ಸಿಎಂ ಜನಸ್ಪಂದನ ಕಾರ್ಯಕ್ರಮ.. ಒಟ್ಟು 12372 ಅರ್ಜಿಗಳ ಸ್ವೀಕಾರ

Siddaramaiah Janaspandana Program: ಕಂದಾಯ ಇಲಾಖೆಗೆ ಅತಿ ಹೆಚ್ಚು ಅಂದರೆ  3150 ಅರ್ಜಿಗಳು ಸ್ವೀಕಾರವಾಗಿದ್ದರೆ, ಮುಖ್ಯ ಕಾರ್ಯದರ್ಶಿಗಳ ಕಚೇರಿಗೆ ಒಂದು ಅರ್ಜಿ ಸ್ವೀಕಾರವಾಗಿದೆ. 

Written by - Prashobh Devanahalli | Last Updated : Feb 8, 2024, 07:48 PM IST
  • ಮುಖ್ಯಮಂತ್ರಿ ಸಿದ್ದರಾಮಯ್ಯ ಜನಸ್ಪಂದನ
  • ವಿಧಾನಸೌಧದಲ್ಲಿ ನಡೆದ ಜನಸ್ಪಂದನ ಕಾರ್ಯಕ್ರಮ
  • ಒಟ್ಟು 12372 ಅರ್ಜಿಗಳ ಸ್ವೀಕಾರ
ಸಿಎಂ ಜನಸ್ಪಂದನ ಕಾರ್ಯಕ್ರಮ.. ಒಟ್ಟು 12372 ಅರ್ಜಿಗಳ ಸ್ವೀಕಾರ title=

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ವಿಧಾನಸೌಧದಲ್ಲಿ ನಡೆಸಿದ  ಜನಸ್ಪಂದನ ಕಾರ್ಯಕ್ರಮದಲ್ಲಿ ಒಟ್ಟು 12372 ಅರ್ಜಿಗಳನ್ನು ಸ್ವೀಕರಿಸಲಾಗಿದೆ. ಸ್ಥಳದಲ್ಲಿಯೇ 246 ಅರ್ಜಿಗಳು ಇತ್ಯರ್ಥವಾಗಿದ್ದು, 12126  ಅರ್ಜಿಗಳು ವಿಲೇವಾರಿಗೆ ಬಾಕಿ ಇವೆ. 

ಕಂದಾಯ ಇಲಾಖೆಗೆ ಅತಿ ಹೆಚ್ಚು ಅಂದರೆ  3150 ಅರ್ಜಿಗಳು ಸ್ವೀಕಾರವಾಗಿದ್ದರೆ, ಮುಖ್ಯ ಕಾರ್ಯದರ್ಶಿಗಳ ಕಚೇರಿಗೆ ಒಂದು ಅರ್ಜಿ ಸ್ವೀಕಾರವಾಗಿದೆ. ವಸತಿ ಇಲಾಖೆಗೆ 1500 ಅರ್ಜಿಗಳು ಸ್ವೀಕಾರವಾಗಿ ಎರಡನೇ ಸ್ಥಾನದಲ್ಲಿದೆ. ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಗೆ 903 ಅರ್ಜಿಗಳು ಸಲ್ಲಿಕೆಯಾಗಿವೆ. 

ಇದನ್ನೂ ಓದಿ: ಮಹಿಳೆಯರಿಗೆ ಶೇ.50ರಷ್ಟು ಮೀಸಲು ಪ್ರಸ್ತಾವನೆ- ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್  

ಸಂಸದೀಯ ವ್ಯವಹಾರಗಳು ಹಾಗೂ ಶಾಸನ ರಚನೆ ಇಲಾಖೆ, ಮುಖ್ಯ ಕಾರ್ಯದರ್ಶಿಗಳ ಕಾರ್ಯಾಲಯ,ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ( ಇ-  ಆಡಳಿತ)  ಮುಖ್ಯಮಂತ್ರಿಗಳ ಕಾರ್ಯಾಲಯ, ಸಂಸದೀಯ ವ್ಯವಹಾರಗಳ ಇಲಾಖೆ - ಈ ಐದು ಇಲಾಖೆಗಳಲ್ಲಿ  ಯಾವುದೇ  ಅರ್ಜಿ ಸ್ವೀಕೃತವಾಗಿಲ್ಲ. 

ಬಾಕಿ ಅರ್ಜಿಗಳನ್ನು ಒಂದು ತಿಂಗಳೊಳಗೆ ಇತ್ಯರ್ಥಗೊಳಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅಧಿಕಾರಿಗಳಿಗೆ ಸೂಚಿಸಿದ್ದಾರೆ.

ಇದನ್ನೂ ಓದಿ: "ಮೋದಿ ಅವರೇ, ನಿಮ್ಮ ಹೇಳಿಕೆಗಳು ದೇಶದ ಏಕತೆ ಮತ್ತು ಭದ್ರತೆಗೆ ಬೆದರಿಕೆ ಒಡ್ಡಿರಲಿಲ್ಲವೇ? " 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News