ಬೆಂಗಳೂರು: ಆನೆ ದಂತ(Elephant Tusks)ಗಳನ್ನು ಮಾರಾಟ ಮಾಡಲು ಯತ್ನಿಸುತ್ತಿದ್ದ ಮೂವರು ಆರೋಪಿಗಳನ್ನು ಬಂಧಿಸಲಾಗಿದೆ. ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ಬೆಂಗಳೂರಿನ ಸಿ.ಕೆ.ಅಚ್ಚುಕಟ್ಟು ಪೊಲೀಸರು ಹಾಸನ ಮೂಲದ ಚಂದ್ರೇಗೌಡ(46), ಹಾವೇರಿ ಮೂಲದ ಸೋಮಲಿಂಗಪ್ಪ(41) ಮತ್ತು ಪ್ರವೀಣ್ ಗುಳೇದ್(24) ಎಂಬುವವರನ್ನು ಬಂಧಿಸಿದ್ದಾರೆ.
ಇದನ್ನೂ ಓದಿ: ಹೋಳಿ ಆಡುವ ನೆಪದಲ್ಲಿ ವಸೂಲಿ ಧಂದೆ: ಹಣ ಕೊಡದಿದ್ರೆ ಹಲ್ಲೆ
ಬಂಧಿತ ಆರೋಪಿಗಳು ಬನಶಂಕರಿ ಬಳಿ ಇರುವ ಶಾಲೆಯೊಂದರ ಬಳಿ ಕೋಟ್ಯಂತರ ರೂ. ಬೆಲೆ ಬಾಳುವ 2 ಆನೆ ದಂತ(Elephant Tusks)ಗಳನ್ನು ಮಾರಾಟ ಮಾಡಲು ಯತ್ನಿಸುತ್ತಿದ್ದರು. ಈ ಬಗ್ಗೆ ಖಚಿತ ಮಾಹಿತಿ ಹೊಂದಿದ್ದ ಸಿ.ಕೆ.ಅಚ್ಚುಕಟ್ಟು ಪೊಲೀಸರು(CK Achukattu Police) ಸರಿಯಾದ ಸಮಯಕ್ಕೆ ದಾಳಿ ನಡೆಸಿ ಮಾಲು ಸಮೇತ ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಆರೋಪಿಗಳ ಬಳಿ ಇದ್ದ 29 ಕೆ.ಜಿ ತೂಕದ 2 ಆನೆ ದಂತ(Elephant Ivory)ಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಈ ಬಗ್ಗೆ ಆರೋಪಿಗಳ ವಿಚಾರಣೆ ನಡೆಸಲಾಗುತ್ತಿದೆ. ವನ್ಯಜೀವಿ ಸಂರಕ್ಷಣಾ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದ್ದು, ತನಿಖೆ ಮುಂದುವರೆದಿದೆ.
ಇದನ್ನೂ ಓದಿ: 'ಜೇಮ್ಸ್' ನೋಡುತ್ತಲೇ ಪ್ರಾಣ ಬಿಟ್ಟ ಅಪ್ಪು ಅಭಿಮಾನಿ!
ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.