, ಸುಳ್ಳು ಹೇಳಿ ಹೋಗೋದೇ ಆಯ್ತು. ನಾವು ಶಿವಾಜಿ ಮತ್ತು ಕಿತ್ತೂರು ರಾಣಿ ಚನ್ನಮ್ಮ ಅವರಿಗೆ ಅವಮಾನಿಸಿದ್ದೀವಿ ಎಂದು ಹಸಿ ಹಸಿ ಸುಳ್ಳು ಹೇಳಿ ಹೋಗಿದ್ದಾರೆ. ರಾಣಿ ಚನ್ನಮ್ಮ ಜಯಂತಿ ಆರಂಭಿಸಿದ್ದು ನಮ್ಮ ಸರ್ಕಾರ. ಶಿವಾಜಿ ಮಹಾರಾಜರನ್ನು ಅತ್ಯಂತ ಗೌರವದಿಂದ ಕಾಣುವವರು ನಾವು. ಸಂಗೊಳ್ಳಿ ರಾಯಣ್ಣ ಅಭಿವೃದ್ಧಿ ಪ್ರಾಧಿಕಾರ ಮಾಡಿದವರು ನಾವು. ಹೀಗಾಗಿ ಈ ಹಸಿ ಸುಳ್ಳುಗಾರ ಮೋದಿ ಮಾತನ್ನು ನಂಬಬೇಡಿ. ನಂಬಿ ಮೋಸ ಹೋಗಬೇಡಿ. ಹತ್ತತ್ತು ವರ್ಷ ಮೋದಿ ಬರೀ ಸುಳ್ಳು ಹೇಳಿಕೊಂಡು ತಿರುಗಿದ್ದು ಬಿಟ್ಟರೆ ಒಂದೇ ಒಂದು ಭರವಸೆಯನ್ನೂ ಈಡೇರಿಸಲಿಲ್ಲ ಎಂದರು.

ಇದನ್ನೂ ಓದಿ: ಈ ಒಣಹಣ್ಣಷ್ಟೇ ಸಾಕು: ಬೆಳಗೆದ್ದು ಹಳಸಿದ ಬಾಯಲ್ಲಿ ತಿಂದರೆ ಸೊಂಟದ ಸುತ್ತ ಸಂಗ್ರಹವಾದ ಕೆಟ್ಟ ಬೊಜ್ಜು ಸುಲಭವಾಗಿ ಕರಗುತ್ತೆ! ಯಾವ ಶ್ರಮವೂ ಬೇಕಿಲ್ಲ

ಬಿಜೆಪಿಯವರು ನಮ್ಮ ಗ್ಯಾರಂಟಿ ಯೋಜನೆಗಳ ಫಲಾನುಭವಿಗಳನ್ನು ಅವಮಾನಿಸಿದರು. ಈಗ ಚುನಾವಣೆ ಬಳಿಕ ಗ್ಯಾರಂಟಿಗಳು ನಿಂತೋಗತ್ತವೆ ಎಂದು ಸುಳ್ಳು ಹೇಳುತ್ತಿದ್ದಾರೆ. ಯಾವುದೇ ಕಾರಣಕ್ಕೂ ಐದು ವರ್ಷ ಗ್ಯಾರಂಟಿಗಳು ನಿಲ್ಲುವುದಿಲ್ಲ. ಮುಂದಿನ ವರ್ಷಕ್ಕೆ ಬೇಕಾಗುವ ಹಣವನ್ನು ನಾವು ಆಗಲೇ ತೆಗೆದಿಟ್ಟಿದ್ದೀವಿ ಎಂದರು.

 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://tinyurl.com/7jmvv2nz

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್.

Trending News