ಭೂ ಒತ್ತುವರಿ ತೆರವು; ಶಿಕ್ಷೆಗೆ ಆದೇಶ

ಕರ್ನಾಟಕ ಭೂ ಕಬಳಿಕೆ ನಿಷೇಧ ವಿಶೇಷ ನ್ಯಾಯಾಲವು 2024ರ ಜುಲೈ ತಿಂಗಳಿನಲ್ಲಿ ಪ್ರತ್ಯೇಕ ಪ್ರಕರಣಗಳಲ್ಲಿ ಶಿಕ್ಷೆ ಮತ್ತು ಭೂ ಕಬಳಿಕೆಯಾದ ಜಮೀನನ್ನು ಸರ್ಕಾರಕ್ಕೆ ವಾಪಸ್ಸು ಪಡೆಯಲು ಅದೇಶ ನೀಡಿರುತ್ತದೆ.

Written by - Manjunath N | Last Updated : Aug 13, 2024, 06:11 PM IST
  • ತನಿಖೆಯನ್ನು ಪೂರ್ಣಗೊಳಿಸಿ ಆರೋಪಿತರ ವಿರುದ್ಧ ಕ.ಭೂ.ಕಂ. ಅಧಿನಿಯಮದಡಿ ಜೆ.ಎಂ.ಎಫ್.ಸಿ. ನ್ಯಾಯಾಲಯಕ್ಕೆ ದೋಷಾರೋಪಣಾ ಪತ್ರ ಸಲ್ಲಿಸಿದ್ದರು.
  • 60 ದಿನಗಳ ಒಳಗಾಗಿ ನ್ಯಾಯಾಲಯಕ್ಕೆ ವರದಿ ಸಲ್ಲಿಸುವಂತೆ ಶಿಕಾರಿಪುರ ತಹಶೀಲ್ದಾರ್‌ರವರಿಗೆ ನೀರ್ದೇಶಿಸಿ ತೀರ್ಪು ನೀಡಿದೆ.
ಭೂ ಒತ್ತುವರಿ ತೆರವು; ಶಿಕ್ಷೆಗೆ ಆದೇಶ title=

ಶಿವಮೊಗ್ಗ : ಕರ್ನಾಟಕ ಭೂ ಕಬಳಿಕೆ ನಿಷೇಧ ವಿಶೇಷ ನ್ಯಾಯಾಲವು 2024ರ ಜುಲೈ ತಿಂಗಳಿನಲ್ಲಿ ಪ್ರತ್ಯೇಕ ಪ್ರಕರಣಗಳಲ್ಲಿ ಶಿಕ್ಷೆ ಮತ್ತು ಭೂ ಕಬಳಿಕೆಯಾದ ಜಮೀನನ್ನು ಸರ್ಕಾರಕ್ಕೆ ವಾಪಸ್ಸು ಪಡೆಯಲು ಅದೇಶ ನೀಡಿರುತ್ತದೆ.

ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ತಾಲೂಕು ಭದ್ರಾಪುರ ಗ್ರಾಮದ ಸರ್ವೆ ನಂ. 19ರ ಸರ್ಕಾರಿ ಜಮೀನಿನನ್ನು ಅದೇ ಗ್ರಾಮದ ಚನ್ನಯ್ಯ ಬಿನ್ ವೀರಯ್ಯ ಎಂಬುವವರು 25 ಗುಂಟೆ ಜಮೀನು ಹಾಗೂ ಬಸಪ್ಪ ಬಿನ್ ಲೇಟ್ ಅಯ್ಯಣ್ಣ ಎಂಬುವವರು 36 ಗುಂಟೆ ಜಮೀನನ್ನು ಒತ್ತುವರಿ ಮಾಡಿಕೊಂಡಿರುತ್ತಾರೆ ಎಂಬ ಗ್ರಾಮಸ್ಥರ ದೂರಿನನ್ವಯ ಶಿಕಾರಿಪುರ ತಹಶೀಲ್ದಾರ್ ನೀಡಿ ದೂರನ್ನು ಪರಿಗಣಿಸಿ ಶಿಕಾರಿಪುರ ಟೌನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡು ತನಿಖೆಯನ್ನು ಪೂರ್ಣಗೊಳಿಸಿ ಆರೋಪಿತರ ವಿರುದ್ಧ ಕ.ಭೂ.ಕಂ. ಅಧಿನಿಯಮದಡಿ ಜೆ.ಎಂ.ಎಫ್.ಸಿ. ನ್ಯಾಯಾಲಯಕ್ಕೆ ದೋಷಾರೋಪಣಾ ಪತ್ರ ಸಲ್ಲಿಸಿದ್ದರು.

ಇದನ್ನೂ ಓದಿ: ಪ್ರಾಚೀನ ಕಾಲದಲ್ಲಿ 100 ವರ್ಷ ಬದುಕಲು ಈ ಸಮಯದಲ್ಲಿ ಆಹಾರ ಸೇವಿಸುತ್ತಿದ್ದರು..! ಈ ಆಹಾರದ ರಹಸ್ಯದ ಬಗ್ಗೆ ನೀವು ಕೇಳಿದ್ದಿರಾ?

ಈ ಪ್ರಕರಣವನ್ನು ಕರ್ನಾಟಕ ಭೂ ಕಬಳಿಕೆ ನಿಷೇಧ ವಿಶೇಷ ನ್ಯಾಯಾಲಯವು ಸ್ವೀಕರಿಸಿ ಸಂಪೂರ್ಣ ಸಾಕ್ಷ್ಯ ವಿಚಾರಣೆಯನ್ನು ನಡೆಸಿದ ನಂತರ ಆರೋಪಿತರು ಸರ್ಕಾರಿ ಜಮೀನನ್ನು ಭೂ ಕಬಳಿಕೆ ಮಾಡಿರುವುದು ಸಾಬೀತಾದ ಕಾರಣ ಆರೋಪಿತರಿಗೆ 01 ವರ್ಷ ಸಾದಾ ಶಿಕ್ಷೆ ಮತ್ತು 5,000/-ರೂ. ದಂಡವನ್ನು ವಿಧಿಸಿ, ದಂಡ ಪಾವತಿಸಲು ತಪ್ಪಿದ್ದಲ್ಲಿ 3 ತಿಂಗಳ ಸಾದಾ ಶಿಕ್ಷೆಯನ್ನು 2ನೇ ವಿಶೇಷ ನ್ಯಾಯಾಲಯದ ಸದಸ್ಯರಾದ ಕೆ.ಹೆಚ್. ಅಶ್ವತ್ಥ ನಾರಾಯಣಗೌಡ ಪೀಠವು ಜು.25 ರಂದು ತೀರ್ಪು ನೀಡಿದೆ.

ಆರೋಪಿತರು ಒತ್ತುವರಿ ಮಾಡಿಕೊಂಡ ಸರ್ಕಾರಿ ಜಮೀನನ್ನು ಕೂಡಲೇ ತೆರವುಗೊಳಿಸಿ ಸರ್ಕಾರದ ವಶಕ್ಕೆ ಪಡೆಯುವಂತೆ ಆದೇಶಿಸಿ, 60 ದಿನಗಳ ಒಳಗಾಗಿ ನ್ಯಾಯಾಲಯಕ್ಕೆ ವರದಿ ಸಲ್ಲಿಸುವಂತೆ ಶಿಕಾರಿಪುರ ತಹಶೀಲ್ದಾರ್‌ರವರಿಗೆ ನೀರ್ದೇಶಿಸಿ ತೀರ್ಪು ನೀಡಿದೆ.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://tinyurl.com/7jmvv2nz

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

 

Trending News