ಚಿಕ್ಕಲ್ಲೂರು ಜಾತ್ರೆ: ಪ್ರಾಣಿ ಬಲಿ ನಿಷೇಧ ಹಾಗೂ ಟ್ಯಾಟೂ ಹಾಕುವುದು ಬ್ಯಾನ್!!

Chikkalur Jatre: ಜಾತ್ರೆಯ 4ನೇ ದಿನದಂದು ಪಂಕ್ತಿಸೇವೆ ಎಂಬ ವಿಶಿಷ್ಟ ಆಚರಣೆ ನಡೆಯಲಿದ್ದು, ಸಿದ್ದಪ್ಪಾಜಿ, ಮಂಟೇಸ್ವಾಮಿ ದೇವರಿಗೆ ಅನ್ನ, ಮುದ್ದೆ, ಮಾಂಸದ ಭಕ್ಷ್ಯಗಳನ್ನು ಎಡೆ ಇಟ್ಟು ಪೂಜೆ ಸಲ್ಲಿಸಿ ಸಹಪಂಕ್ತಿ ಭೋಜನ ಸವಿಯುವುದೇ ಪಂಕ್ತಿ ಸೇವೆಯಾಗಿದೆ. ​

Written by - Puttaraj K Alur | Last Updated : Jan 13, 2025, 06:20 PM IST
  • ಇಂದಿನಿಂದ ಕೊಳ್ಳೇಗಾಲ ತಾಲೂಕಿನ ಚಿಕ್ಕಲ್ಲೂರು ಜಾತ್ರೆ ಆರಂಭ
  • ಜಾತ್ರೆಯ 4ನೇ ದಿನ ನಡೆಯಲಿರುವ ಪಂಕ್ತಿಸೇವೆ ವಿಶಿಷ್ಟ ಆಚರಣೆ
  • ಹೈಕೋರ್ಟ್ ನಿರ್ದೇಶನದಂತೆ ಪ್ರಾಣಿಬಲಿ & ಟ್ಯಾಟೂ ನಿಷೇಧ
ಚಿಕ್ಕಲ್ಲೂರು ಜಾತ್ರೆ: ಪ್ರಾಣಿ ಬಲಿ ನಿಷೇಧ ಹಾಗೂ ಟ್ಯಾಟೂ ಹಾಕುವುದು ಬ್ಯಾನ್!!  title=
ಚಿಕ್ಕಲ್ಲೂರು ಜಾತ್ರೆ ಆರಂಭ

ಚಾಮರಾಜನಗರ: ರಾಜ್ಯ ಅಷ್ಟೇ ಅಲ್ಲದೇ ಹೊರ ರಾಜ್ಯದವರನ್ನೂ ಸೆಳೆಯುವ ಕೊಳ್ಳೇಗಾಲ ತಾಲೂಕಿನ ಚಿಕ್ಕಲ್ಲೂರು ಜಾತ್ರೆಯು ಇಂದಿನಿಂದ ಅಂದರೆ ಜ.13ರಿಂದ 17ರವರೆಗೆ ನಡೆಯಲಿದ್ದು, ಲಕ್ಷಾಂತರ ಭಕ್ತರ ಆಗಮನಕ್ಕೆ ಸಾಕ್ಷಿಯಾಗಲಿದೆ. ಐದು ದಿನಗಳ ಕಾಲ ನಡೆಯುವ ಈ ಜಾತ್ರೆಯಲ್ಲಿ ಚಂದ್ರಮಂಡಲೋತ್ಸವದಿಂದ ಆರಂಭಗೊಂಡು ಮುತ್ತತ್ತಿರಾಯನ ಸೇವೆಯಲ್ಲಿ ಸಂಪನ್ನವಾಗಲಿದೆ. 

ಜಾತ್ರೆಯ 4ನೇ ದಿನದಂದು ಪಂಕ್ತಿಸೇವೆ ಎಂಬ ವಿಶಿಷ್ಟ ಆಚರಣೆ ನಡೆಯಲಿದ್ದು, ಸಿದ್ದಪ್ಪಾಜಿ, ಮಂಟೇಸ್ವಾಮಿ ದೇವರಿಗೆ ಅನ್ನ, ಮುದ್ದೆ, ಮಾಂಸದ ಭಕ್ಷ್ಯಗಳನ್ನು ಎಡೆ ಇಟ್ಟು ಪೂಜೆ ಸಲ್ಲಿಸಿ ಸಹಪಂಕ್ತಿ ಭೋಜನ ಸವಿಯುವುದೇ ಪಂಕ್ತಿ ಸೇವೆಯಾಗಿದೆ. ಪ್ರತಿಬಾರಿಯೂ ಜಿಲ್ಲಾಡಳಿತ ಮತ್ತು ಭಕ್ತರ ನಡುವೆ ಮಾಂಸಹಾರದ ವಿಚಾರಕ್ಕೆ ಜಟಾಪಟಿ ಇದ್ದೇ ಇರಲಿದೆ.

ಇದನ್ನೂ ಓದಿ144 ವರ್ಷಗಳ ನಂತರ ನಡೆಯುತ್ತಿರುವ ʼಮಹಾ ಕುಂಭಮೇಳʼ ಮೊದಲ ಬಾರಿಗೆ ನಡೆದಿದ್ದು ಯಾವಾಗ? ಇತಿಹಾಸವೇನು?

ಪ್ರಾಣಿವಧೆ ನಿಷೇಧಿಸಿ ಡಿಸಿ ಆದೇಶ

ಈ ಜಾತ್ರೆಯಲ್ಲಿ ʼಕರ್ನಾಟಕ ಪ್ರಾಣಿ ಬಲಿ ಪ್ರತಿಬಂಧಕ ಅಧಿನಿಯಮʼ ಅನ್ವಯ ಜನವರಿ 13ರಿಂದ 17ರ ಮಧ್ಯ ರಾತ್ರಿಯವರೆಗೆ ದೇವರ ಹೆಸರಿನಲ್ಲಿ ಯಾವುದೇ ರೀತಿಯ ಪ್ರಾಣಿಬಲಿ ನೀಡುವುದನ್ನು ಮತ್ತು ಮಾರಕಾಸ್ತ್ರಗಳನ್ನು ತರುವುದನ್ನು ತಡೆಗಟ್ಟಲು ಹಾಗೂ ಇದರೊಂದಿಗೆ ಹೈಕೋರ್ಟ್ ನಿರ್ದೇಶನದಂತೆ ಪ್ರಾಣಿಬಲಿಯನ್ನು ನಿಷೇಧಿಸಲಾಗಿದೆ.

ಜೊತೆಗೆ ಪ್ರಾಣಿ ಬಲಿ ತಡೆಗಟ್ಟುವ ನಿಟ್ಟಿನಲ್ಲಿ ಅಗತ್ಯ ಕ್ರಮ ಕೈಗೊಳ್ಳಲು, ಪ್ರಾಣಿಬಲಿ ನಿಷೇಧದ ಬಗ್ಗೆ ಸಾರ್ವಜನಿಕರಿಗೆ ತಿಳಿವಳಿಕೆ ನೀಡಿ ಕ್ರಮ ಕೈಗೊಳ್ಳುವ ಸಮಯದಲ್ಲಿ ಕಾನೂನು ಮತ್ತು ಸುವ್ಯವಸ್ಥೆಗೆ ಧಕ್ಕೆಯಾಗುವ ಘಟನೆಗಳು ಸಂಭವಿಸಿದರೆ ತಕ್ಷಣ ಆದೇಶಗಳನ್ನು ಮಾಡುವ ಸಲುವಾಗಿ ಕೊಳ್ಳೇಗಾಲ ಉಪವಿಭಾಗಾಧಿಕಾರಿಗಳು, ತಹಶೀಲ್ದಾರ್ ಅವರೊಂದಿಗೆ ಇನ್ನಿತರ ಅಧಿಕಾರಿಗಳನ್ನು ಹೆಚ್ಚುವರಿ ಸೆಕ್ಟರ್ ಅಧಿಕಾರಿಗಳನ್ನು ವಿವಿಧ ಪ್ರದೇಶ ಸ್ಥಳಗಳಿಗೆ ನಿಯೋಜಿಸಿ ಜಿಲ್ಲಾಧಿಕಾರಿ ಶಿಲ್ಪಾನಾಗ್ ಆದೇಶಿಸಿದ್ದಾರೆ.

ಚಿಕ್ಕಲ್ಲೂರು ಹೊಸಮಠದ ಸುತ್ತಮುತ್ತಲಿನ ಪ್ರದೇಶ, ಹಳೆಮಠದ ಸುತ್ತಮುತ್ತಲಿನ ಪ್ರದೇಶ, ಸಿದ್ದಾಪ್ಪಾಜಿ ದೇವಸ್ಥಾನದ ಸುತ್ತಮುತ್ತಲಿನ ಪ್ರದೇಶ, ಕೊತ್ತನೂರು, ಬಾಣೂರು, ಸುಂಡಳ್ಳಿ ಗ್ರಾಮಗಳ ಸುತ್ತಮುತ್ತಲ ಪ್ರದೇಶ,  ರಾಚಪ್ಪಾಜಿ ನಗರ ಬಂಡಳ್ಳಿ ರಸ್ತೆ ಮಾರ್ಗದ ಸುತ್ತಮುತ್ತಲ ಪ್ರದೇಶದಲ್ಲಿ ಮೂರು ಪಾಳಿಯಲ್ಲಿ ಕೆಲಸ ನಿರ್ವಹಿಸಲು ಸೆಕ್ಟರ್ ಅಧಿಕಾರಿಗಳನ್ನು ನೇಮಕ ಮಾಡಲಾಗಿದೆ.

ಇದನ್ನೂ ಓದಿ: ಫೈನಾನ್ಸ್‌ ಕಿರುಕುಳಕ್ಕೆ ಊರೇ ಬಿಟ್ಟ ನೂರಾರು ಕುಟುಂಬ; ಫೈನಾನ್ಸ್‌ ಕಿರುಕುಳಕ್ಕೆ ಮಹಿಳೆ ಆತ್ಮಹತ್ಯೆ

ಚರ್ಮ ರೋಗ ಭೀತಿ-ಟ್ಯಾಟೂ ಹಾಕಲು ನಿಷೇಧ!

ಜಾತ್ರೆ ಎಂದರೆ ಹಚ್ಚೆ ಹಾಕಿಸಿಕೊಳ್ಳುವುದು ಸಾಮಾನ್ಯವಾದ್ದರಿಂದ ಆರೋಗ್ಯ ಇಲಾಖೆಯು ಮುನ್ನೆಚ್ಚರಿಕೆ ಕ್ರಮವಾಗಿ ಜಾತ್ರೆಯಲ್ಲಿ ಹಚ್ಚೆ ಹಾಕುವುದನ್ನು ನಿಷೇಧಿಸುವಂತೆ ಡಿಸಿಗೆ ಕೋರಿದ ಹಿನ್ನೆಲೆ ಜಾತ್ರೆಯಲ್ಲಿ ಈ ಬಾರಿ ಹಚ್ಚೆ ಹಾಕುವುದಕ್ಕೆ ನಿಷೇಧ ಹೇರಲಾಗಿದೆ. ಟ್ಯಾಟು ಹಾಕಲು ಒಂದೇ ಸೂಜಿ ಬಳಸುವುದರಿಂದ ಚರ್ಮರೋಗ ಸೇರಿದಂತೆ ಬೇರೆ ರೋಗಗಳು ಹರಡುವ ಸಾಧ್ಯತೆ ಇರುವುದರಿಂದ ಜಾತ್ರೆಯಲ್ಲಿ ಟ್ಯಾಟು ಹಾಕುವುದನ್ನು ಸಂಪೂರ್ಣವಾಗಿ ನಿಷೇಧಿಸಿ ಡಿಸಿ ಶಿಲ್ಪಾನಾಗ್ ಆದೇಶಿಸಿದ್ದಾರೆ.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://tinyurl.com/7jmvv2nz

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್.

Trending News