ಕನ್ನಡ ನಾಡಿನ ನೆಮ್ಮದಿ ಕೆಡಿಸುವ ವಿಚಾರದಲ್ಲಿ ನಿರ್ಧಾಕ್ಷಿಣ್ಯ ಕ್ರಮ: ಮುಖ್ಯಮಂತ್ರಿ ಸಿದ್ದರಾಮಯ್ಯ ಎಚ್ಚರಿಕೆ

ರಾಜ್ಯದಲ್ಲಿ ಬಡವರು, ದಲಿತರು, ಹಿಂದುಳಿದವರು ಮತ್ತು ಅಲ್ಪಸಂಖ್ಯಾತರು ಭಯದ ವಾತಾವರಣದಲ್ಲಿ ಬದುಕುವ ಸನ್ನಿವೇಶ ಸೃಷ್ಟಿಯಾಗಿತ್ತು. ಇದನ್ನು ನಮ್ಮ ಸರ್ಕಾರ ಬದಲಾಯಿಸಿ, ಈ ವರ್ಗಗಳ ಜನರಲ್ಲಿ ಸುರಕ್ಷತೆಯ ಭಾವ ಮೂಡಿಸಲು ಕೆಲಸ ಮಾಡಲಿದೆ. ಈಗಾಗಲೇ ಕೆಲಸ ಪ್ರಾರಂಭವಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಿಳಿಸಿದರು.

Written by - Prashobh Devanahalli | Edited by - Manjunath N | Last Updated : Jun 8, 2023, 09:07 PM IST
  • ನಮ್ಮ ಸರ್ಕಾರವು ಜನರ ನಿರೀಕ್ಷೆಗೆ ತಕ್ಕಂತೆ ಕೆಲಸ ಮಾಡಲಿದೆ. ಚುನಾವಣೆ ಸಂದರ್ಭದಲ್ಲಿ ಭರವಸೆ ನೀಡಿದ 5 ಗ್ಯಾರಂಟಿಗಳನ್ನು ಅನುಷ್ಠಾನಗೊಳಿಸಲಾಗುವುದು.
  • ಇದಕ್ಕೆ ವಾರ್ಷಿಕ 59,000 ಕೋಟಿ ರೂ. ಹಣಕಾಸಿನ ಅಗತ್ಯವಿದ್ದು, ಪ್ರಸಕ್ತ ವರ್ಷದ ಬಾಕಿ ಉಳಿದ ತಿಂಗಳುಗಳಿಗೆ 41,000 ಕೋಟಿ ರೂ. ಗಳ ಅಗತ್ಯವಿದೆ ಎಂದು ವಿವರಿಸಿದರು.
  • ರಾಷ್ಟ್ರೀಯ ಶಿಕ್ಷಣ ನೀತಿಯನ್ನು ಮರುಪರಿಶೀಲಿಸಿ, ಹೊಸ ನೀತಿ ಜಾರಿ ಜೊತೆಗೆ ಹಲವು ಜನ ವಿರೋಧಿ ಕಾಯ್ದೆಗಳನ್ನು ರದ್ದುಪಡಿಸಲು ಸರ್ಕಾರ ಕ್ರಮ ಕೈಗೊಳ್ಳಲಿದೆ ಎಂದು ತಿಳಿಸಿದರು.
ಕನ್ನಡ ನಾಡಿನ ನೆಮ್ಮದಿ ಕೆಡಿಸುವ ವಿಚಾರದಲ್ಲಿ ನಿರ್ಧಾಕ್ಷಿಣ್ಯ ಕ್ರಮ: ಮುಖ್ಯಮಂತ್ರಿ ಸಿದ್ದರಾಮಯ್ಯ ಎಚ್ಚರಿಕೆ title=
file photo

ಬೆಂಗಳೂರು:ರಾಜ್ಯದಲ್ಲಿ ಬಡವರು, ದಲಿತರು, ಹಿಂದುಳಿದವರು ಮತ್ತು ಅಲ್ಪಸಂಖ್ಯಾತರು ಭಯದ ವಾತಾವರಣದಲ್ಲಿ ಬದುಕುವ ಸನ್ನಿವೇಶ ಸೃಷ್ಟಿಯಾಗಿತ್ತು. ಇದನ್ನು ನಮ್ಮ ಸರ್ಕಾರ ಬದಲಾಯಿಸಿ, ಈ ವರ್ಗಗಳ ಜನರಲ್ಲಿ ಸುರಕ್ಷತೆಯ ಭಾವ ಮೂಡಿಸಲು ಕೆಲಸ ಮಾಡಲಿದೆ. ಈಗಾಗಲೇ ಕೆಲಸ ಪ್ರಾರಂಭವಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಿಳಿಸಿದರು.

ಅವರು ಇಂದು ತಮ್ಮನ್ನು ಭೇಟಿಯಾದ ಎದ್ದೇಳು ಕರ್ನಾಟಕ ಸಂಘಟನೆಯ ಪ್ರತಿನಿಧಿಗಳೊಂದಿಗೆ ಸಂವಾದ ನಡೆಸಿದರು.

ನಮ್ಮ ಸರ್ಕಾರ ಅಧಿಕಾರಕ್ಕೆ ಬಂದ ಕೂಡಲೇ ಸಮಾಜದಲ್ಲಿ ಭೀತಿಯ ವಾತಾವರಣ ಸೃಷ್ಟಿಸುವವರು, ಸಾಮಾಜಿಕ ಜಾಲತಾಣಗಳ ಮೂಲಕ ಸಾಮರಸ್ಯ ಕದಡುವವರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳುವಂತೆ ಪೊಲೀಸ್‌ ಅಧಿಕಾರಿಗಳಿಗೆ ಕಟ್ಟು ನಿಟ್ಟಿನ ಸೂಚನೆ ನೀಡಿದ್ದೇನೆ. ಇನ್ನು ಮುಂದೆ ರಾಜ್ಯದಲ್ಲಿ ಅನೈತಿಕ ಪೊಲೀಸ್‌ಗಿರಿಗೆ ಅವಕಾಶವಿಲ್ಲ ಎಂದು ತಿಳಿಸಿದರು.

ನಮ್ಮ ಸರ್ಕಾರವು ಜನರ ನಿರೀಕ್ಷೆಗೆ ತಕ್ಕಂತೆ ಕೆಲಸ ಮಾಡಲಿದೆ. ಚುನಾವಣೆ ಸಂದರ್ಭದಲ್ಲಿ ಭರವಸೆ ನೀಡಿದ 5 ಗ್ಯಾರಂಟಿಗಳನ್ನು ಅನುಷ್ಠಾನಗೊಳಿಸಲಾಗುವುದು. ಇದಕ್ಕೆ ವಾರ್ಷಿಕ 59,000 ಕೋಟಿ ರೂ. ಹಣಕಾಸಿನ ಅಗತ್ಯವಿದ್ದು, ಪ್ರಸಕ್ತ ವರ್ಷದ ಬಾಕಿ ಉಳಿದ ತಿಂಗಳುಗಳಿಗೆ 41,000 ಕೋಟಿ ರೂ. ಗಳ ಅಗತ್ಯವಿದೆ ಎಂದು ವಿವರಿಸಿದರು.ರಾಷ್ಟ್ರೀಯ ಶಿಕ್ಷಣ ನೀತಿಯನ್ನು ಮರುಪರಿಶೀಲಿಸಿ, ಹೊಸ ನೀತಿ ಜಾರಿ ಜೊತೆಗೆ ಹಲವು ಜನ ವಿರೋಧಿ ಕಾಯ್ದೆಗಳನ್ನು ರದ್ದುಪಡಿಸಲು ಸರ್ಕಾರ ಕ್ರಮ ಕೈಗೊಳ್ಳಲಿದೆ ಎಂದು ತಿಳಿಸಿದರು.

ನಿಯೋಗದಲ್ಲಿ ಕರ್ನಾಟಕ ಶೋಷಿತ ಸಮುದಾಯಗಳ ಮಹಾ ಒಕ್ಕೂಟದ ಕೆ.ಎಂ.ರಾಮಚಂದ್ರಪ್ಪ, ನೂರ್ ಶ್ರೀಧರ್, ವಿಜಯಮ್ಮ, ಮಲ್ಲಿಗೆ, ಜೆ.ಎಸ್.ಪಾಟೀಲ್, ಯೂಸುಫ್ ಖನ್ನಿ, ತಾರಾರಾವ್ ಸೇರಿದಂತೆ 30 ಕ್ಕೂ ಅಧಿಕ ಮಂದಿ ನಾನಾ ಸಂಘಟನೆಗಳ ಪ್ರತಿನಿಧಿಗಳು ನಿಯೋಗದಲ್ಲಿದ್ದರು.

 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://bit.ly/3LwfnhK 

Instagram Link -  https://bit.ly/3LyfY2l 
Sharechat Link - https://bit.ly/3LCjokI ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

 

Trending News